ನವದೆಹಲಿ(ಮಾ.14): 2020-21ನೇ ಸಾಲಿನ ವಿಜಯ್ ಹಜಾರೆ ಏಕದಿನ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಎದುರು ಟಾಸ್ ಗೆದ್ದ ಉತ್ತರ ಪ್ರದೇಶ ತಂಡದ ನಾಯಕ ಕರಣ್‌ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. 

ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಮೈದಾನದಲ್ಲಿ ಆರಂಭವಾದ ಪಂದ್ಯದಲ್ಲಿ ಉಭಯ ತಂಡಗಳು ಸೆಮಿಫೈನಲ್‌ನಲ್ಲಿ ಆಡಿದ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದ್ದು, ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಗುಜರಾತ್ ವಿರುದ್ದ ಉತ್ತರ ಪ್ರದೇಶ ತಂಡವು 5 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದ್ದರೆ, ಎರಡನೇ ಸೆಮಫೈನಲ್‌ ಪಂದ್ಯದಲ್ಲಿ ಕರ್ನಾಟಕ ವಿರುದ್ದ ಮುಂಬೈ ಭರ್ಜರಿ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟಿತ್ತು.

ವಿಜಯ್ ಹಜಾರೆ ಟ್ರೋಫಿ ಫೈನಲ್: ಉತ್ತರ ಪ್ರದೇಶ ಮಣಿಸಿ ಚಾಂಪಿಯನ್ ಆಗುತ್ತಾ ಮುಂಬೈ?

ಪೃಥ್ವಿ ಶಾ ಅದ್ಭುತ ಫಾರ್ಮ್‌ನಲ್ಲಿದ್ದು, ಈಗಾಗಲೇ 7 ಪಂದ್ಯಗಳನ್ನಾಡಿ 754 ರನ್‌ ಚಚ್ಚಿ ಗಮನ ಸೆಳೆದಿದ್ದು, ತಂಡವನ್ನು ನಾಲ್ಕನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಮುಂಬೈ ಗೆಲುವಿನ ನಾಗಾಲೋಟಕ್ಕೆ ಉತ್ತರ ಪ್ರದೇಶ ಯಾವ ರೀತಿಯ ಬ್ರೇಕ್‌ ಹಾಕಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ತಂಡಗಳು ಹೀಗಿವೆ:

ಮುಂಬೈ

ಉತ್ತರ ಪ್ರದೇಶ: