ಸಿಕ್ಸರ್’ನಲ್ಲಿ ಅರ್ಧಶತಕ ಸಿಡಿಸಿದ ಧೋನಿ-ಕೊಹ್ಲಿ..!

ಮ್ಯಾಕ್ಸ್’ವೆಲ್ ಸಿಡಿಲಬ್ಬರದ ಶತಕದ ನೆರವಿನಿಂದ ಪ್ರವಾಸಿ ಆಸ್ಟ್ರೇಲಿಯಾ 7 ವಿಕೆಟ್’ಗಳ ಭರ್ಜರಿ ಜಯ ದಾಖಲಿಸಿದೆ. ಪಂದ್ಯ ಸೋತರೂ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹಾಲಿ ನಾಯಕ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.

Virat Kohli MS Dhoni hit 50th career sixes in T20 Internationals

ಬೆಂಗಳೂರು[ಫೆ.28]: ಆಸ್ಟ್ರೇಲಿಯಾ ವಿರುದ್ಧ ನಗರದ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಸೋಲುವುದರೊಂದಿಗೆ ಭಾರತ ಟಿ20 ಸರಣಿ ಕೈಚೆಲ್ಲಿದೆ. ನಾಯಕ ವಿರಾಟ್ ಕೊಹ್ಲಿ 72 ಹಾಗೂ ಧೋನಿ 40 ರನ್ ಬಾರಿಸಿ ಟೀಂ ಇಂಡಿಯಾ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಆದರೆ ಮ್ಯಾಕ್ಸ್’ವೆಲ್ ಸಿಡಿಲಬ್ಬರದ ಶತಕದ ನೆರವಿನಿಂದ ಪ್ರವಾಸಿ ಆಸ್ಟ್ರೇಲಿಯಾ 7 ವಿಕೆಟ್’ಗಳ ಭರ್ಜರಿ ಜಯ ದಾಖಲಿಸಿದೆ. ಪಂದ್ಯ ಸೋತರೂ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹಾಲಿ ನಾಯಕ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.

ಮ್ಯಾಕ್ಸ್‌ವೆಲ್ ಶತಕ- ಆಸಿಸ್ ವಿರುದ್ಧದ ಟಿ20 ಸರಣಿ ಸೋತ ಭಾರತ!

ಒಂದೇ ಪಂದ್ಯದಲ್ಲಿ ಧೋನಿ ಹಾಗೂ ಕೊಹ್ಲಿ ಅಂತರಾಷ್ಟ್ರೀಯ ಟಿ20ಯಲ್ಲಿ 50 ಸಿಕ್ಸರ್ ಪೂರೈಸಿದ ಸಾಧನೆ ಮಾಡಿದ್ದಾರೆ. ಮೊದಲು ಧೋನಿ 50ನೇ ಸಿಕ್ಸರ್ ಸಿಡಿಸಿ, ಈ ಸಾಧನೆ ಮಾಡಿದ ಭಾರತದ 4ನೇ ಆಟಗಾರ ಎನಿಸಿದರು. ಬಳಿಕ ಕೊಹ್ಲಿ ಈ ಸಾಧನೆ ಮಾಡಿದ 5ನೇ ಬ್ಯಾಟ್ಸ್‌ಮನ್ ಎನ್ನುವ ಹಿರಿಮೆಗೆ ಪಾತ್ರ ರಾದರು. ಈ ಮೊದಲು ಯುವರಾಜ್ ಸಿಂಗ್, ಸುರೇಶ್ ರೈನಾ ಹಾಗೂ ಸೆಹ್ವಾಗ್ ಈ ಮೈಲಿಗಲ್ಲು ತಲುಪಿದ್ದರು. ಇದೇ ವೇಳೆ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 350 ಸಿಕ್ಸರ್ ಸಹ ಪೂರೈಸಿದರು.

ಪಾಂಟಿಂಗ್ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಸರಿಗಟ್ಟಿದ ಗೇಲ್..!

ಚಿನ್ನಸ್ವಾಮಿ ಮೈದಾನದಲ್ಲಿ ಕೊಹ್ಲಿ 2500 ರನ್! 

ಐಪಿಎಲ್‌ನಲ್ಲಿ ಮೊದಲ ಆವೃತ್ತಿಯಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ಕೊಹ್ಲಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಲವು ಅಂತರಾಷ್ಟ್ರೀಯ ಪಂದ್ಯಗಳನ್ನೂ ಆಡಿದ್ದಾರೆ. ಬುಧವಾರ ಕೊಹ್ಲಿ ಚಿನ್ನಸ್ವಾಮಿಯಲ್ಲಿ ಟಿ20 ಮಾದರಿಯಲ್ಲಿ 25000 ರನ್ ಪೂರೈಸಿದರು. 

Latest Videos
Follow Us:
Download App:
  • android
  • ios