ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅಲಿಬಾಗ್‌ನಲ್ಲಿ ಕಟ್ಟಿಸಿರುವ ತಮ್ಮ ನೂತನ ಮನೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವೀಗ ವೈರಲ್ ಆಗಿದೆ 

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಜಯಿಸಿದ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ವಿರಾಟ್ ಕೊಹ್ಲಿ, ಸದ್ಯ ಸದ್ಯ ತಾತ್ಕಾಲಿಕವಾಗಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಇದೀಗ ಲಂಡನ್‌ನಲ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಹಾಗೂ ಮಕ್ಕಳ ಜತೆ ಕ್ವಾಲಿಟಿ ಸಮಯ ಕಳೆಯುತ್ತಿದ್ದಾರೆ. ಕ್ರಿಕೆಟ್‌ನಿಂದ ಬಿಡುವು ಪಡೆದುಕೊಂಡಿರುವ ವಿರಾಟ್ ಕೊಹ್ಲಿ ಸದ್ಯ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ ಅಲಿಬಾಗ್‌ನಲ್ಲಿ ಕಟ್ಟಿಸಿರುವ ತಮ್ಮ ಐಶಾರಾಮಿ ಮನೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

"ಅಲಿಬಾಗ್‌ನಲ್ಲಿ ಮನೆ ಕಟ್ಟಿಸಿದ ಅನುಭವ ನಿಜಕ್ಕೂ ಅವಿಸ್ಮರಣೀಯವಾದದ್ದು. ಇದೀಗ ಎಲ್ಲವನ್ನು ಒಟ್ಟಿಗೆ ನೋಡುವುದು ನಿಜಕ್ಕೂ ಸಂತೋಷದಾಯಕವಾಗಿದೆ. ನಮ್ಮ ಕನಸಿನ ಮನೆಯನ್ನು ನನಸಾಗಿಸಿದ್ದಕ್ಕೆ ಇಡೀ ಆವಾಸ್ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳು. ಇದೀಗ ನನ್ನ ಪ್ರೀತಿಪಾತ್ರರೊಂದಿಗೆ ಈ ಮನೆಯಲ್ಲಿ ಕಾಲಕಳೆಯಲು ತುದಿಗಾಲಿನಲ್ಲಿ ನಿಂತಿದ್ದೇನೆ" ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಸಂಭ್ರಮಾಚರಣೆಗೆ ಬನ್ನಿ: ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಮಾಲ್ಡೀವ್ಸ್ ಆಹ್ವಾನ!

ಹೀಗಿದೆ ನೋಡಿ ವಿರಾಟ್ ಕೊಹ್ಲಿ ಲಕ್ಸುರಿ ಮನೆಯ ವಿಡಿಯೋ:

Scroll to load tweet…

ಇನ್ನು ಕ್ರಿಕೆಟ್ ವಿಚಾರಕ್ಕೆ ಬಂದರೆ, ಟೀಂ ಇಂಡಿಯಾ ರನ್ ಮಷೀನ್ ಎಂದೇ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ, ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ವಿರಾಟ್ ಕೊಹ್ಲಿ, ಟೂರ್ನಿಯ ಮೊದಲ 8 ಪಂದ್ಯಗಳಿಂದ ಕೇವಲ 75 ರನ್ ಗಳನ್ನಷ್ಟೇ ಬಾರಿಸಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು ಅಮೂಲ್ಯ 76 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದರ ಜತೆಗೆ ಫೈನಲ್ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಮಾರಿಗುಡಿಯಲ್ಲಿ ಗ್ರೇಟ್ ಕ್ಯಾಚ್ ಹಿಡಿದು ವಿಶ್ವಕಪ್ ಗೆಲ್ಲಿಸಿದ, ತುಳುನಾಡಿನ ಅಳಿಯ ಸೂರ್ಯಕುಮಾರ್ ಯಾದವ್

ಸದ್ಯ ವಿರಾಟ್ ಕೊಹ್ಲಿ ಕ್ರಿಕೆಟ್‌ನಿಂದ ಬಿಡುವು ಪಡೆದುಕೊಂಡಿದ್ದರು, ಶ್ರೀಲಂಕಾ ಎದುರಿನ ಏಕದಿನ ಸರಣಿಯಿಂದಲೂ ಹೊರಗುಳಿಯುವುದು ಬಹುತೇಕ ಖಚಿತ ಎನಿಸಿದೆ. ಇನ್ನು ವಿರಾಟ್ ಕೊಹ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬಾಂಗ್ಲಾದೇಶ ಎದುರಿನ ಏಕದಿನ ಸರಣಿಯ ವೇಳೆಗೆ ಭಾರತ ಕ್ರಿಕೆಟ್ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.