World Cup 2023: ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯ ನಡೆಯೋದೇ ಡೌಟ್..! ಇಲ್ಲಿದೆ ನೋಡಿ ಅಪ್ಡೇಟ್
ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಜಗತ್ತಿನ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಸುಮಾರು 1.32 ಲಕ್ಷ ಮಂದಿ ಏಕಕಾಲದಲ್ಲಿ ಪಂದ್ಯ ವೀಕ್ಷಿಸುವ ಸಾಮರ್ಥ್ಯವನ್ನು ಈ ಸ್ಟೇಡಿಯಂ ಹೊಂದಿದೆ. ಈಗಾಗಲೇ ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.

ಅಹಮದಾಬಾದ್(ಅ.13): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಈ ಪಂದ್ಯ ನಡೆಯೋದೆ ಡೌಟ್ ಎನ್ನುವಂತಹ ಮಾತುಗಳು ಕೇಳಿ ಬರಲಾರಂಭಿಸಿವೆ.
ಹೌದು, ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿರುವ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಗುಜರಾತ್‌ನ ಕೆಲ ಭಾಗಗಳಲ್ಲಿ ಹಾಗೂ ಅಹಮದಾಬಾದ್‌ನಲ್ಲಿ ಅ.14 ಮತ್ತು 15ರಂದು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಿದೆ. ಗುಜರಾತ್‌ನ ಇತರ ಭಾಗಗಳಲ್ಲಿ ಮುಂದಿನ 5 ದಿನ ವಾತಾವರಣ ತಿಳಿಯಾಗಿರಲಿದ್ದು, ಅಹಮದಾಬಾದ್‌ನಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ.
ICC World Cup 2023: ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿ ಕಿವೀಸ್..!
ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಜಗತ್ತಿನ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಸುಮಾರು 1.32 ಲಕ್ಷ ಮಂದಿ ಏಕಕಾಲದಲ್ಲಿ ಪಂದ್ಯ ವೀಕ್ಷಿಸುವ ಸಾಮರ್ಥ್ಯವನ್ನು ಈ ಸ್ಟೇಡಿಯಂ ಹೊಂದಿದೆ. ಈಗಾಗಲೇ ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.
ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು 7 ಬಾರಿ ಮುಖಾಮುಖಿಯಾಗಿವೆ. 7 ಬಾರಿಯೂ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಬದ್ದ ಎದುರಾಳಿ ಪಾಕಿಸ್ತಾನ ಎದುರು ಟೀಂ ಇಂಡಿಯಾ ಗೆಲುವಿನ ಕೇಕೆ ಹಾಕಿದೆ. ಇದೀಗ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ.
DDCA ಅಟೆಂಟರ್‌ಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಟೀಂ ಇಂಡಿಯಾ..! ಮತ್ತೆ ಫ್ಯಾನ್ಸ್ ಹೃದಯ ಗೆದ್ದ ಭಾರತ
ಸದ್ಯ ಪ್ರಸಕ್ತ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ತಲಾ ಎರಡು ಪಂದ್ಯಗಳನ್ನು ಆಡಿದ್ದು, ಉಭಯ ತಂಡಗಳು ಗೆಲುವಿನ ನಗೆ ಬೀರಿವೆ. ಸದ್ಯ ನೆಟ್ ರನ್‌ರೇಟ್ ಆಧಾರದಲ್ಲಿ ಭಾರತ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡವು 4ನೇ ಸ್ಥಾನದಲ್ಲಿದೆ. ಇದೀಗ ಹೈವೋಲ್ಟೇಜ್ ಪಂದ್ಯ ಗೆದ್ದು, ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಲೆಕ್ಕಾಚಾರದಲ್ಲಿವೆ, ಉಭಯ ತಂಡಗಳು.