ಮೊದಲ ಪಂದ್ಯದಲ್ಲಿ ವೈಪಲ್ಯ ಅನುಭವಿಸಿದ್ದ ವಿರಾಟ್ ಕೊಹ್ಲಿ ಮೇಲೆ ಎರಡನೇ ಪಂದ್ಯದಲ್ಲಿ ಸಾಕಷ್ಟು ಒತ್ತಡವಿತ್ತು. ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಮಂದಗತಿಯಲ್ಲಿ ಆಡುವ ವಿರಾಟ್ ಕೊಹ್ಲಿಯನ್ನು ಕೈಬಿಡುವ ಸಾಧ್ಯತೆಯಿದೆ ಎಂದೆಲ್ಲಾ ವರದಿಯಾಗಿತ್ತು. ಆ ಎಲ್ಲಾ ಟೀಕಾಕಾರರಿಗೆ ವಿರಾಟ್ ಕೊಹ್ಲಿ ಇದೀಗ ತಮ್ಮ ಬ್ಯಾಟ್ ಮೂಲಕವೇ ಉತ್ತರಿಸಿದ್ದಾರೆ. 

ಬೆಂಗಳೂರು(ಮಾ.26): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಫಾಪ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶುಭಾರಂಭ ಮಾಡಿದೆ. ಪಂಜಾಬ್ ಕಿಂಗ್ಸ್ ಎದುರು ತವರಿನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ರೋಚಕ ಜಯ ಸಾಧಿಸಿದೆ. ಇನ್ನು ಚೆನ್ನೈ ಎದುರಿನ ಮೊದಲ ಪಂದ್ಯದಲ್ಲಿ ಸಾಧಾರಣ ಆಟ ಪ್ರದರ್ಶಿಸಿದ್ದ ವಿರಾಟ್ ಕೊಹ್ಲಿ, ಇದೀಗ ತವರಿನಲ್ಲಿ ಪಂಜಾಬ್ ಎದುರು ಸ್ಪೋಟಕ 77 ರನ್ ಸಿಡಿಸುವ ಮೂಲಕ ಆರ್‌ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇನ್ನು ಪಂದ್ಯ ಮುಕ್ತಾಯವಾಗುತ್ತಿದ್ದಂತೆಯೇ ಮೈದಾನದಲ್ಲಿದ್ದುಕೊಂಡೇ ಪತ್ನಿ ಅನುಷ್ಕಾ ಶರ್ಮಾಗೆ ವಿಡಿಯೋ ಕಾಲ್ ಮಾಡಿ ವಿರಾಟ್ ಕೊಹ್ಲಿ ಸಂತಸ ಹಂಚಿಕೊಂಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿತ್ತು. ಮೊದಲ ಪಂದ್ಯದಲ್ಲಿ ವೈಪಲ್ಯ ಅನುಭವಿಸಿದ್ದ ವಿರಾಟ್ ಕೊಹ್ಲಿ ಮೇಲೆ ಎರಡನೇ ಪಂದ್ಯದಲ್ಲಿ ಸಾಕಷ್ಟು ಒತ್ತಡವಿತ್ತು. ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಮಂದಗತಿಯಲ್ಲಿ ಆಡುವ ವಿರಾಟ್ ಕೊಹ್ಲಿಯನ್ನು ಕೈಬಿಡುವ ಸಾಧ್ಯತೆಯಿದೆ ಎಂದೆಲ್ಲಾ ವರದಿಯಾಗಿತ್ತು. ಆ ಎಲ್ಲಾ ಟೀಕಾಕಾರರಿಗೆ ವಿರಾಟ್ ಕೊಹ್ಲಿ ಇದೀಗ ತಮ್ಮ ಬ್ಯಾಟ್ ಮೂಲಕವೇ ಉತ್ತರಿಸಿದ್ದಾರೆ. 

RCB ವೇಗಿಯನ್ನು ಕಸಕ್ಕೆ ಹೋಲಿಸಿದ ಮುರಳಿ ಕಾರ್ತಿಕ್..! ಗ್ರಾಚಾರ ಬಿಡಿಸಿದ ನೆಟ್ಟಿಗರು

ಇನ್ನು ಆರ್‌ಸಿಬಿ ತಂಡವು ಮೊದಲ ಗೆಲುವು ದಾಖಲಿಸುತ್ತಿದ್ದಂತೆಯೇ ತಡ ಮಾಡದೇ ತಮ್ಮ ಪತ್ನಿ ವಿರಾಟ್ ಕೊಹ್ಲಿ, ಮಗಳು ವಮಿಕಾ ಜತೆ ವಿಡಿಯೋ ಕಾಲ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

Scroll to load tweet…

ಇನ್ನು ವಿರಾಟ್ ಕೊಹ್ಲಿ ಇತ್ತೀಚೆಗಷ್ಟೇ ಎರಡನೇ ಮಗುವಿನ ತಂದೆಯಾಗಿದ್ದಾರೆ. ಕಳೆದ ಫೆಬ್ರವರಿ 15ರಂದು ಅನುಷ್ಕಾ ಶರ್ಮಾ ಗಂಡುಮಗುವಿಗೆ ಜನ್ಮ ನೀಡಿದ್ದರು. ಈ ಮಗುವಿಗೆ ಅಕಾಯ್ ಕೊಹ್ಲಿ ಎಂದು ಹೆಸರಿಡಲಾಗಿದೆ. ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ಜನ್ಮನೀಡುವ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ತವರಿನಲ್ಲಿ ನಡೆದ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಿಂದ ಬ್ರೇಕ್ ಪಡೆದು, ತಮ್ಮ ಪತ್ನಿಯ ಜತೆ ಸುಮಾರು ಎರಡು ತಿಂಗಳುಗಳ ಕಾಲ ಕ್ವಾಲಿಟಿ ಸಮಯವನ್ನು ಕಳೆದಿದ್ದರು.