ಭಾರತದ ವೇಗದ ಬೌಲರ್ ವರುಣ್ ಆರೋನ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ೨೦೧೧ರಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಆರೋನ್, ೯ ಟೆಸ್ಟ್ ಮತ್ತು ೯ ಏಕದಿನ ಪಂದ್ಯಗಳನ್ನಾಡಿ ಒಟ್ಟು ೨೯ ವಿಕೆಟ್ ಪಡೆದಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಆಟದಿಂದ ದೂರ ಉಳಿದಿದ್ದರು. ಐಪಿಎಲ್‌ನಲ್ಲೂ ವಿವಿಧ ತಂಡಗಳಿಗೆ ಆಡಿದ್ದಾರೆ.
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ವರುಣ್ ಅರೋನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಡಿಯಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದ ವರುಣ್ ಅರೋನ್, ಭಾರತದ ಪ್ರಮುಖ ವೇಗದ ಬೌಲರ್ ಆಗಿ ಆರಂಭಿಕ ಹಂತದಲ್ಲೇ ಗುರುತಿಸಿಕೊಂಡಿದ್ದರು.
ವೇಗದ ಬೌಲಿಂಗ್‌ಗೆ ಹೆಸರುವಾಸಿಯಾಗಿದ್ದ ವರುಣ್ ಆರೋನ್, ಟೀಂ ಇಂಡಿಯಾ ಪರ 9 ಟೆಸ್ಟ್ ಹಾಗೂ 9 ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ 29 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.' ಆದರೆ ಪದೇ ಪದೇ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿಯಬೇಕಾಗಿ ಬಂದಿದ್ದು, ಆರೋನ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತು.
ಗೌತಮ್ ಗಂಭೀರ್ ಓರ್ವ ಕಪಟಿ; ಟೀಂ ಇಂಡಿಯಾ ಕೋಚ್ ಮೇಲೆ ತಿರುಗಿಬಿದ್ದ ಮಾಜಿ ಕ್ರಿಕೆಟಿಗ!
2010-11ನೇ ಸಾಲಿನ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ವರುಣ್ ಆರೋನ್ ಗಂಟೆಗೆ 153 ವೇಗದಲ್ಲಿ ಬೌಲಿಂಗ್ ಮಾಡಿ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದರು. ಭಾರತ ಪರ 9 ಏಕದಿನ ಪಂದ್ಯಗಳನ್ನಾಡಿ ವರುಣ್ ಆರೋನ್ 11 ವಿಕೆಟ್ ಕಬಳಿಸಿದ್ದರು. ಇನ್ನು 9 ಟೆಸ್ಟ್ ಪಂದ್ಯಗಳಿಂದ ಆರೋನ್ 18 ಬಲಿ ಪಡೆದಿದ್ದಾರೆ. ಇನ್ನು ವರುಣ್ ಆರೋನ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 66 ಪಂದ್ಯಗಳನ್ನಾಡಿ 173 ವಿಕೆಟ್ ಬಲಿ ಪಡೆದಿದ್ದಾರೆ. ಇನ್ನು 87 ಲಿಸ್ಟ್ ಎ ಪಂದ್ಯಗಳನ್ನಾಡಿ 141 ವಿಕೆಟ್ ಕಬಳಿಸಿದ್ದಾರೆ. ಇನ್ನು 95 ಟಿ20 ಪಂದ್ಯಗಳಿಂದ 93 ಬಲಿ ಪಡೆದಿದ್ದಾರೆ.
'ಹಿಂದಿ ನಮ್ಮ ರಾಷ್ಟ್ರಭಾಷೆಯಲ್ಲ'; ಹಿಂದಿ ಹೇರಲು ಹೊರಟವರಿಗೆ ಅಶ್ವಿನ್ ಚಾಟಿ ಏಟು
ಐಪಿಎಲ್‌ನಲ್ಲೂ ಮಿಂಚಿದ್ದ ಆರೋನ್:
ಮಾರಕ ವೇಗಿ ವರುಣ್ ಆರೋನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಲವು ತಂಡಗಳನ್ನು ಪ್ರತಿನಿಧಿಸಿ ಸೈ ಎನಿಸಿಕೊಂಡಿದ್ದಾರೆ. ವರುಣ್ ಆರೋನ್ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ಸೇರಿದಂತೆ ಕೆಲವು ತಂಡಗಳನ್ನು ಪ್ರತಿನಿಧಿಸಿದ್ದಾರೆ. ಐಪಿಎಲ್‌ನಲ್ಲಿ 52 ಪಂದ್ಯಗಳನ್ನಾಡಿ 44 ವಿಕೆಟ್ ಕಬಳಿಸಿದ್ದಾರೆ. 2022ರ ಬಳಿಕ ವರುಣ್ ಆರೋನ್ ಯಾವುದೇ ಐಪಿಎಲ್ ಪಂದ್ಯಗಳನ್ನಾಡಿಲ್ಲ.
