ವೈಜಾಗ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಪರ ಆರ್‌ಸಿಬಿ ಕ್ರಿಕೆಟಿಗ ರಜತ್ ಪಾಟೀದಾರ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಜಹೀರ್ ಖಾನ್, ರಜತ್ ಪಾಟೀದಾರ್‌ಗೆ ಟೆಸ್ಟ್ ಕ್ಯಾಪ್ ನೀಡುವ ಮೂಲಕ ತಂಡಕ್ಕೆ ಸ್ವಾಗತಿಸಿದರು.
ವಿಶಾಖಪಟ್ಟಣ(ಫೆ.02): ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಇಂಗ್ಲೆಂಡ್ ತಂಡವು ಗೆಲುವಿನ ನಾಗಾಲೋಟ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ. ಇನ್ನೊಂದೆಡೆ ಆತಿಥೇಯ ಭಾರತ ತಂಡವು, ಇಂಗ್ಲೆಂಡ್‌ಗೆ ತಿರುಗೇಟು ನೀಡಲು ಸಜ್ಜಾಗಿದೆ.
ವೈಜಾಗ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಪರ ಆರ್‌ಸಿಬಿ ಕ್ರಿಕೆಟಿಗ ರಜತ್ ಪಾಟೀದಾರ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಜಹೀರ್ ಖಾನ್, ರಜತ್ ಪಾಟೀದಾರ್‌ಗೆ ಟೆಸ್ಟ್ ಕ್ಯಾಪ್ ನೀಡುವ ಮೂಲಕ ತಂಡಕ್ಕೆ ಸ್ವಾಗತಿಸಿದರು. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಕೆ ಎಲ್ ರಾಹುಲ್, ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಸಿರಾಜ್ ತಂಡದಿಂದ ಹೊರಬಿದ್ದಿದ್ದು, ಇವರ ಬದಲಿಗೆ ಪಾಟೀದಾರ್, ಕುಲ್ದೀಪ್ ಯಾದವ್ ಹಾಗೂ ಮುಕೇಶ್ ಕುಮಾರ್ ತಂಡ ಕೂಡಿಕೊಂಡಿದ್ದಾರೆ.
ಸರ್ಫರಾಜ್‌ಗೆ ನಿರಾಸೆ: ಇನ್ನು ಸಾಕಷ್ಟು ಕಾಯುವಿಕೆಯ ಬಳಿಕ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಮುಂಬೈ ಮೂಲದ ಸರ್ಫರಾಜ್ ಖಾನ್ ಟೆಸ್ಟ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶಿ ಕ್ರಿಕೆಟ್‌ನಲ್ಲಿ ರನ್ ರಾಶಿಯನ್ನೇ ಗುಡ್ಡೆ ಹಾಕಿರುವ ಸರ್ಫರಾಜ್ ಖಾನ್‌ಗೆ ಮತ್ತೊಮ್ಮೆ ನಿರಾಸೆ ಎದುರಾಗಿದೆ.
Vizag Test: ಟೀಂ ಇಂಡಿಯಾಗೆ ಸರಣಿ ಸಮಬಲದ ಗುರಿ..!Vizag Test: ಟೀಂ ಇಂಡಿಯಾಗೆ ಸರಣಿ ಸಮಬಲದ ಗುರಿ..!
ಎರಡು ತಂಡಗಳ ಆಟಗಾರರ ಪಟ್ಟಿ ಹೀಗಿದೆ:
ಭಾರತ: ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಾಟೀದಾರ್, ಕೆ ಎಸ್ ಭರತ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್.
ಇಂಗ್ಲೆಂಡ್
ಜಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಜಾನಿ ಬೇರ್‌ಸ್ಟೋವ್, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್, ರೆಹನ್ ಅಹಮ್ಮದ್, ಟಾಮ್ ಹಾರ್ಟ್ಲಿ, ಶೋಯೆಬ್ ಬಷೀರ್, ಜೇಮ್ಸ್ ಆಂಡರ್‌ಸನ್.
ಪಂದ್ಯ: ಬೆಳಗ್ಗೆ 9.30ಕ್ಕೆ
ನೇರಪ್ರಸಾರ: ಸ್ಪೋರ್ಟ್ಸ್ 18, ಜಿಯೋ ಸಿನಿಮಾ
