ಎರಡನೇ ದಿನದಾಟದಂತ್ಯದ ವೇಳೆಗೆ ಎರಡನೇ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 28 ರನ್ ಕಲೆಹಾಕುವ ಮೂಲಕ ಒಟ್ಟಾರೆ 171 ರನ್‌ಗಳ ಮುನ್ನಡೆ ಪಡೆದಿತ್ತು. ಬೃಹತ್ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಮೂರನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಆರಂಭದಲ್ಲೇ ವೇಗಿ ಜೇಮ್ಸ್ ಆಂಡರ್‌ಸನ್ ಶಾಕ್ ನೀಡಿದರು.
ವಿಶಾಖಪಟ್ಟಣ(ಫೆ.04): ಪ್ರತಿಭಾನ್ವಿತ ಬ್ಯಾಟರ್ ಶುಭ್‌ಮನ್ ಗಿಲ್, ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಸಮಯೋಚಿತ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಆರಂಭಿಕ ಆಘಾತದಿಂದ ಕಂಗಾಲಾಗಿದ್ದ ಟೀಂ ಇಂಡಿಯಾಗೆ ಗಿಲ್ ಶತಕ ಸಿಡಿಸಿ ಆಸರೆಯಾಗಿದ್ದಾರೆ. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಗಿಲ್ ಬಾರಿಸಿದ ಮೂರನೇ ಶತಕವಾಗಿದೆ.
ಎರಡನೇ ದಿನದಾಟದಂತ್ಯದ ವೇಳೆಗೆ ಎರಡನೇ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 28 ರನ್ ಕಲೆಹಾಕುವ ಮೂಲಕ ಒಟ್ಟಾರೆ 171 ರನ್‌ಗಳ ಮುನ್ನಡೆ ಪಡೆದಿತ್ತು. ಬೃಹತ್ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಮೂರನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಆರಂಭದಲ್ಲೇ ವೇಗಿ ಜೇಮ್ಸ್ ಆಂಡರ್‌ಸನ್ ಶಾಕ್ ನೀಡಿದರು.
8 ವರ್ಷಗಳ ಬಳಿಕ ಮುದ್ದಾದ ಮಡದಿಯ ಮುಖ ತೋರಿಸಿದ ಇರ್ಫಾನ್ ಪಠಾಣ್..!
ದಕ್ಷಿಣ ಆಫ್ರಿಕಾ ಎದುರಿನ ಸರಣಿಯಿಂದ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸುತ್ತಿರುವ ಶುಭ್‌ಮನ್ ಗಿಲ್ ಬ್ಯಾಟ್‌ನಿಂದ ನಿರೀಕ್ಷಿತ ರನ್ ಹರಿದು ಬರುತ್ತಿರಲಿಲ್ಲ. ಹೀಗಾಗಿ ಗಿಲ್ ಸಾಕಷ್ಟು ಟೀಕೆಗಳಿಗೂ ಒಳಗಾಗಿದ್ದರೂ ಜತೆಗೆ ಒತ್ತಡವನ್ನೂ ಅನುಭವಿಸುತ್ತಿದ್ದರು. ಇಂತಹ ಸಂದರ್ಭದಲ್ಲಿ ಕ್ರೀಸ್‌ಗಿಳಿದ ಗಿಲ್ ತಮ್ಮ ಸಹಜ ಶೈಲಿಯ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಸರೆಯಾದರು. ಪರಿಸ್ಥಿತಿಗೆ ತಕ್ಕಂತೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಶುಭ್‌ಮನ್ ಗಿಲ್ ಟೆಸ್ಟ್ ವೃತ್ತಿಜೀವನದ ಮೂರನೇ ಶತಕ ಸಿಡಿಸಿ ಸಂಭ್ರಮಿಸಿದರು. ಒಟ್ಟು 132 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು.
ಮೂರನೇ ದಿನದಾಟದಲ್ಲಿ ಟೀಂ ಇಂಡಿಯಾ ತನ್ನ ಖಾತೆಗೆ ಒಂದು ರನ್ ಸೇರಿಸುತ್ತಿದ್ದಂತೆಯೇ ರೋಹಿತ್ ಶರ್ಮಾ(17) ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ದ್ವಿಶತಕ ವೀರ ಯಶಸ್ವಿ ಜೈಸ್ವಾಲ್ 17 ರನ್ ಗಳಿಸಿ ಆಂಡರ್‌ಸನ್‌ಗೆ ಎರಡನೇ ಬಲಿಯಾದರು.
ಅಯ್ಯರ್-ಗಿಲ್ ಜುಗಲ್ಬಂದಿ: 30 ರನ್‌ಗಳಿಗೆ ಆರಂಭಿಕರಿಬ್ಬರನ್ನು ಕಳೆದುಕೊಂಡು ಕಂಗಾಲಾಗಿದ್ದ ಟೀಂ ಇಂಡಿಯಾಗೆ ಮೂರನೇ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಸಮಯೋಚಿತ 81 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. 52 ಎಸೆತಗಳಲ್ಲಿ 29 ರನ್ ಸಿಡಿಸಿದ್ದ ಅಯ್ಯರ್ ದೊಡ್ಡ ಹೊಡೆತಕ್ಕೆ ಯತ್ನಿಸಿ ಬೆನ್ ಸ್ಟೋಕ್ಸ್ ಹಿಡಿದ ಅದ್ಭುತ ಕ್ಯಾಚ್‌ಗೆ ಪೆವಿಲಿಯನ್ ಸೇರಿದರು.
Vizag Test ಜಸ್ಪ್ರೀತ್ ಬುಮ್ರಾ ಬಿರುಗಾಳಿ; ಸಾಧಾರಣ ಮೊತ್ತಕ್ಕೆ ಇಂಗ್ಲೆಂಡ್ ಆಲೌಟ್
ಇನ್ನು ರಜತ್ ಪಾಟೀದಾರ್ ಹಾಗೂ ಗಿಲ್ ಜತೆಗಿನ ಜತೆಯಾಟ ಕೇವಲ 11 ರನ್‌ಗಳಿಗೆ ಕೊನೆಯಾಯಿತು. ಆದರೆ ಇದಾದ ಬಳಿಕ ಅಕ್ಷರ್ ಪಟೇಲ್ ಹಾಗೂ ಶುಭ್‌ಮನ್ ಗಿಲ್ 5ನೇ ವಿಕೆಟ್‌ಗೆ ಮುರಿಯದ 80 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ.
ಭಾರತದ ಹಿಡಿತದಲ್ಲಿ ವೈಜಾಗ್ ಟೆಸ್ಟ್: ಹೌದು ಆರಂಭಿಕ ಆಘಾತದ ಹೊರತಾಗಿಯೂ ಶುಭ್‌ಮನ್ ಗಿಲ್ ಬಾರಿಸಿದ ಸಮಯೋಚಿತ ಶತಕ ಹಾಗೂ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಎರಡನೇ ಇನಿಂಗ್ಸ್‌ನಲ್ಲಿ 54 ಓವರ್ ಅಂತ್ಯದ ವೇಳೆಗೆ4 ವಿಕೆಟ್ ಕಳೆದುಕೊಂಡು 205 ರನ್ ಬಾರಿಸಿದ್ದು, ಒಟ್ಟಾರೆ 348 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. ಈ ಮೂಲಕ ವೈಜಾಗ್ ಟೆಸ್ಟ್‌ನಲ್ಲಿ ಪ್ರವಾಸಿ ಆಂಗ್ಲರ ಮೇಲೆ ಟೀಂ ಇಂಡಿಯಾ ಬಿಗಿ ಹಿಡಿತ ಸಾಧಿಸಿದೆ.
