ನವದೆಹಲಿ(ಜೂ.15): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನೇರವಾಗಿ ತಮ್ಮ ಅನಿಸಿಕೆಗಳನ್ನು ಹೇಳಿಬಿಡುತ್ತಾರೆ. ಇದೀಗ ವಿರಾಟ್ ಕೊಹ್ಲಿ ನಾಯಕತ್ವದ ಕುರಿತು ಮತ್ತೆ ಗುಡುಗಿದ್ದಾರೆ. ಕೊಹ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್ ಅನ್ನೋದರಲ್ಲಿ ಎರಡು ಮಾತಿಲ್ಲ. ಆದರೆ ನಾಯಕನಾಗಿ ವಿರಾಟ್ ಕೊಹ್ಲಿ ಸಾಧನೆ ಶೂನ್ಯ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ಆಸ್ಟ್ರೇಲಿಯಾ ರಸ್ತೆಗಳಿಗೆ ಕಪಿಲ್ ದೇವ್, ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಹೆಸರು..!.

ವೆಸ್ಟ್ ಇಂಡೀಸ್ ದಿಗ್ಗಜ ಬ್ರಿಯಾನ್ ಲಾರಾ, ಸ್ಥಿರ ಪ್ರದರ್ಶನದ ಮೂಲಕ ರನ್ ಕೊಳ್ಳೆ ಹೊಡೆದಿದ್ದಾರೆ. ಸೌತ್ ಆಫ್ರಿಕಾ ಆಲ್ರೌಂಡರ್ ಜಾಕ್ ಕಾಲಿಸ್ ದಿಗ್ಗಜ ಕ್ರಿಕೆಟಿಗನಾಗಿ ಬೆಳೆದಿದ್ದಾರೆ. ಆದರೆ ವೈಯುಕ್ತಿಕ ಸಾಧನೆ ಹೊರತು ಪಡಿಸಿದರೆ, ಮ್ಯಾಚ್ ವಿನ್ನರ್ ಆಗಿ ಗುರುತಿಸಿಕೊಳ್ಳಲಿಲ್ಲ ಎಂದು ಗಂಭೀರ್ ಹೇಳಿದ್ದಾರೆ. ವೈಯುಕ್ತಿ ಸಾಧನೆಗಿಂತ ತಂಡಕ್ಕಾಗಿ ಆಡಬೇಕಿದೆ. ಪ್ರಮುಖ ಸರಣಿಗಳಲ್ಲಿ ತಂಡವನ್ನು ಗೆಲ್ಲಿಸಿಕೊಡುವವನೇ ನಿಜವಾದ ನಾಯಕ ಎಂದು ಗಂಭೀರ್ ಹೇಳಿದ್ದಾರೆ.

ಪಾಕ್ ವಿರುದ್ಧದ ಪಂದ್ಯದಲ್ಲಿ 3 ರನ್ ಬಿಟ್ಟುಕೊಟ್ಟು ಧೋನಿಯಿಂದ ಉಗಿಸಿಕೊಂಡಿದ್ದೆ; ಕೊಹ್ಲಿ!...

2017ರ ಚಾಂಪಿಯನ್ಸ್ ಟ್ರೋಫಿ, 2019ರ ವಿಶ್ವಕಪ್ ಟೂರ್ನಿ ಸೇರಿದಂತೆ ಪ್ರಮಖ ಐಸಿಸಿ ಟೂರ್ನಿಗಳಲ್ಲಿ ವಿರಾಟ್ ಕೊಹ್ಲಿ ನಾಯಕತ್ವ ವಿಫಲವಾಗಿದೆ. ಟ್ರೋಫಿ ಕೈಗೆಟುಕಿಲ್ಲ. ಇತ್ತ ಐಪಿಎಲ್ ಟೂರ್ನಿಯಲ್ಲಿ ಬಲಿಷ್ಠ ಆಟಗಾರರನ್ನೊಳಗೊಂಡ ರಾಯಲ್ ಚಾಲೆಂಜರ್ಸ್ ತಂಡವನ್ನ ಮುನ್ನಡೆಸಿದರೂ ಕೊಹ್ಲಿಗೆ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಕೊಹ್ಲಿ ನಾಯಕತ್ವದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಗಂಭೀರ್ ಹೇಳಿದ್ದಾರೆ.