ನವದೆಹಲಿ(ಜ.02): ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ತಮ್ಮ ನಿವಾಸದಲ್ಲೇ ಆಯೋಜಿಸಿದ್ದ ಹೊಸ ವರ್ಷದ ಪಾರ್ಟಿಯಲ್ಲಿ ಟೀಂ ಇಂಡಿಯಾ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಹಾಗೂ ಅವರ ಪತ್ನಿ ನತಾಶ ಸ್ಟ್ಯಾನ್ಕೋವಿಚ್‌ ಪಾಲ್ಗೊಂಡಿದ್ದರು. 

ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಸದ್ಯದಲ್ಲೇ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಹೊಸ ವರ್ಷ ಎಲ್ಲರಿಗೂ ಶುಭ ತರಲಿ ಎಂದು ಹಾರೈಸಿದ್ದಾರೆ. ಪಾಂಡ್ಯ ದಂಪತಿ ಜೊತೆಗಿರುವ ಫೋಟೋವನ್ನು ಕೊಹ್ಲಿ ಟ್ವೀಟ್‌ ಮಾಡಿದ್ದು, ಫೋಟೋ ವೈರಲ್‌ ಆಗಿದೆ.

ಮಗನ ಐದನೇ ತಿಂಗಳ ಬರ್ತ್‌ಡೇ ಸೆಲೆಬ್ರೇಟ್‌ ಮಾಡಿದ ಹಾರ್ದಿಕ್ ಪಾಂಡ್ಯ!

 
 
 
 
 
 
 
 
 
 
 
 
 
 
 

A post shared by Virat Kohli (@virat.kohli)

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಪಿತೃತ್ವದ ರಜೆಯ ಮೇರೆಗೆ ಕೊಹ್ಲಿ ತವರಿಗೆ ವಾಪಾಸಾಗಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧ ಸೀಮಿತ ಓವರ್‌ಗಳ ಸರಣಿಯಲ್ಲಿ ಪಾಲ್ಗೊಂಡಿದ್ದ ಹಾರ್ದಿಕ್‌ ಪಾಂಡ್ಯ ಕೂಡಾ ತಮ್ಮ ಕುಟುಂಬದ ಜತೆ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.