Asianet Suvarna News Asianet Suvarna News

Breaking: ಇಂಗ್ಲೆಂಡ್ ಎದುರಿನ ಮೊದಲೆರಡು ಟೆಸ್ಟ್‌ ಪಂದ್ಯದಿಂದ ಕೊನೆಯ ಕ್ಷಣದಲ್ಲಿ ಹಿಂದೆ ಸರಿದ ವಿರಾಟ್ ಕೊಹ್ಲಿ..!

"ಬಿಸಿಸಿಐ ವಿರಾಟ್ ಕೊಹ್ಲಿ ಕೈಗೊಂಡ ನಿರ್ಧಾರವನ್ನು ಗೌರವಿಸುತ್ತದೆ. ಇದೇ ಸಂದರ್ಭದಲ್ಲಿ ಬಿಸಿಸಿಐ ಮಾಧ್ಯಮದವರಿಗೆ ಹಾಗೂ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿಯ ಖಾಸಗಿತನಕ್ಕೆ ಧಕ್ಕೆ ನೀಡಬಾರದೆಂದು ಮನವಿ ಮಾಡಿಕೊಂಡಿದೆ". 

Virat Kohli withdraws from first two England Tests for personal reasons kvn
Author
First Published Jan 22, 2024, 4:10 PM IST | Last Updated Jan 22, 2024, 4:10 PM IST

ನವದೆಹಲಿ(ಜ.22): ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಮೊದಲೆರಡು ಟೆಸ್ಟ್ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದಾರೆ.

ಈ ಕುರಿತಂತೆ ಬಿಸಿಸಿಐ ಮಾಧ್ಯಮ ಪ್ರತಿಕ್ರಿಯೆ ನೀಡಿದ್ದು, "ವಿರಾಟ್ ಕೊಹ್ಲಿ ಈಗಾಗಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸೆಲೆಕ್ಟರ್ಸ್‌ ಹಾಗೂ ಮ್ಯಾನೇಜ್‌ಮೆಂಟ್ ಜತೆ ಸಮಾಲೋಚನೆ ನಡೆಸಿದ್ದಾರೆ. ದೇಶವನ್ನು ಪ್ರತಿನಿಧಿಸುವುದು ಯಾವಾಗಲೂ ಹೆಮ್ಮೆಯ ಸಂಗತಿಯಾಗಿದೆ. ಆದರೆ ಕೆಲವೊಂದು ವೈಯುಕ್ತಿಕ ಕಾರಣಗಳಿಂದ ಅನಿವಾರ್ಯವಾಗಿ ಹೊರಗುಳಿಯುವ ಸಂದರ್ಭ ಬರುತ್ತದೆ ಎಂದು ಬಿಸಿಸಿಐ ಮೀಡಿಯಾ ರಿಲೀಸ್‌ನಲ್ಲಿ ತಿಳಿಸಿದ್ದಾರೆ.

"ಬಿಸಿಸಿಐ ವಿರಾಟ್ ಕೊಹ್ಲಿ ಕೈಗೊಂಡ ನಿರ್ಧಾರವನ್ನು ಗೌರವಿಸುತ್ತದೆ. ಇದೇ ಸಂದರ್ಭದಲ್ಲಿ ಬಿಸಿಸಿಐ ಮಾಧ್ಯಮದವರಿಗೆ ಹಾಗೂ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿಯ ಖಾಸಗಿತನಕ್ಕೆ ಧಕ್ಕೆ ನೀಡಬಾರದೆಂದು ಮನವಿ ಮಾಡಿಕೊಂಡಿದೆ". 

ಇಂಗ್ಲೆಂಡ್‌ ಟೆಸ್ಟ್‌ ಗೆಲ್ಲಲು ಟೀಂ ಇಂಡಿಯಾ ಅಭ್ಯಾಸ ಶುರು..!

ಟೀಂ ಇಂಡಿಯಾ ರನ್‌ ಮಷೀನ್ ವಿರಾಟ್ ಕೊಹ್ಲಿ ಇಂಗ್ಲೆಂಡ್ ಎದುರು 42.36ರ ಬ್ಯಾಟಿಂಗ್ ಸರಾಸರಿಯಲ್ಲಿ 1991 ರನ್ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಎದುರಿನ ಸೀಮಿತ ಓವರ್‌ಗಳ ಸರಣಿ ಹಾಗೂ ಆಫ್ಘಾನಿಸ್ತಾನ ಎದುರಿನ ಮೊದಲೆರಡು ಟಿ20 ಸರಣಿಗೆ ಆಯ್ಕೆಗೆ ಅಲಭ್ಯರಾಗಿದ್ದರು.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯವು ಜನವರಿ 25ರಿಂದ ಹೈದರಾಬಾದ್‌ನಲ್ಲಿ ಆರಂಭವಾಗಲಿದೆ. ಇನ್ನು ಇದಾದ ಬಳಿಕ ಫೆಬ್ರವರಿ ಎರಡರಿಂದ ವೈಜಾಗ್, ರಾಜ್‌ಕೋಟ್, ರಾಂಚಿ ಹಾಗೂ ಕೊನೆಯ ಟೆಸ್ಟ್ ಪಂದ್ಯವು ಮಾರ್ಚ್‌ 7-11ರ ವರೆಗೆ ಧರ್ಮಶಾಲಾದಲ್ಲಿ ನಡೆಯಲಿದೆ.

ಮೂರನೇ ಮದುವೆಯಾದ ಶೋಯೆಬ್ ಮಲಿಕ್‌ರ ಭವಿಷ್ಯಕ್ಕೆ ಸಾನಿಯಾ ಮಿರ್ಜಾ ಶುಭ ಹಾರೈಕೆ..!

ಇಂಗ್ಲೆಂಡ್ ಎದುರಿನ ಮೊದಲೆರಡು ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಕೆಎಸ್ ಭರತ್ (ವಿ.ಕೀ), ಧ್ರುವ್ ಜುರೆಲ್ (ವಿ.ಕೀ), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

Latest Videos
Follow Us:
Download App:
  • android
  • ios