ಕ್ವಾರಂಟೈನ್‌ನಲ್ಲಿರುವ ವಿರಾಟ್ ಕೊಹ್ಲಿ ಸಿಕ್ಕಾಪಟ್ಟೆ ಬ್ಯುಸಿಯಂತೆ..!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸೀಸ್ ಪ್ರವಾಸದಲ್ಲಿದ್ದು, ಸದ್ಯ ಕ್ವಾರಂಟೈನ್‌ನಲ್ಲಿ ಅಭ್ಯಾಸದ ಜತೆಗೆ ಈ ವಿಚಾರವಾಗಿ ಬ್ಯುಸಿಯಾಗಿದ್ದಾರೆ. ಏನದು ಹೊಸ ವಿಚಾರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಸಿಡ್ನಿ(ನ.17): ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ಕ್ವಾರಂಟೈನ್‌ನಲ್ಲಿದೆ. ನವೆಂಬರ್ 27ರಿಂದ ಆರಂಭವಾಗಲಿರುವ ಸುದೀರ್ಘ ಸರಣಿಗೆ ಟೀಂ ಇಂಡಿಯಾ ಸಜ್ಜಾಗುತ್ತಿದೆ.
ಹೀಗಿರುವಾಗಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ವಾರಂಟೈನ್ ಅವಧಿಯಲ್ಲಿ ಮೈದಾನದಲ್ಲಿ ಟ್ರೈನಿಂಗ್ ನಡೆಸುತ್ತಿರುವುದರ ಹೊರತಾಗಿ ತಾವೆಷ್ಟು ಬ್ಯುಸಿಯಾಗಿರುವುದಾಗಿ ಸಾಮಾಜಿಕ ಜಾಲತಾಣವಾದ ಟ್ವಿಟರ್ ಮೂಲಕ ತಿಳಿಸಿದ್ದಾರೆ. ಕ್ವಾರಂಟೈನ್ ಕಾಲದಲ್ಲಿ ಐರನ್ ಮಾಡದ ಟಿ ಶರ್ಟ್ ತೊಟ್ಟು, ಆರಾಮಾವಾಗಿ ಕುಳಿತುಕೊಂಡು ಒಳ್ಳೆಯ ಸೀರಿಸ್‌ಗಳನ್ನು ನೋಡುತ್ತಿರುವುದಾಗಿ ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 3 ಏಕದಿನ ನಂತರ 3 ಟಿ20 ಪಂದ್ಯಗಳ ಸರಣಿಯಾಡಲಿದೆ. ಇದಾದ ಬಳಿಕ 4 ಪಂದ್ಯಗಳ ಬಾರ್ಡರ್-ಗವಾಸ್ಕರ ಟೆಸ್ಟ್ ಸರಣಿಯಾಡಲಿದೆ. ಈ ಪೈಕಿ ಅಡಿಲೇಡ್‌ನಲ್ಲಿ ನಡೆಯಲಿರುವ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯದ ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿ ಪಿತೃತ್ವದ ರಜೆಯ ಮೇರೆಗೆ ತವರಿಗೆ ಮರಳಲಿದ್ದಾರೆ.
ಯುಎಇ ಕ್ರಿಕೆಟ್ ಮಂಡಳಿಗೆ ಬಿಸಿಸಿಐನಿಂದ 100 ಕೋಟಿ!
ಆಸೀಸ್ ಪ್ರವಾಸಕ್ಕೂ ಮುನ್ನ ವಿರಾಟ್ ಕೊಹ್ಲಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಯುಎಇಗೆ ತೆರಳಿದ್ದರು. ಬರೋಬ್ಬರಿ 3 ವರ್ಷಗಳ ಬಳಿಕ ಪ್ಲೇ ಆಫ್ ಪ್ರವೇಶಿಸಿದ್ದ ವಿರಾಟ್ ಕೊಹ್ಲಿ ನೇತೇತ್ವದ ಟೀಂ ಇಂಡಿಯಾ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಮುಗ್ಗರಿಸಿ ಟೂರ್ನಿಯಿಂದ ಹೊರಬಿದ್ದಿತ್ತು.
13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ರನ್‌ಗಳಿಸಲು ವಿಫಲವಾಗಿದ್ದ ವಿರಾಟ್ ಕೊಹ್ಲಿ, ಆ ಬಳಿಕ ಬ್ಯಾಟಿಂಗ್ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದರು. ಅಂತಿಮವಾಗಿ ವಿರಾಟ್ ಕೊಹ್ಲಿ 15 ಪಂದ್ಯಗಳಲ್ಲಿ 42.36ರ ಸರಾಸರಿಯಲ್ಲಿ 3 ಅರ್ಧಶತಕ ಸಹಿತ 466 ರನ್ ಬಾರಿಸಿ ಗಮನ ಸೆಳೆದಿದ್ದರು.