ನವದೆಹಲಿ(ನ.02): 1983ರ ವಿಶ್ವಕಪ್ ವಿಜೇತ ನಾಯಕ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಆರೋಗ್ಯ ಕುರಿತು ಹಲವು ಊಹಾಪೋಹಗಳು ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹಬ್ಬಿಸಲಾಗುತ್ತಿದೆ. ಸುಳ್ಳಿನ ಹಾವಳಿ ಹೆಚ್ಚಾಗುತ್ತಿದ್ದಂತೆ, ಟೀಂ ಇಂಡಿಯಾ ಮಾಜಿ ಕ್ರಿಕೆಟಿದ ಮದನ್ ಲಾಲ್ ಸ್ಪಷ್ಟನೆ ನೀಡಿದ್ದಾರೆ.

ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ; ಆಸ್ಪತ್ರೆಯಿಂದ ಕಪಿಲ್ ದೇವ್ ಡಿಸ್‌ಚಾರ್ಜ್!..

ಇತ್ತೀಚೆಗೆ ಮಾಜಿ ನಾಯಕ ಕಪಿಲ್ ದೇವ್‌ಗೆ ತೀವ್ರ ಹೃದಯಾಘಾತ ಸಂಭವಿಸಿತ್ತು. ತಕ್ಷಣವೇ ಅವರನ್ನು ದೆಹಲಿಯ ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ್ಯಂಜಿಯೋಪ್ಲಾಸ್ಟಿ ಸರ್ಜರಿಗೊಳಗಾದ ಕಪಿಲ್ ದೇವ್ ಆರೋಗ್ಯ ಸುಧಾರಿಸಿಕೊಂಡು ಬಿಡುಗಡೆಯಾಗಿದ್ದರು. ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕಪಿಲ್ ಆರೋಗ್ಯ ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಿದೆ. 

ದಿಗ್ಗಜ ಕ್ರಿಕೆಟಿಗ ಕಪಿಲ್‌ದೇವ್‌ಗೆ ತೀವ್ರ ಹೃದಯಾಘಾತ, ಆಸ್ಪತ್ರೆ ದಾಖಲು!..

ಇದರ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ಕಪಿಲ್ ದೇವ್ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ ಎಂಬ ಸುಳ್ಳು ಹದ್ದಿ ಹಬ್ಬುತ್ತಿದ್ದಾರೆ. ಇದು ಕಪಿಲ್ ದೇವ್ ಹಾಗೂ ಅವರ ಕುಟುಂಬಕ್ಕೆ ತೀವ್ರ ನೋವುಂಟು ಮಾಡುತ್ತಿದೆ. ಹೀಗಾಗಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಬೇಡಿ. ಬೇಜಾವ್ದಾರಿಯಾಗಿ ವರ್ತಿಸಬೇಡಿ. ಕಪಿಲ್ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ಮಾಜಿ ಕ್ರಿಕೆಟಿಗ ಮದನ್ ಲಾಲ್ ಹೇಳಿದ್ದಾರೆ

ಕಪಿಲ್ ದೇವ್ ಆರೋಗ್ಯ ಸಾಕಷ್ಟು ಸುಧಾರಿಸಿದೆ. ಶೀಘ್ರದಲ್ಲೇ ಕಪಿಲ್ ಅವರನ್ನು ಭೇಟಿಯಾಗಲಿದ್ದೇನೆ ಎಂದು ಮದನ್ ಲಾಲ್ ಹೇಳಿದ್ದಾರೆ.