ಇಂಗ್ಲೆಂಡ್‌ ಎದುರಿನ ಧರ್ಮಶಾಲಾ ಟೆಸ್ಟ್‌ಗೆ ಟೀಂ ಇಂಡಿಯಾದಲ್ಲಿ ಎರಡು ಮೇಜರ್ ಚೇಂಜ್‌..?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಕೊನೆಯ ಹಾಗೂ ಐದನೇ ಟೆಸ್ಟ್ ಪಂದ್ಯವು ಮಾರ್ಚ್ 07ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿದೆ. ಇದೀಗ ವರ್ಕ್‌ಲೋಡ್‌ ಮ್ಯಾನೇಜ್ ಮಾಡುವ ಉದ್ದೇಶದಿಂದ ಟೀಂ ಇಂಡಿಯಾ, ಭಾರತದ ಇಬ್ಬರು ಪ್ರಮುಖ ಆಟಗಾರರಲ್ಲಿ ಒಬ್ಬ ಬ್ಯಾಟರ್ ಹಾಗೂ ಒಬ್ಬ ಬೌಲರ್‌ಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದೆ ಎಂದು ಕ್ರಿಕೆಟ್ ವೆಬ್‌ಸೈಟ್ Cricbuzz ವರದಿ ಮಾಡಿದೆ. 

Two India Stars To Be Rested For 5th Test Against England Says report kvn

ರಾಂಚಿ(ಫೆ.28): ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇದೀಗ ಮೊದಲ 4 ಪಂದ್ಯಗಳು ಮುಕ್ತಾಯವಾಗಿದ್ದು, ಒಂದು ಪಂದ್ಯ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದೆ. ಹೀಗಿರುವಾಗಲೇ ಟೀಂ ಇಂಡಿಯಾ, ಇಂಗ್ಲೆಂಡ್ ಎದುರಿನ ಕೊನೆಯ ಟೆಸ್ಟ್‌ ಪಂದ್ಯದಿಂದ ಇಬ್ಬರು ಆಟಗಾರರಿಗೆ ವಿಶ್ರಾಂತಿ ನೀಡಲು ಟೀಂ ಮ್ಯಾನೇಜ್‌ಮೆಂಟ್‌ ತೀರ್ಮಾನಿಸಿದೆ ಎಂದು ವರದಿಯಾಗಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಕೊನೆಯ ಹಾಗೂ ಐದನೇ ಟೆಸ್ಟ್ ಪಂದ್ಯವು ಮಾರ್ಚ್ 07ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿದೆ. ಇದೀಗ ವರ್ಕ್‌ಲೋಡ್‌ ಮ್ಯಾನೇಜ್ ಮಾಡುವ ಉದ್ದೇಶದಿಂದ ಟೀಂ ಇಂಡಿಯಾ, ಭಾರತದ ಇಬ್ಬರು ಪ್ರಮುಖ ಆಟಗಾರರಲ್ಲಿ ಒಬ್ಬ ಬ್ಯಾಟರ್ ಹಾಗೂ ಒಬ್ಬ ಬೌಲರ್‌ಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದೆ ಎಂದು ಕ್ರಿಕೆಟ್ ವೆಬ್‌ಸೈಟ್ Cricbuzz ವರದಿ ಮಾಡಿದೆ. 

'ನಾನು ಈ ದುಬಾರಿ ಕಾರು ಕೊಳ್ಳುತ್ತೇನೆ ನೋಡ್ತಾ ಇರಿ..': ರೋಹಿತ್ ಶರ್ಮಾ ಪ್ರತಿಜ್ಞೆ ಸ್ಮರಿಸಿಕೊಂಡ ಬಾಲ್ಯದ ಕೋಚ್

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ರಾಂಚಿ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ ಎದುರು 5 ವಿಕೆಟ್ ಜಯ ಸಾಧಿಸಿತ್ತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 3-1ರ ಮುನ್ನಡೆ ಸಾಧಿಸಿದೆ. ಆದರೆ ಟೀಂ ಮ್ಯಾನೇಜ್‌ಮೆಂಟ್ ಯಾವ ಆಟಗಾರರಿಗೆ ವಿಶ್ರಾಂತಿ ನೀಡಲು ನಿರ್ಧರಿಸಿದೆ ಎನ್ನುವುದು ಬಹಿರಂಗ ಪಡಿಸಿಲ್ಲ. ಇನ್ನು ರಾಂಚಿ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ, ಕೊನೆಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.    

ಗಾಯದ ನಡುವೆಯೇ ವಿಶ್ವಕಪ್‌ ಆಡಿದ್ದ ವೇಗಿ ಶಮಿಗೆ ಲಂಡನ್‌ನಲ್ಲಿ ಮೊಣಕಾಲಿನ ಸರ್ಜರಿ

ನವದೆಹಲಿ: ಭಾರತದ ತಾರಾ ವೇಗಿ ಮೊಹಮದ್‌ ಶಮಿ ಸೋಮವಾರ ಲಂಡನ್‌ನಲ್ಲಿ ಎಡಗಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂಬರುವ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ.ಅವರು ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲೂ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ.

IPL 2024 ಮುಂಬೈ ಇಂಡಿಯನ್ಸ್ ಪರ ಅತಿಹೆಚ್ಚು ಸಂಭಾವನೆ ಪಡೆಯುತ್ತಿರುವ ಆಟಗಾರರಿವರು..!

33 ವರ್ಷದ ಶಮಿ ಕಳೆದ ವರ್ಷ ನ.19ರಂದು ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್‌ ಫೈನಲ್‌ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಶಮಿ ಆದಷ್ಟು ಬೇಗ ಚೇತರಿಕೆ ಕಂಡು, ಟೀಂ ಇಂಡಿಯಾಗೆ ವಾಪಸಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟರ್‌ನಲ್ಲಿ ಹಾರೈಸಿದ್ದಾರೆ.
 

Latest Videos
Follow Us:
Download App:
  • android
  • ios