* ಇಂಗ್ಲೆಂಡ್ ಎದುರಿನ ಟೆಸ್ಟ್‌ ಸರಣಿಗೂ ಮುನ್ನ ಟೀಂ ಇಂಡಿಯಾ ಕಠಿಣ ಅಭ್ಯಾಸ* ಇಂಗ್ಲೆಂಡ್ ಎದುರು 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿರುವ ಟೀಂ ಇಂಡಿಯಾ* ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯು ಆಗಸ್ಟ್ 08ರಿಂದ ಆರಂಭ

ಡರ್ಹಮ್(ಜು.19)‌: ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿದ್ದ ಟೀಂ ಇಂಡಿಯಾ, 15 ದಿನಗಳ ರಜೆ ಬಳಿಕ ಒಟ್ಟುಗೂಡಿದೆ. 

ಡರ್ಹಮ್‌ನಲ್ಲಿ ಮಂಗಳವಾರದಿಂದ ಕೌಂಟಿ ಇಲೆವೆನ್‌ ತಂಡದ ವಿರುದ್ಧ 3 ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿರುವ ವಿರಾಟ್‌ ಕೊಹ್ಲಿ ಪಡೆ ಅದಕ್ಕಾಗಿ, ಭರ್ಜರಿ ಸಿದ್ಧತೆ ನಡೆಸಿದೆ. ಈ ಪಂದ್ಯದ ಬಳಿಕ ತಂಡ ಮತ್ತೊಂದು ಅಭ್ಯಾಸ ಪಂದ್ಯವನ್ನಾಡಲಿದ್ದು, ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಟೆಸ್ಟ್‌ ಸರಣಿಗೆ ಸಜ್ಜಾಗಲಿದೆ. 

ಚೊಚ್ಚಲ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿತ್ತಾದರೂ, ಸೌಥಾಂಪ್ಟನ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ಎದುರು ಆಘಾತಕಾರಿ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ಎರಡು ವಾರಗಳ ರಜೆಯ ಬಳಿಕ ಇದೀಗ ದೀರ್ಘಕಾಲಿಕ ಇಂಗ್ಲೆಂಡ್ ಸರಣಿಗೆ ಟೀಂ ಇಂಡಿಯಾ ಸಜ್ಜಾಗುತ್ತಿದೆ.

ಭಾರತ-ಇಂಗ್ಲೆಂಡ್ ಸರಣಿಗೆ ಸಂಕಷ್ಟ; ಪಂತ್ ಬೆನ್ನಲ್ಲೇ ಟೀಂ ಇಂಡಿಯಾ ಸ್ಟಾಫ್‌ಗೆ ಕೊರೋನಾ!

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯು ಆಗಸ್ಟ್ 04ರಿಂದ ಆರಂಭವಾಗಲಿದೆ. ಈ ಸರಣಿಯಿಂದಲೇ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಆರಂಭವಾಗಲಿದೆ. ಹೀಗಾಗಿ ಟೀಂ ಇಂಡಿಯಾ ಈಗಿನಿಂದಲೇ ಕಠಿಣ ಅಭ್ಯಾಸ ಆರಂಭಿಸಿದೆ.