ವೆಸ್ಟ್ ಇಂಡೀಸ್ ಪ್ರವಾಸ ಮುಗಿಸಿ ತವರಿಗೆ ವಾಪಾಸ್ಸಾದ ವಿರಾಟ್ ಕೊಹ್ಲಿಚಾರ್ಟೆರ್ ಪ್ಲೈಟ್‌ನಲ್ಲಿ ಭಾರತಕ್ಕೆ ಬಂದಿಳಿದ ಕಿಂಗ್ ಕೊಹ್ಲಿಟಿ20 ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿರುವ ವಿರಾಟ್ ಕೊಹ್ಲಿ
ನವದೆಹಲಿ(ಆ.04): ಭಾರತ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ ಪ್ರವಾಸವನ್ನು ಅತ್ಯಂತ ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವೆಸ್ಟ್ ಇಂಡೀಸ್ ಎದುರಿನ ಎರಡನೇ ಟೆಸ್ಟ್ ಪಂದ್ಯವು ವಿರಾಟ್ ಕೊಹ್ಲಿ ಪಾಲಿಗೆ 500ನೇ ಅಂತಾರಾಷ್ಟ್ರೀಯ ಪಂದ್ಯ ಎನಿಸಿಕೊಂಡಿತ್ತು. ಆ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ರನ್ ಮಷೀನ್ ವಿರಾಟ್ ಕೊಹ್ಲಿ ಸ್ಮರಣೀಯವಾಗಿಸಿಕೊಂಡಿದ್ದರು.
ಟೆಸ್ಟ್ ಸರಣಿ ಮುಕ್ತಾಯದ ಬಳಿಕ ವಿರಾಟ್ ಕೊಹ್ಲಿ, ಮೂರು ಪಂದ್ಯಗಳ ಏಕದಿನ ಸರಣಿಗೆ ಸ್ಥಾನ ಪಡೆದಿದ್ದರು. ಆದರೆ ಮೊದಲ ಪಂದ್ಯವನ್ನಷ್ಟೇ ಆಡಿದ್ದರು. ಉಳಿದೆರಡು ಪಂದ್ಯಗಳಿಂದ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದರು. ಇನ್ನು ವಿಂಡೀಸ್ ಎದುರಿನ ಟಿ20 ಸರಣಿಗೆ ವಿರಾಟ್ ಕೊಹ್ಲಿ ಸ್ಥಾನ ಪಡೆದಿಲ್ಲ. ಇನ್ನು ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿರಾಟ್ ಕೊಹ್ಲಿ, ತಾವು ಒಬ್ಬರೇ ಚಾರ್ಟೆಡ್ ವಿಮಾನದ ಮೂಲಕ ಭಾರತಕ್ಕೆ ವಾಪಸ್ಸಾಗುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದರು. ಈ ಫೋಟೋ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಸಂಭ್ರಮಿಸಿದ್ದರೆ, ಮತ್ತೆ ಕೆಲವು ಟೀಕಾಕಾರರು ಕೊಹ್ಲಿಯ ಈ ನಡೆಯನ್ನು ಟ್ರೋಲ್ ಮಾಡಿದ್ದಾರೆ. ಚಾರ್ಟೆಡ್ ಪ್ಲೈಟ್‌ನಿಂದ ಬರುವುದರಿಂದ ಹೆಚ್ಚಿನ ಪ್ರಮಾಣದ ಕಾರ್ಬನ್ ಡೈ ಆಕ್ಸೈಡ್ ಬಿಡುಗಡೆಯಾಗುತ್ತದೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಟ್ರೋಲ್ ಮಾಡಿದ್ದಾರೆ.
ವಿಶ್ವಕಪ್‌ಗೆ ಕ್ಷಣಗಣನೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಸ್ಟಾರ್ ಕ್ರಿಕೆಟಿಗ..!
ಫ್ಯಾನ್ಸ್ ಹೀಗೆ ಟ್ರೋಲ್ ಮಾಡಲು ಕಾರಣವೂ ಇದೆ:
ಹೌದು, 2021ರ ದೀಪಾವಳಿ ಸಂದರ್ಭದಲ್ಲಿ ವಿರಾಟ್ ಕೊಹ್ಲಿ, ಜಾಗತಿಕ ತಾಪಮಾನ ಹಾಗೂ ಪರಿಸರ ಕಾಳಜಿಯ ಕುರಿತಂತೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದರು. ಆದೇ ರೀತಿ ದೀಪಾವಳಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಟ್ವೀಟ್ ಮೂಲಕ ಸಲಹೆ ನೀಡಿದ್ದರು. ಪಟಾಕಿ ಸುಡುವುದರಿಂದ ಹೆಚ್ಚು ಪರಿಸರಕ್ಕೆ ಹಾನಿಯಾಗುತ್ತದೆ. ದೀಪ ಹಚ್ಚುವ ಮೂಲಕ ದೀಪಾವಳಿ ಆಚರಿಸುವಂತೆ ಕರೆ ನೀಡಿದ್ದರು.
IPL 2024: RCB ತಂಡಕ್ಕೆ ಚಾಂಪಿಯನ್ ಕೋಚ್ ಸೇರ್ಪಡೆ..! ಇನ್ನಾದರೂ ಬದಲಾಗುತ್ತಾ ಬೆಂಗಳೂರು ಲಕ್?
ಇನ್ನು ಜಾಗತಿಕ ತಾಪಮಾನದ ಕುರಿತಂತೆ ಮಾತನಾಡಿದ್ದ ವಿರಾಟ್ ಕೊಹ್ಲಿ, ಜನರು ಸಾರ್ವಜನಿಕ ಸಂಪರ್ಕ ಸಾರಿಗೆಗಳಾದ ಬಸ್‌ಗಳನ್ನು, ಮೋಟರ್‌ಗಳನ್ನು ಹಾಗೂ ರೈಡ್ ಶೇರ್ ಸರ್ವಿಸ್‌ಗಳನ್ನು ಹೊಂದಿರುವಂತಹ ಓಲಾ ಇತ್ಯಾದಿ ಸೌಕರ್ಯಗಳನ್ನು ಬಳಸುವ ಮೂಲಕ ಪರಿಸರಕ್ಕೆ ಉತ್ತಮ ಕೊಡುಗೆ ನೀಡಬಹುದು ಎಂದು ಸಲಹೆ ನೀಡಿದ್ದರು. ಆದರೆ ವಿಪರ್ಯಾಸವೆಂದರೆ ಹೀಗೆ ಹೇಳುವ ಕೊಹ್ಲಿ, ಸ್ವತಃ ಚಾರ್ಚರ್ ಪ್ಲೈಟ್ ಬಳಸಿಕೊಂಡು ಭಾರತಕ್ಕೆ ಬಂದಿರುವ ಬಗ್ಗೆ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.
ಇನ್ನು ಕೊಹ್ಲಿ ಕ್ರಿಕೆಟ್ ವಿಚಾರಕ್ಕೆ ಬಂದರೆ, ವೆಸ್ಟ್ ಇಂಡೀಸ್ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಒಂದು ಅರ್ಧಶತಕ ಹಾಗೂ ಒಂದು ಶತಕ ಸಿಡಿಸಿದ್ದರು. ಇನ್ನು ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದರಾದರೂ, ಬ್ಯಾಟಿಂಗ್ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಇದಾದ ಬಳಿಕ ಉಳಿದೆರಡು ಪಂದ್ಯಗಳಿಂದ ವಿಶ್ರಾಂತಿ ಪಡೆದುಕೊಂಡಿದ್ದರು. ಇನ್ನು ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ಐರ್ಲೆಂಡ್ ಎದುರಿನ ಟಿ20 ಸರಣಿಗೂ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ವಿರಾಟ್ ಕೊಹ್ಲಿ ಆಗಸ್ಟ್ 30ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಕೂಡಿಕೊಳ್ಳಲಿದ್ದಾರೆ.
