ಇಂಗ್ಲೆಂಡ್ ವಿರುದ್ಧ ಇನ್ನೂ 2 ಟೆಸ್ಟ್‌ಗೆ ಇಲ್ಲ ವಿರಾಟ್ ಕೊಹ್ಲಿ?
ವಿರಾಟ್ ಕೊಹ್ಲಿ ಯಾವಾಗ ತಂಡದ ಆಯ್ಕೆಗೆ ಲಭ್ಯವಿರುತ್ತಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಮುಂದಿನ 2 ಪಂದ್ಯದಲ್ಲೂ ಆಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಆದರೆ ಮಾ.6ಕ್ಕೆ ಧರ್ಮಶಾಲಾದಲ್ಲಿ ಆರಂಭಗೊಳ್ಳಲಿರುವ ಕೊನೆ ಟೆಸ್ಟ್‌ಗೆ ಅವರು ತಂಡಕ್ಕೆ ಮರಳಬಹುದು ಎಂದು ವರದಿಯಾಗಿದೆ.
ನವದೆಹಲಿ(ಫೆ.08): ಇಂಗ್ಲೆಂಡ್ ವಿರುದ್ಧದ ಇನ್ನೂ 2 ಟೆಸ್ಟ್ ಪಂದ್ಯಗಳಿಗೆ ಭಾರತದ ತಾರಾ ಬ್ಯಾಟರ್ ವಿರಾಟ್ ಕೊಹ್ಲಿ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ವೈಯಕ್ತಿಕ ಕಾರಣಕ್ಕೆ ಮೊದಲ 2 ಟೆಸ್ಟ್‌ಗೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ.
ವಿರಾಟ್ ಕೊಹ್ಲಿ ಯಾವಾಗ ತಂಡದ ಆಯ್ಕೆಗೆ ಲಭ್ಯವಿರುತ್ತಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಮುಂದಿನ 2 ಪಂದ್ಯದಲ್ಲೂ ಆಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಆದರೆ ಮಾ.6ಕ್ಕೆ ಧರ್ಮಶಾಲಾದಲ್ಲಿ ಆರಂಭಗೊಳ್ಳಲಿರುವ ಕೊನೆ ಟೆಸ್ಟ್‌ಗೆ ಅವರು ತಂಡಕ್ಕೆ ಮರಳಬಹುದು ಎಂದು ವರದಿಯಾಗಿದೆ.
ಇನ್ನು ಗಾಯದಿಂದಾಗಿ ಕಳೆದ ಪಂದ್ಯಕ್ಕೆ ಗೈರಾಗಿದ್ದ ಕೆ.ಎಲ್.ರಾಹುಲ್ ಹಾಗೂ ರವೀಂದ್ರ ಜಡೇಜಾ ಇಬ್ಬರೂ ಚೇತರಿಸಿಕೊಳ್ಳುತ್ತಿದ್ದು, ಸರಣಿಯ ಉಳಿದ ಪಂದ್ಯಗಳಲ್ಲಿ ಆಡುವ ಸಾಧ್ಯತೆಯಿದೆ. ಮೊಹಮ್ಮದ್ ಸಿರಾಜ್ ಕೂಡಾ ತಂಡಕ್ಕೆ ಮರಳುವ ನಿರೀಕ್ಷೆಯಿದೆ. 3ನೇ ಪಂದ್ಯ ಫೆ.15ರಿಂದ ರಾಜ್‌ಕೋಟ್‌ನಲ್ಲಿ ಆರಂಭಗೊಳ್ಳಲಿದ್ದು, ಕೆಲ ದಿನಗಳಲ್ಲೇ ತಂಡ ಪ್ರಕಟಗೊಳ್ಳುವ ನಿರೀಕ್ಷೆಯಿದೆ.
ಯಾರು ಈ ಸಫಾ ಬೇಗ್? ಇಲ್ಲಿದೆ ಇರ್ಫಾನ್ ಪಠಾಣ್ ಮುದ್ದಾದ ಮಡದಿಯ ಇಂಟ್ರೆಸ್ಟಿಂಗ್ ಮಾಹಿತಿ
ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್: 3ನೇ ಸ್ಥಾನಕ್ಕೆ ಕುಸಿದ ಭಾರತ
ದುಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(ಡಬ್ಲ್ಯುಟಿಸಿ) ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ ಅಗ್ರ ಸ್ಥಾನಕ್ಕೇರಿದ್ದು, ಭಾರತ 3ನೇ ಸ್ಥಾನಕ್ಕೆ ಕುಸಿದಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ 281 ರನ್‌ಗಳ ಬೃಹತ್ ಜಯ ಸಾಧಿಸಿದ ಕಿವೀಸ್ ಶೇ.66.66 ಜಯದ ಪ್ರತಿಶತದೊಂದಿಗೆ ಮೊದಲ ಸ್ಥಾನಕ್ಕೇರಿದೆ.
2023-25ರ ಚಾಂಪಿಯನ್‌ಶಿಪ್‌ನಲ್ಲಿ 3 ಟೆಸ್ಟ್ ಆಡಿರುವ ಕಿವೀಸ್, 2ರಲ್ಲಿ ಗೆದ್ದು, 1ರಲ್ಲಿ ಸೋತಿದೆ. ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್‌ನಲ್ಲಿ ಗೆದ್ದು 2ನೇ ಸ್ಥಾನಕ್ಕೆ ಏರಿದ್ದ ಭಾರತ, 52.77ರ ಗೆಲುವಿನ ಪ್ರತಿಶತದೊಂದಿಗೆ 3ನೇ ಸ್ಥಾನಕ್ಕೆ ಜಾರಿದೆ. ಆಸ್ಟ್ರೇಲಿಯಾ ಶೇ.55.00ರ ಗೆಲುವಿನ ಪ್ರತಿಶತದೊಂದಿಗೆ 2ನೇ ಸ್ಥಾನದಲ್ಲಿದೆ. ಉಳಿದಂತೆ ಬಾಂಗ್ಲಾದೇಶ, ಪಾಕಿಸ್ತಾನ ತಂಡಗಳು ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿವೆ.
ICC Test Rankings: ನಂ.1 ಸ್ಥಾನಕ್ಕೇರಿದ ಜಸ್ಪ್ರೀತ್ ಬುಮ್ರಾ, ಅಪರೂಪದ ದಾಖಲೆ ಬರೆದ ಟೀಂ ಇಂಡಿಯಾ ವೇಗಿ
3ನೇ ಟೆಸ್ಟ್‌ಗೆ ಮುನ್ನ ಎಸ್‌ಸಿಎ ಸ್ಟೇಡಿಯಂ ಹೆಸರು ಬದಲಾವಣೆ
ರಾಜ್‌ಕೋಟ್: ಇಲ್ಲಿನ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ(ಎಸ್‌ಸಿಎ)ಯ ಕ್ರೀಡಾಂಗಣದ ಹೆಸರನ್ನು ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಮರು ನಾಮಕರಣಗೊಳಿಸಲು ಬಿಸಿಸಿಐ ನಿರ್ಧರಿಸಿದೆ. ಸದ್ಯ ಎಸ್‌ಸಿಎ ಕ್ರೀಡಾಂಗಣ ಎಂಬ ಹೆಸರಿದ್ದು, ಅದರ ಬದಲು ಬಿಸಿಸಿಐನ ಮಾಜಿ ಕಾರ್ಯದರ್ಶಿ, ಹಿರಿಯ ಕ್ರಿಕೆಟ್ ಆಡಳಿತಗಾರ ನಿರಂಜನ್ ಶಾ ಹೆಸರನ್ನು ಇಡಲಾಗುತ್ತದೆ.
ಫೆ.15ರಂದು ಆರಂಭಗೊಳ್ಳಲಿರುವ ಟೆಸ್ಟ್ ಪಂದ್ಯಕ್ಕೂ ಮುನ್ನ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮರು ನಾಮಕರಣ ಮಾಡಲಿದ್ದಾರೆ. 2013ರಲ್ಲಿ ಉದ್ಘಾಟನೆಗೊಂಡಿರುವ ಕ್ರೀಡಾಂಗಣದಲ್ಲಿ ಈ ವರೆಗೂ 2 ಟೆಸ್ಟ್, 4 ಏಕದಿನ, 5 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿವೆ.