ಐಪಿಎಲ್ ಟೂರ್ನಿ ಭರ್ಜರಿಯಾಗಿ ಆರಂಭಗೊಂಡಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹ್ಯಾಟ್ರಿಕ್ ಗೆಲುವು ದಾಖಲಿಸೋ ಮೂಲಕ 14ನೇ ಆವೃತ್ತಿಯನ್ನು ಅಷ್ಟೇ ಸ್ಮರಣೀಯವಾಗಿ ಆರಂಭಿಸಿದೆ. ಇದರ ನಡುವೆ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಮಹತ್ವದ ಸಂದೇಶ ನೀಡಿದ್ದಾರೆ.

ಚೆನ್ನೈ(ಏ.20): ಐಪಿಎಲ್ ಟೂರ್ನಿ ಅಭಿಮಾನಿಗಳಿಗೆ ಕ್ರಿಕೆಟ್ ರಸದೌತಣ ಸಿಗುತ್ತಿದೆ. ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ದೇಶದ ಜನತೆಗೆ ಮಹತ್ವದ ಸಂದೇಶ ನೀಡಿದ್ದಾರೆ. ಕೊರೋನಾ ವೈರಸ್ ದೇಶದೆಲ್ಲೆಡೆ ಹಬ್ಬುತ್ತಿರುವ ಕಾರಣ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

IPL 2021: ಕೆಕೆಆರ್‌ ವಿರುದ್ದದ ಅರ್‌ಸಿಬಿಗೆ ಹ್ಯಾಟ್ರಿಕ್ ಜಯ

ಎಲ್ಲರಿಗೂ ತಿಳಿದಿರುವಂತೆ ಕೊರೋನಾ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಪರಿಸ್ಥಿತಿ ಸವಾಲಾಗಿ ಪರಿಣಮಿಸುತ್ತಿದೆ. ಅಗತ್ಯ ವಸ್ತು ಅಥವಾ ತುರ್ತು ಅವಶ್ಯಕತೆಯಾಗಿ ಮನೆಯಿಂದ ಹೊರಹೋಗುವಾಗ ಮಾಸ್ಕ್ ಧರಿಸಲು ಮರೆಯಬೇಡಿ. ಸಾಮಾಜಿಕ ಅಂತರ, ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳುವುದನ್ನು ಮರೆಯಬೇಡಿ. ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯಗತ್ಯವಾಗಿದೆ. ಕೊರೋನಾ ವಿರುದ್ಧ ಹೋರಾಟದಲ್ಲಿ ತೊಡಗಿರುವ ಪೊಲೀಸ್ ಸಿಬ್ಬಂದಿಯನ್ನು ನಾವು ಬೆಂಬಲಿಸಬೇಕಿದೆ. ಇದಕ್ಕಾಗಿ ಕೊರೋನಾ ನಿಯಮ ಪಾಲಿಸಿ. ನೀವು ಸುರಕ್ಷಿತವಾಗಿದ್ದರೆ, ದೇಶ ಸುರಕ್ಷಿತ. ಎಲ್ಲರೂ ತಮ್ಮ ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕು ಎಂದು ವಿರಾಟ್ ಕೊಹ್ಲಿ ವಿಡಿಯೋ ಮೂಲಕ ಸಂದೇಶ ನೀಡಿದ್ದಾರೆ.

Scroll to load tweet…

ಕೊಹ್ಲಿ ವಿಡಿಯೋ ಸಂದೇಶವನ್ನು ದೆಹಲಿ ಪೊಲೀಸರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಷ್ಟೇ ಅಲ್ಲ ಎಲ್ಲರೂ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಲು ಮನವಿ ಮಾಡಿದ್ದಾರೆ. 

ದೇಶದ ಜನತೆಗೆ ಸಂದೇಶ ನೀಡಿರುವ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ, ಐಪಿಎಲ್ ಟೂರ್ನಿಯಲ್ಲಿ ದಿಟ್ಟ ಹೋರಾಟ ನೀಡುತ್ತಿದ್ದಾರೆ. ಇಷ್ಟೇ ಅಲ್ಲ ಕೊಹ್ಲಿ ನೇತೃತ್ವದಲ್ಲಿ ಆರ್‌ಸಿಬಿ ಸತತ 3 ಗೆಲವು ಕಂಡಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.