ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ, ರೋಹಿತ್ ಶರ್ಮಾ ಕುಟುಂಬ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಕ್ರಿಕೆಟಿಗರ ವಿಶೇಷ ದೀಪಾವಳಿ ಸಡಗರ ಇಲ್ಲಿದೆ.

ಮುಂಬೈ(ಅ.28): ಸೌತ್ ಆಫ್ರಿಕಾ ಸರಣಿ ಮುಗಿಸಿ ವಿಶ್ರಾಂತಿ ಜಾರಿರುವ ಟೀಂ ಇಂಡಿಯಾ ಕ್ರಿಕೆಟರ್ಸ್ ಇದೀಗ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಮುಳುಗಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ ನ.3ರಿಂದ ಆರಂಭಗೊಳ್ಳಲಿದೆ. ಈ ಸರಣಿಯಿಂದ ವಿಶ್ರಾಂತಿ ಪಡೆದಿರುವ ನಾಯಕ ವಿರಾಟ್ ಕೊಹ್ಲಿ, ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.

ಇದನ್ನೂ ಓದಿ: ಸಮಸ್ತ ಭಾರತೀಯರಿಗೆ ದೀಪಾವಳಿ ಶುಭಕೋರಿದ ವಿಶ್ವ ಕ್ರಿಕೆಟರ್ಸ್!

ಬಾಂಗ್ಲಾ ವಿರುದ್ದದ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿರುವ ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೆ ಹಾಗೂ ಪುತ್ರಿ ಸಮೈರಾ ಜೊತೆ ದೀಪಾವಳಿ ಆಚರಿಸಿದ್ದಾರೆ. ಅಜಿಂಕ್ಯ ರಹಾನೆ, ಚೇತೇಶ್ಪರ್ ಪೂಜಾರ, ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ದೀಪಾವಳಿ ಹಬ್ಬದ ಆಚರಣೆ ಜೊತೆಗೆ ಎಲ್ಲಾ ಭಾರತೀಯರಿಗೆ ಹಬ್ಬಕ್ಕೆ ಶುಭಕೋರಿದ್ದಾರೆ.

Scroll to load tweet…
View post on Instagram
Scroll to load tweet…
View post on Instagram
Scroll to load tweet…
Scroll to load tweet…
View post on Instagram