ಜೋಕೋವಿಚ್‌, ಅನುಷ್ಕಾ ಶರ್ಮಾ ಮನಗೆದ್ದ ವಿರಾಟ್ ಕೊಹ್ಲಿ ಲೆಗ್‌ ವರ್ಕೌಟ್‌..!

ವೆಸ್ಟ್ ಇಂಡೀಸ್ ಎದುರಿನ ಸರಣಿಗೆ ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ವರ್ಕೌಟ್ ಮಾಡುತ್ತಿರುವ ಫೋಟೋಗಳು ವೈರಲ್‌
ವಿರಾಟ್ ವರ್ಕೌಟ್ ಮೆಚ್ಚಿಕೊಂಡ ಟೆನಿಸ್ ದಿಗ್ಗಜ ನೋವಾಕ್ ಜೋಕೋವಿಚ್

Virat Kohli Leg Day In Gym Has Novak Djokovic Anushka Sharma Impressed kvn

ಡೊಮಿನಿಕ್‌(ಜು.09): ಭಾರತ ಕ್ರಿಕೆಟ್ ತಂಡವು ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದು, ಎರಡು ಪಂದ್ಯಗಳ ಟೆಸ್ಟ್‌ ಸರಣಿಗೆ ಸಜ್ಜಾಗುತ್ತಿದೆ. ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ ಎದುರಿನ ಸರಣಿಗೆ ಭರ್ಜರಿಯಾಗಿಯೇ ಸಿದ್ದತೆ ನಡೆಸುತ್ತಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ದೊಡ್ಡ ಇನಿಂಗ್ಸ್‌ ಕಟ್ಟಲು ಎದುರು ನೋಡುತ್ತಿರುವ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಪಂದ್ಯಕ್ಕೂ ಮುನ್ನ ಗಂಟೆಗಟ್ಟಲೇ ನೆಟ್ಸ್‌ನಲ್ಲಿ ಅಭ್ಯಾಸ ನಡೆಸುವ ಮೂಲಕ ಬೆವರು ಹರಿಸುತ್ತಿದ್ದಾರೆ. 

ಇನ್ನು ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದ ಬಳಿಕ ವಿರಾಟ್‌ ಕೊಹ್ಲಿ, ಹೋಟೆಲ್‌ನ ಜಿಮ್‌ನಲ್ಲಿ ಕೂಡಾ ದೇಹ ದಂಡಿಸುವ ಮೂಲಕ ಫಿಟ್ ಆಗಿರುವಂತೆ ನೋಡಿಕೊಳ್ಳುತ್ತಿದ್ದಾರೆ.  ಜುಲೈ 12ರಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಭಾಗವಾಗಿ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಕೆರಿಬಿಯನ್ನರ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ವಿರಾಟ್ ಕೊಹ್ಲಿ ಈ ಎರಡೂ ಮಾದರಿಯ ಕ್ರಿಕೆಟ್‌ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ಎದುರಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಏಕದಿನ ವಿಶ್ವಕಪ್‌ ಟೂರ್ನಿಗೂ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ವಿರಾಟ್ ಕೊಹ್ಲಿ ಎದುರು ನೋಡುತ್ತಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನ ಟಾಪ್ 10 ಸೆಕ್ಸಿ ಕ್ರಿಕೆಟಿಗರಿವರು..!

ಮೊದಲ ಟೆಸ್ಟ್‌ ಪಂದ್ಯವು ಜುಲೈ 12ರಿಂದ 16ರ ವರೆಗೆ ಡೊಮಿನಿಕಾದಲ್ಲಿ ನಡೆಯಲಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿ ಜಿಮ್‌ನಲ್ಲಿ ಲೆಗ್ ಡೇ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. "ಪ್ರತಿದಿನವೂ ಲೆಗ್ ಡೇ ಆಗಿರುತ್ತದೆ, 8 ವರ್ಷಗಳಿಂದಲೂ ಇದು ನಡೆಯುತ್ತಿದೆ ಎಂದು" ವಿರಾಟ್ ಕೊಹ್ಲಿ, ವರ್ಕೌಟ್ ಫೋಟೋ ಜತೆಗೆ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

 
 
 
 
 
 
 
 
 
 
 
 
 
 
 

A post shared by Virat Kohli (@virat.kohli)

ಇನ್ನು ವಿರಾಟ್ ಕೊಹ್ಲಿಯ ವರ್ಕೌಟ್‌ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಕೊಹ್ಲಿ ಕಠಿಣ ವರ್ಕೌಟ್ ಮಾಡುವುದರಿಂದಲೇ ಇಷ್ಟೊಂದು ಫಿಟ್ ಆಗಿದ್ದಾರೆ ಎನ್ನುವ ರೀತಿಯಲ್ಲಿ ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. ಇನ್ನು ವಿರಾಟ್‌ ಕೊಹ್ಲಿಯ ವರ್ಕೌಟ್ ಪೋಸ್ಟ್‌ಗೆ ಟೀಂ ಇಂಡಿಯಾ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಲೈಕ್ ಮಾಡಿದ್ದಾರೆ. ಇದಷ್ಟೇ 23 ಟೆನಿಸ್ ಗ್ರ್ಯಾನ್‌ ಸ್ಲಾಂ ಒಡೆಯ ನೋವಾಕ್ ಜೋಕೋವಿಚ್‌, ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡಾ ವಿರಾಟ್‌ ಕೊಹ್ಲಿಯ ವರ್ಕೌಟ್ ಪೋಸ್ಟ್‌ ಲೈಕ್ ಮಾಡಿದ್ದಾರೆ.

ಮಾಜಿ ನಾಯಕ ವಿರಾಟ್ ಕೊಹ್ಲಿ, ಇತ್ತೀಚೆಗಷ್ಟೇ ಮುಕ್ತಾಯವಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ದೊಡ್ಡ ಮೊತ್ತ ಗಳಿಸಲು ವಿಫಲವಾಗಿದ್ದರು. ಆದರೆ ಇದೀಗ ವಿಂಡೀಸ್ ಎದುರು ಕೊಹ್ಲಿ ಯಾವ ರೀತಿ ಪ್ರದರ್ಶನ ತೋರಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
 
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಭಾಗವಾಗಿರುವ ಎರಡು ಪಂದ್ಯಗಳ ಟೆಸ್ಟ್‌ ಸರ​ಣಿಯ ಮೊದಲ ಪಂದ್ಯ ಜುಲೈ 12ರಿಂದ ಡೊಮಿ​ನಿ​ಕಾ​ದಲ್ಲಿ ಆರಂಭ​ವಾ​ಗ​ಲಿ​ದ್ದು, ಜುಲೈ 20ರಿಂದ 2ನೇ ಟೆಸ್ಟ್‌ ಪಂದ್ಯ ಟ್ರಿನಿ​ಡಾ​ಡ್‌​ನ​ಲ್ಲಿ ನಡೆ​ಯ​ಲಿದೆ. ಬಳಿಕ ಜುಲೈ 27, 29ರಂದು ಮೊದ​ಲೆ​ರಡು ಏಕ​ದಿನಕ್ಕೆ ಬಾರ್ಬ​ಡಾ​ಸ್‌​, ಆಗಸ್ಟ್‌ 1ರಂದು 3ನೇ ಏಕ​ದಿ​ನಕ್ಕೆ ಟ್ರಿನಿ​ಡಾಡ್‌ ಆತಿಥ್ಯ ವಹಿ​ಸ​ಲಿದೆ. ಇನ್ನು ಆಗಸ್ಟ್‌ 3ರಿಂದ ಟ್ರಿನಿ​ಡಾ​ಡ್‌​ನಲ್ಲೇ 5 ಪಂದ್ಯಗಳ ಟಿ20 ಸರಣಿ ಆರಂಭ​ವಾ​ಗ​ಲಿದ್ದು, 2 ಮತ್ತು 3ನೇ ಪಂದ್ಯ ಕ್ರಮ​ವಾಗಿ ಆಗಸ್ಟ್‌ 6, 8ಕ್ಕೆ ಗಯಾ​ನ​ದಲ್ಲಿ, 4 ಮತ್ತು 5ನೇ ಪಂದ್ಯ ಆಗಸ್ಟ್ 12 ಮತ್ತು 13ರಂದು ಫ್ಲೋರಿಡಾ​ದಲ್ಲಿ ನಡೆ​ಯ​ಲಿದೆ. ಇನ್ನು ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿಲ್ಲ.

ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್‌, ಶುಭ್‌ಮನ್‌ ಗಿಲ್‌, ಋತುರಾಜ್ ಗಾಯಕ್ವಾಡ್‌, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್‌, ಅಜಿಂಕ್ಯ ರಹಾನೆ(ಉಪನಾಯಕ), ಕೆ ಎಸ್ ಭರತ್(ವಿಕೆಟ್ ಕೀಪರ್), ಇಶಾನ್‌ ಕಿಶನ್‌(ವಿಕೆಟ್‌ ಕೀಪರ್), ರವಿಚಂದ್ರನ್ ಅಶ್ವಿನ್‌, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಯದೇವ್ ಉನಾದ್ಕತ್, ನವದೀಪ್ ಸೈನಿ.

ಏಕದಿನ ಸರಣಿಗೆ ಭಾರತ ತಂಡ:

ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್‌, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಯದೇವ್ ಉನಾದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಕೇಶ್ ಕುಮಾರ್.

Latest Videos
Follow Us:
Download App:
  • android
  • ios