ಕೆರಿಬಿಯನ್ನರನ್ನು ಹಣಿಯಲು ಟೀಂ ಇಂಡಿಯಾ ರೆಡಿ
ಭಾರತ-ವೆಸ್ಟ್ ಇಂಡೀಸ್ ನಡುವಿನ ಚುಟುಕು ಕ್ರಿಕೆಟ್ ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ವಿರಾಟ್ ಪಡೆ ನೆಟ್ಸ್ನಲ್ಲಿ ಭರ್ಜರಿ ಬೆವರು ಹರಿಸುತ್ತಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಹೈದರಾಬಾದ್(ಡಿ.05): 2020ರ ಟಿ20 ವಿಶ್ವಕಪ್ಗೆ ಸಿದ್ಧತೆ ಆರಂಭಿಸಿರುವ ಭಾರತ ತಂಡ, ಶುಕ್ರವಾರದಿಂದ ಹಾಲಿ ವಿಶ್ವ ಚಾಂಪಿಯನ್ ವೆಸ್ಟ್ಇಂಡೀಸ್ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.
ಸಂಜು ಸ್ಯಾಮ್ಸನ್ಗೆ ಸ್ಥಾನ: ಕೊನೆಗೂ ಖುಷಿಯಾದ ಫ್ಯಾನ್ಸ್..!
ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಬುಧವಾರ ಭಾರತ ತಂಡ ಅಭ್ಯಾಸ ನಡೆಸಿತು. ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲಾ ಆಟಗಾರರು ನೆಟ್ಸ್ ಅಭ್ಯಾಸದಲ್ಲಿ ಪಾಲ್ಗೊಂಡರು. ವಿಂಡೀಸ್ ವಿರುದ್ಧ ಟಿ20 ಸರಣಿ ಬಳಿಕ 3 ಪಂದ್ಯಗಳ ಏಕದಿನ ಸರಣಿಯನ್ನೂ ಆಡಲಿರುವ ಭಾರತ, ಈ ವರ್ಷವನ್ನು ಭರ್ಜರಿ ಗೆಲುವಿನೊಂದಿಗೆ ಮುಕ್ತಾಯಗೊಳಿಸಲು ಎದುರು ನೋಡುತ್ತಿದೆ.
ICC ಟೆಸ್ಟ್ ರ್ಯಾಂಕಿಂಗ್ ಪ್ರಕಟ: ಸ್ಮಿತ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೊಹ್ಲಿ
2020ರ ಆರಂಭದಲ್ಲಿ ಶ್ರೀಲಂಕಾ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು, 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆ ಬಳಿಕ ಆಸ್ಪ್ರೇಲಿಯಾ ತಂಡ ಭಾರತಕ್ಕೆ ಆಗಮಿಸಲಿದ್ದು, 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ.