* ಐಸಿಸಿ ನೂತನ ಟಿ20 ರ‍್ಯಾಂಕಿಂಗ್‌ ಪ್ರಕಟ* ಟಾಪ್‌ 10 ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಕೊಹ್ಲಿ-ರಾಹುಲ್‌ಗೆ ಸ್ಥಾನ* ಅಗ್ರಸ್ಥಾನದಲ್ಲೇ ಮುಂದುವರೆದ ಇಂಗ್ಲೆಂಡ್ ಕ್ರಿಕೆಟಿಗ ಡೇವಿಡ್ ಮಲಾನ್

ದುಬೈ(ಜು.08): ಐಸಿಸಿ ಟಿ20 ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆ ಮಾಡಿದ್ದು ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಮರಳಿ 5ನೇ ಸ್ಥಾನಕ್ಕೇರಿದ್ದರೆ, ಕನ್ನಡಿಗ ಕೆ.ಎಲ್‌.ರಾಹುಲ್‌ ಒಂದು ಸ್ಥಾನ ಜಿಗಿತ ಕಂಡು 6ನೇ ರ‍್ಯಾಂಕಿಂಗ್‌ಗೆ ಏರಿದ್ದಾರೆ. 

ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್‌ ಹೊರತು ಪಡಿಸಿ ಭಾರತದ ಇನ್ಯಾವ ಕ್ರಿಕೆಟ್ ಆಟಗಾರರು ಬ್ಯಾಟಿಂಗ್‌, ಬೌಲಿಂಗ್‌ ಹಾಗೂ ಆಲ್‌ರೌಂಡರ್‌ ವಿಭಾಗದಲ್ಲಿ ಅಗ್ರ 10ರಲ್ಲಿ ಸ್ಥಾನ ಪಡೆದಿಲ್ಲ. ಟಿ20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನ ಅಗ್ರ 5 ಆಟಗಾರರ ಸ್ಥಾನದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇಂಗ್ಲೆಂಡ್ ಸ್ಫೋಟಕ ಬ್ಯಾಟ್ಸ್‌ಮನ್‌ ಡೇವಿಡ್ ಮಲಾನ್ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದರೆ, ಆರೋನ್ ಫಿಂಚ್, ಬಾಬರ್ ಅಜಂ, ಡೇವಿಡ್ ಕಾನ್‌ವೇ ಹಾಗೂ ವಿರಾಟ್ ಕೊಹ್ಲಿ ಮೊದಲ ಸ್ಥಾನಗಳಲ್ಲಿ ಭದ್ರವಾಗಿದ್ದಾರೆ.

Scroll to load tweet…

ಕೋವಿಡ್ ಶಾಕ್ ಬೆನ್ನಲ್ಲೇ ಇಂಗ್ಲೆಂಡ್‌ ಕ್ರಿಕೆಟ್ ತಂಡಕ್ಕೆ ಬೆನ್ ಸ್ಟೋಕ್ಸ್ ಕ್ಯಾಪ್ಟನ್‌

ಏಕದಿನ ರ‍್ಯಾಂಕಿಂಗ್‌ನಲ್ಲಿ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಕ್ರಮವಾಗಿ 2 ಮತ್ತು 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಏಕದಿನ ಕ್ರಿಕೆಟ್‌ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲೇ ಮುಂದುವರೆದಿದ್ದಾರೆ. ಬೌಲಿಂಗ್‌ನಲ್ಲಿ ವೇಗಿ ಜಸ್ಟ್ರೀತ್‌ ಬುಮ್ರಾ 6ನೇ ಸ್ಥಾನಕ್ಕೆ ಜಾರಿದ್ದರೆ, ಆಲ್‌ರೌಂಡರ್‌ ವಿಭಾಗದಲ್ಲಿ ರವೀಂದ್ರ ಜಡೇಜಾ 9ನೇ ಶ್ರೇಯಾಂಕದಲ್ಲಿ ಮುಂದುವರೆದಿದ್ದಾರೆ.