ಐಸಿಸಿ ನೂತನ ಏಕದಿನ ಶ್ರೇಯಾಂಕ ಪ್ರಕಟಗೊಂಡಿದ್ದು, ಬ್ಯಾಟಿಂಗ್‌ ವಿಭಾಗದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕ್ರಮವಾಗಿ ಮೊದಲೆರಡು ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ದುಬೈ(ಜ.28): ಐಸಿಸಿ ನೂತನವಾಗಿ ಬಿಡುಗಡೆ ಮಾಡಿದೆ ಏಕದಿನ ಬ್ಯಾಟಿಂಗ್‌ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ ಮೊದಲೆರಡು ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಡೆತ್ ಓವರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ದದ ಕೊನೆಯ ಎರಡು ಏಕದಿನ ಪಂದ್ಯಗಳಲ್ಲಿ ಕ್ರಮವಾಗಿ 89 ಮತ್ತು 63 ರನ್‌ ಚಚ್ಚಿದ್ದರು. ಈ ಮೂಲಕ 870 ರೇಟಿಂಗ್ ಅಂಕಗಳೊಂದಿಗೆ ನಂ.1 ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಫಿಟ್ನೆಸ್ ಸಮಸ್ಯೆಯಿಂದಾಗಿ ಆಸ್ಟ್ರೇಲಿಯಾ ವಿರುದ್ದದ ಸೀಮಿತ ಓವರ್‌ಗಳ ಸರಣಿಯಿಂದ ವಂಚಿತರಾಗಿದ್ದ ರೋಹಿತ್ ಶರ್ಮಾ 842 ರೇಟಿಂಗ್ ಅಂಕ ಹೊಂದಿದ್ದು, ಬಾಬರ್‌ ಅಜಂ(837) ಅವರಿಗಿಂತ 5 ಅಂಕ ಹೆಚ್ಚಿರುವ ಕಾರಣ ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ. ಇನ್ನುಳಿದಂತೆ ರಾಸ್ ಟೇಲರ್‌ ಹಾಗೂ ಆರೋನ್ ಫಿಂಚ್‌ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.

ತಿಂಗಳ ಶ್ರೇಷ್ಠ ಕ್ರಿಕೆಟರ್: ಐಸಿಸಿಯಿಂದ ಹೊಸ ಪ್ರಶಸ್ತಿ..!

ಬೌಲಿಂಗ್‌ ವಿಭಾಗದಲ್ಲಿ ಕಿವೀಸ್‌ ವೇಗಿ ಟ್ರೆಂಟ್‌ ಬೌಲ್ಟ್ ಮೊದಲ ಸ್ಥಾನ ಕಾಯ್ದುಕೊಂಡಿದ್ದರೆ, ಮುಜೀಬ್ ಉರ್ ರೆಹಮಾನ್ ಹಾಗೂ ಜಸ್ಪ್ರೀತ್ ಬುಮ್ರಾ ಮೊದಲ 3 ಸ್ಥಾನ ಉಳಿಸಕೊಂಡಿದ್ದರೆ, ಬಾಂಗ್ಲಾದೇಶದ ಮೆಹದಿ ಹಸನ್‌ ಬರೋಬ್ಬರಿ 9 ಸ್ಥಾನ ಮೇಲೇರಿ 4ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

Scroll to load tweet…


ಇನ್ನು ಆಲ್ರೌಂಡರ್‌ ವಿಭಾಗದಲ್ಲಿ ಟಾಪ್ 5 ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಶಕೀಬ್ ಅಲ್ ಹಸನ್ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದರೆ, ಮೊಹಮ್ಮದ್ ನಬಿ, ಕ್ರಿಸ್ ವೋಕ್ಸ್, ಬೆನ್ ಸ್ಟೋಕ್ಸ್ ಹಾಗೂ ಇಮಾದ್ ವಾಸೀಂ ಕ್ರಮವಾಗಿ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.

Scroll to load tweet…