ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ನಡೆಯುತ್ತಿರುವ ಆರ್​ಸಿಬಿ - ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್‌ ಟಿ-20 ಪಂದ್ಯದ  ಹಿನ್ನೆಲೆಯಲ್ಲಿ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ವಾಹನ ಸಂಚಾರ ಮಾರ್ಗ ಬದಲಿಸಲಾಗಿದೆ.

ಬೆಂಗಳೂರು (ಏ.09): ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ (ಏ. 10ರ ಸೋಮವಾರ)ರಂದು ನಡೆಯುತ್ತಿರುವ ಆರ್​ಸಿಬಿ - ಲಕ್ನೋ ಸೂಪರ್ ಜೈಂಟ್ಸ್ ಕ್ರಿಕೆಟ್‌ ಪಂದ್ಯಾವಳಿ ಹಿನ್ನೆಲೆಯಲ್ಲಿ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ವಾಹನ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. 

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ)ಯ ಮೂರನೇ ಐಪಿಎಲ್‌ ಕ್ರಿಕೆಟ್‌ ಪಂದ್ಯವು ನಾಳೆ ತವರು ಮೈದಾನವಾದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪಂದ್ಯಕ್ಕೆ ರಾಜ್ಯಾದ್ಯಂತ ಹೆಚ್ಚಿನ ಕ್ರೀಡಾಭಿಮಾನಿಗಳು ಪಂದ್ಯ ವೀಕ್ಷಣೆಗೆ ಆಗಮಿಸಲಿದ್ದಾರೆ. ಆದ್ದರಿಂದ ಪಂದ್ಯ ವೀಕ್ಷಣೆಗೆ ಬರುವ ಅಭಿಮಾನಿಗಳು ಮೈದಾನದೊಳಗೆ ಹೋಗಲು ಅನುಕೂಲ ಆಗವಂತೆ ರಸ್ತೆಯನ್ನು ವ್ಯವಸ್ಥೆ ಮಾಡಲಾಗಿದೆ. ಆದರ, ಈ ರಸ್ತೆಗಳಲ್ಲಿ ಸಾರ್ವಜನಿಕರ ಸಾಮಾನ್ಯ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಲಿದೆ. ಆದ್ದರಿಂದ ಆರ್‌ಸಿಬಿ- ಲಕ್ನೋ ಪಂದ್ಯದ ಹಿನ್ನೆಲೆಯಲ್ಲಿ ವಾಹನ ಸಂಚಾರ ಮಾರ್ಗವನ್ನು ಬೆಂಗಳೂರು ಸಂಚಾರಿ ಪೊಲೀಸರು ಬದಲಾವಣೆ ಮಾಡಿ ಆದೇಶಿದ್ದಾರೆ.

ಸಿಟ್ಟಿನಿಂದ ಬ್ಯಾಟ್ ಎಸೆದು ಒಂದು ಮಾತು ಹೇಳಿದ್ದ ಕೊಹ್ಲಿ ,ಆರ್‌ಸಿಬಿ ಹಳೇ ನೆನಪು ಬಿಚ್ಚಿಟ್ಟ ಕೈಫ್!

ಸಂಜೆ 4 ರಿಂದ ರಾತ್ರಿ 10ರವರೆಗೆ ನಿರ್ಬಂಧ: ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕಾಗಿ ನಗರ ಸಂಚಾರ ಪೊಲೀಸ್ ಇಲಾಖೆಯು ಚಿನ್ನಸ್ವಾಮಿ ಮೈದಾನದ ಸುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ಸಂಚಾರ ಮಾಡಲು ಅನುಕೂಲ ಮಾಡಿಕೊಟ್ಟಿದೆ. ಮಾರ್ಗ ಬದಲಾವಣೆಯು ನಾಳೆ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಇರುತ್ತದೆ. ಪಂದ್ಯ ಮುಕ್ತಾಯದ ನಂತರ ಎಂದಿನಂತೆ ಎಲ್ಲ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಮುಕ್ತ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. 

ಯಾವ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ: ಎಂ.ಜಿ ರೋಡ್, ಕ್ವೀನ್ಸ್ ರೋಡ್, ಎಂಜಿ ರೋಡ್​ನಿಂದ ಕಬ್ಬನ್ ರೋಡ್, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರೋಡ್, ಕಬ್ಬನ್ ರೋಡ್, ಸೆಂಟ್ ಮಾರ್ಕ್ಸ್ ರೋಡ್, ಮ್ಯೂಸಿಯಂ ರೋಡ್, ಕಸ್ತುರ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ಸರ್ಕಲ್, ಲ್ಯಾವೆಲ್ಲೆ ರೋಡ್, ವಿಠಲ್ ಮಲ್ಯ ರೋಡ್, ನೃತತುಂಗ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ರಸ್ತೆಗಳಲ್ಲಿ ಸಂಚಾರ ಮಾಡುವ ಎಲ್ಲ ವಾಹನ ಸವಾರರು ನಾಳೆ ಪಂದ್ಯ ನಡೆಯುವ ವೇಳೆ ಬದಲಿ ಮಾರ್ಗಗಳಲ್ಲಿ ಸಂಚಾರ ಮಾಡಬೇಕು ಎಂದು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ. 

IPL 2023: KKR ಎದುರಿನ ಸೋಲಿನ ಬೆನ್ನಲ್ಲೇ RCBಗೆ ಮತ್ತೊಂದು ಶಾಕ್‌; ತಾರಾ ವಿದೇಶಿ ಆಟಗಾರ ಟೂರ್ನಿಯಿಂದಲೇ ಔಟ್..!

ಎಲ್ಲೆಲ್ಲಿ ವಾಹನ ಪಾರ್ಕಿಂಗ್: ಚಿನ್ನಸ್ವಾಮಿ ಮೈದಾನದ ಸುತ್ತಲಿನ ಪ್ರದೇಶಗಳಲ್ಲಿ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಕಿಂಗ್ಸ್ ರಸ್ತೆ, ಬಿಆರ್​ಬಿ ಮೈದಾನ, ಕಂಠೀರವ ಕ್ರೀಡಾಂಗಣ, ಯುಬಿ ಸಿಟಿ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ, ಹಳೆಯ ಕೆಜಿಯುಡಿ ಕಟ್ಟಡ ಸಮೀಪ ವಾಹನಗಳನ್ನು ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಬೇರೆಡೆ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧ ಮಾಡಲಾಗಿದ್ದು, ಸಂಚಾರಿ ನಿಯಮಗಳನ್ನು ಪಾಲಸುವಂತೆ ವಾಹನ ಸವಾರರಲ್ಲಿ ಸಂಚಾರ ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.