ಭಾರತ ಹಾಗೂ ಪಾಕಿಸ್ತಾನ ತಂಡಗಳು ದ್ವಿಪಕ್ಷೀಯ ಸರಣಿಯನ್ನಾಡಿ ಒಂದು ದಶಕವೇ ಕಳೆದಿದೆ. ಕೇವಲ ಐಸಿಸಿ ಟೂರ್ನಿಗಳಲ್ಲಿ ಹಾಗೂ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರ ಈ ಎರಡು ತಂಡಗಳು ಮುಖಾಮುಖಿಯಾಗುತ್ತಾ ಬಂದಿದ್ದು, ಈ ಹೈವೋಲ್ಟೇಜ್ ಪಂದ್ಯ ಕಣ್ತುಂಬಿಕೊಳ್ಳಲು ಇಡೀ ಕ್ರಿಕೆಟ್ ಜಗತ್ತೇ ತುದಿಗಾಲಿನಲ್ಲಿ ನಿಂತಿರುತ್ತದೆ.
ಪಲ್ಲೆಕೆಲೆ(ಸೆ.02): 2023ರ ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿರುವ ಕ್ರಿಕೆಟ್ ಜಗತ್ತಿನ ಸಾಂಪ್ರಾದಾಯಿಕ ಎದುರಾಳಿಗಳ ಕದನಕ್ಕೆ ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಿದೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳು ದ್ವಿಪಕ್ಷೀಯ ಸರಣಿಯನ್ನಾಡಿ ಒಂದು ದಶಕವೇ ಕಳೆದಿದೆ. ಕೇವಲ ಐಸಿಸಿ ಟೂರ್ನಿಗಳಲ್ಲಿ ಹಾಗೂ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರ ಈ ಎರಡು ತಂಡಗಳು ಮುಖಾಮುಖಿಯಾಗುತ್ತಾ ಬಂದಿದ್ದು, ಈ ಹೈವೋಲ್ಟೇಜ್ ಪಂದ್ಯ ಕಣ್ತುಂಬಿಕೊಳ್ಳಲು ಇಡೀ ಕ್ರಿಕೆಟ್ ಜಗತ್ತೇ ತುದಿಗಾಲಿನಲ್ಲಿ ನಿಂತಿರುತ್ತದೆ. ಮೈದಾನದಲ್ಲಿ ಉಭಯ ತಂಡದ ಆಟಗಾರರು ಬದ್ದ ಎದುರಾಳಿಗಳಂತೆ ಗೆಲ್ಲಲು ಕೊನೆಯ ಕ್ಷಣದವರೆಗೂ ಹೋರಾಡುತ್ತಾ ಬಂದಿರುವುದನ್ನು ನೋಡಿದ್ದೇವೆ. ಆದರೆ ಇದೀಗ ಏಷ್ಯಾಕಪ್ ಟೂರ್ನಿಗೂ ಒಂದು ದಿನ ಮುನ್ನ ಅಭ್ಯಾಸ ನಡೆಸುವ ವೇಳೆ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಪಾಕಿಸ್ತಾನದ ಮಾರಕ ವೇಗಿ ಹ್ಯಾರಿಸ್ ರೌಫ್ ಭೇಟಿಯಾಗಿ ಆತ್ಮೀಯವಾಗಿ ಮಾತುಕತೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
Asia Cup 2023: ಪಾಕ್ ಎದುರಿನ ಹೈವೋಲ್ಟೇಜ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..!
ಇದು 2022ರ ಐಸಿಸಿ ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ಇದೇ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಹಾಗೂ ಹ್ಯಾರಿಸ್ ರೌಫ್ ಮುಖಾಮುಖಿಯಾಗಿದ್ದಾರೆ. 2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೆಲ್ಬರ್ನ್ ಮೈದಾನದಲ್ಲಿ ನಡೆದ ಪಾಕ್ ಎದುರಿನ ಹೈವೋಲ್ಟೇಜ್ ಪಂದ್ಯದಲ್ಲಿ ಹ್ಯಾರಿಸ್ ರೌಫ್ ಬೌಲಿಂಗ್‌ನಲ್ಲಿ ವಿರಾಟ್ ಕೊಹ್ಲಿ ಅವಿಸ್ಮರಣೀಯ ಸಿಕ್ಸರ್ ಸಿಡಿಸಿದ್ದನ್ನು ಕ್ರಿಕೆಟ ಅಭಿಮಾನಿಗಳು ಮರೆಯಲು ಸಾಧ್ಯವೇ ಇಲ್ಲ.
ಏಷ್ಯಾಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡವು ಕ್ರಿಕೆಟ್ ಶಿಶು ನೇಪಾಳ ಎದುರು 238 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಹೀಗಾಗಿ ಇದೀಗ ಭಾರತ ಎದುರಿನ ಮಹತ್ವದ ಪಂದ್ಯದಲ್ಲೂ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೇ ಕಣಕ್ಕಿಳಿಯುವ ಲೆಕ್ಕಾಚಾರದಲ್ಲಿದೆ ಬಾಬರ್ ಅಜಂ ಪಡೆ.
Asia Cup: 4 ವರ್ಷಗಳ ಬಳಿಕ ಭಾರತ vs ಪಾಕಿಸ್ತಾನ ಏಕದಿನ ಕದನ..!
ಸಂಭವನೀಯ ಆಟಗಾರರ ಪಟ್ಟಿ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್/ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ: ಫಖರ್ ಜಮಾನ್, ಇಮಾಮ್ ಇಮಾಮ್, ಬಾಬರ್ ಅಜಂ(ನಾಯಕ), ಮೊಹಮ್ಮದ್ ರಿಜ್ವಾನ್, ಅಘಾ ಸಲ್ಮಾನ್, ಇಫ್ತಿಕಾರ್ ಅಹಮ್ಮದ್, ಶಾಬಾದ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್.
ಪಂದ್ಯ: ಮಧ್ಯಾಹ್ನ 3ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ ಹಾಟ್‌ಸ್ಟಾರ್
ಪಿಚ್ ರಿಪೋರ್ಟ್
ಈ ಪಂದ್ಯವು ಹೊಸ ಪಿಚ್ ಮೇಲೆ ನಡೆಯಲಿದೆ. ಬಾಂಗ್ಲಾ-ಲಂಕಾ ಪಂದ್ಯಕ್ಕೆ ಬಳಸಿದ್ದ ಪಿಚ್‌ನಂತೆಯೇ ಈ ಪಿಚ್ ಸಹ ವರ್ತಿಸಿದರೆ ವೇಗಿಗಳು ಹಾಗೂ ಸ್ಪಿನ್ನರ್‌ಗಳಿಬ್ಬರಿಗೂ ನೆರವು ಸಿಗಲಿದ್ದು, ಬ್ಯಾಟರ್‌ಗಳಿಗೆ ಕಷ್ಟವಾಗಬಹುದು. ಬೆಳಗ್ಗಿನಿಂದ ಮಧ್ಯಾಹ್ನದ ವರೆಗೂ ಮಳೆ ಮುನ್ಸೂಚನೆ ಇದ್ದು, ಪಂದ್ಯ ಆರಂಭವಾಗುವುದು ತಡವಾಗಬಹುದು ಎನ್ನಲಾಗುತ್ತಿದೆ.
