ಇಂದೋರ್(ನ.12): ಟೀಂ ಇಂಡಿಯಾ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ದದ ಟೆಸ್ಟ್ ಸರಣಿಗಾಗಿ ಇಂಧೋರ್‌ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಕೊಹ್ಲಿ, ಇದೀಗ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ. ಆದರೆ ಕೊಹ್ಲಿ ಅಭ್ಯಾಸ ಟೀಂ ಇಂಡಿಯಾ ಕ್ರಿಕೆಟಿಗರ ಜೊತೆ ಮಾಡಿಲ್ಲ. ಬದಲಾಗಿ ಮಕ್ಕಳ ಜೊತೆ ಇಂದೋರ್ ಗಲ್ಲಿಯಲ್ಲಿ ಕ್ರಿಕೆಟ್ ಆಡಿ ಗಮನಸೆಳೆದಿದ್ದಾರೆ.

ಇದನ್ನೂ ಓದಿ: ವಿದಾಯದ ನಂತರದ ಪ್ಲಾನ್ ಬಹಿರಂಗಪಡಿಸಿದ ವಿರಾಟ್ ಕೊಹ್ಲಿ!

ಇಂದೋರ್ ಕಾಂಪ್ಲೆಕ್ಸ್ ಒಂದರಲ್ಲಿ ಕೊಹ್ಲಿ ಚಿಕ್ಕ ಮಕ್ಕಳ ಜೊತೆ ಕಾಣಿಸಿಕೊಂಡಿದ್ದಾರೆ.  ಫ್ಲ್ಯಾಟ್ ಬ್ಯಾಟ್ ಹಿಡಿದು ಟೆನಿಸ್ ಬಾಲ್ ಎದುರಿಸಿದ್ದಾರೆ. ಮಕ್ಕಳ ಎಸೆತಕ್ಕೆ ಕೊಹ್ಲಿ ಭರ್ಜರಿ ಶಾಟ್ ಪ್ರಯೋಗಿಸಿದ್ದಾರೆ. ಬಳಿಕ ಮಕ್ಕಳಿಗೆ ಕೊಹ್ಲಿ ಬೌಲಿಂಗ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಇದನ್ನೂ ಓದಿ: ರೈನಾಗೆ ಭವೇಶ್ ಎಂದ ಕೊಹ್ಲಿ; ಸೀಕ್ರೆಟ್ ಬಹಿರಂಗ ಪಡಿಸಲು ಫ್ಯಾನ್ಸ್ ಆಗ್ರಹ!.

ಜಾಹೀರಾತಿ ಶೂಟಿಂಗ್‌ಗಾಗಿ ವಿರಾಟ್ ಕೊಹ್ಲಿ ಮಕ್ಕಳ ಜೊತೆ ಕ್ರಿಕೆಟ್ ಆಡಿದ್ದಾರೆ. ಜಾಹೀರಾತು ಹಾಗೂ ಶೂಟಿಂಹ್ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಬಾಂಗ್ಲಾದೇಶ ವಿರುದ್ದದ ಟೆಸ್ಟ್ ಸರಣಿಗೆ ಟೀಂ  ಇಂಡಿಯಾ ಈಗಾಗಲೇ ಕಸರತ್ತು ಆರಂಭಿಸಿದೆ.  ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ನವೆಂಬರ್ 14 ರಿಂದ ಇಂದೋರ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆಡಲಿದೆ. 

ನವೆಂಬರ್ 22 ರಿಂದ ಕೋಲ್ಕತಾದಲ್ಲಿ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಆಡಲಿದೆ. ಈ ಪಂದ್ಯ ಹಗಲು ರಾತ್ರಿ ಟೆಸ್ಟ್ ಆಯೋಜಿಸಲಾಗಿದೆ. ಈ ಮೂಲಕ ಇದೇ ಮೊದಲ ಭಾರಿಗೆ ಭಾರತ ಡೇ ಅಂಡ್ ನೈಟ್ ಟೆಸ್ಟ್ ಪಂದ್ಯ ಆಯೋಜಿಸುತ್ತಿದೆ.