ಅಂಡರ್ 19 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲು ವೇದಿಕೆ ರೆಡಿಯಾಗಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..
ಬೆನೊನಿ(ಫೆ.01): ಅಂಡರ್-19 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಭಾರತಕ್ಕೆ ಬದ್ಧವೈರಿ ಪಾಕಿಸ್ತಾನ ಎದುರಾಗಲಿದೆ. ಫೆ.4ರಂದು ಪೊಚೆಫ್ ಸ್ಟ್ರೋಮ್‌ನಲ್ಲಿ ಮುಖಾಮುಖಿಯಾಗಲಿವೆ.
ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ, ಆಫ್ಘಾನಿಸ್ತಾನ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿತು. ಭಾರತ ಕ್ವಾರ್ಟರ್ ಫೈನಲ್‌ನಲ್ಲಿ ಆಸ್ಪ್ರೇಲಿಯಾವನ್ನು ಸೋಲಿಸಿ ಸೆಮೀಸ್‌ಗೇರಿತ್ತು. ಇದೀಗ ಹಾಲಿಚಾಂಪಿಯನ್ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾದಾಟ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿದೆ.
ಶುಕ್ರವಾರ ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ 49.1 ಓವರಲ್ಲಿ 189 ರನ್‌ಗೆ ಆಲೌಟ್ ಆಯಿತು. ಪಾಕಿಸ್ತಾನ 41.1 ಓವರಲ್ಲಿ 4 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು.
ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.
ಸ್ಕೋರ್: ಆಫ್ಘನ್ 189
ಪಾಕಿಸ್ತಾನ 190/4
