ಆತಿಥೇಯ ವೆಸ್ಟ್‌ ಇಂಡೀಸ್‌ ವಿರುದ್ಧದ ಡೊಮಿನಿಕಾ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇಬ್ಬರು ಆಟಗಾರರಿಗೆ ಪಾದಾರ್ಪಣಾ ಕ್ಯಾಪ್‌ ಹಸ್ತಾಂತರ ಮಾಡಿದೆ. ಎರಡು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯ ಇಂದಿನಿಂದ ಆರಂಭವಾಗಲಿದೆ. 

ಡೊಮಿನಿಕಾ (ಜು.12): ಆತಿಥೇಯ ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯ ಬುಧವಾರದಿಂದ ಆರಂಭವಾಗಲಿದೆ. ಡೊಮಿನಿಕಾದ ರೊಸೇಯುನಲ್ಲಿನ ವಿಂಡ್ಸರ್‌ ಪಾರ್ಕ್‌ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ವೆಸ್ಟ್‌ ಇಂಡೀಸ್ ತಂಡ ಮೊದಲು ಬ್ಯಾಟಿಂಗ್‌ ಮಾಡುವ ನಿರ್ಧಾರ ಮಾಡಿದೆ. ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ಯಶಸ್ವಿ ಜೈಸ್ವಾಲ್‌ ಹಾಗೂ ವಿಕೆಟ್‌ ಕೀಪರ್‌ ಇಶಾನ್‌ ಕಿಶನ್‌ಗೆ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಅವಕಾಶ ನೀಡಿದೆ.ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯವು ಡೊಮಿನಿಕಾದ ವಿಂಡ್ಸರ್ ಪಾರ್ಕ್‌ನಲ್ಲಿ ನಡೆಯುತ್ತಿದೆ. ವೆಸ್ಟ್ ಇಂಡೀಸ್ ನಾಯಕ ಕ್ರೇಗ್ ಬ್ರಾಥ್‌ವೈಟ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಅಲಿಕ್ ಅಥಾನಾಜ್ ವೆಸ್ಟ್ ಇಂಡೀಸ್ ಪರ ಪಾದಾರ್ಪಣೆ ಮಾಡುತ್ತಿದ್ದರೆ. ಟೀಮ್‌ ಇಂಡಿಯಾ ಪರವಾಗಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಪಾದಾರ್ಪಣೆ ಮಾಡಲಿದ್ದಾರೆ.

ನಾಲ್ಕು ವರ್ಷಗಳ ಬಳಿಕ ಎರಡೂ ತಂಡಗಳು ಟೆಸ್ಟ್‌ನಲ್ಲಿ ಮುಖಾಮುಖಿಯಾಗಲಿವೆ. 2019ರಲ್ಲಿ ಕೊನೆಯ ಬಾರಿಗೆ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಕಳೆದ 21 ವರ್ಷಗಳಿಂದ ಕೆರಿಬಿಯನ್ ತಂಡವು ಟೀಂ ಇಂಡಿಯಾವನ್ನು ಟೆಸ್ಟ್‌ನಲ್ಲಿ ಸೋಲಿಸಲು ಸಾಧ್ಯವಾಗಿಲ್ಲ. 18 ಮೇ 2002 ರಂದು ಕಿಂಗ್‌ಸ್ಟನ್‌ನಲ್ಲಿ ಭಾರತದ ವಿರುದ್ಧ ವೆಸ್ಟ್‌ ಇಂಡೀಸ್‌ ಕೊನೆಯ ಗೆಲುವು ಕಂಡಿತ್ತು.

ನಾಯಕ ರೋಹಿತ್ ಶರ್ಮಾ ಪ್ರವಾಸದ ಮೊದಲ ಪಂದ್ಯದಲ್ಲಿ ಇಬ್ಬರು ಯುವ ಆಟಗಾರರಿಗೆ ಟೆಸ್ಟ್ ತಂಡದಲ್ಲಿ ಪದಾರ್ಪಣೆ ಮಾಡುವ ಅವಕಾಶ ನೀಡಿದ್ದಾರೆ. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಯುವ ಆಟಗಾರರಿಗೆ ಕ್ಯಾಪ್ ನೀಡಿದರು. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಮತ್ತು ಯಶಸ್ವಿ ಜೈಸ್ವಾಲ್ ಇದೇ ಮೊದಲ ಬಾರಿಗೆ ಟೀಮ್‌ ಇಂಡಿಯಾ ಬಿಳಿ ಜೆರ್ಸಿಯಲ್ಲಿ ಆಡಲಿದ್ದಾರೆ. 

ಜೈಸ್ವಾಲ್ ರೋಹಿತ್ ಓಪನಿಂಗ್, ಗಿಲ್‌ಗೆ 3ನೇ ಕ್ರಮಾಂಕ: ಚೊಚ್ಚಲ ಪಂದ್ಯವನ್ನಾಡುತ್ತಿರುವ ಯಶಸ್ವಿ ಜೈಸ್ವಾಲ್ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಅನುಭವಿ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಬದಲಿಗೆ ಆರಂಭಿಕ ಆಟಗಾರ ಶುಭಮನ್ ಗಿಲ್ 3 ನೇ ಕ್ರಮಾಂಕದಲ್ಲಿ ಆಡಲಿದ್ದಾರೆ, ಆದರೆ ವಿಕೆಟ್ ಕೀಪರ್ ಇಶಾನ್ ಕಿಶನ್ ಮಧ್ಯಮ ಕ್ರಮಾಂಕದಲ್ಲಿ ಆಟವಾಡಲಿದ್ದಾರೆ ಎನ್ನಲಾಗಿದೆ.

ಸ್ವಲ್ಪ ಯಾಮಾರಿದ್ರೂ ಟೀಂ ಇಂಡಿಯಾಗೆ ವಿಂಡೀಸ್‌ ಎದುರು ಸೋಲು ತಪ್ಪಿದ್ದಲ್ಲ..!

ಭಾರತ (ಪ್ಲೇಯಿಂಗ್ ಇಲೆವೆನ್‌): ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್(ವಿ.ಕೀ), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್

ಗಿಲ್ ನಂ.3, ಯಶಸ್ವಿ ಓಪನ್ನರ್: ಯಾರು? ಯಾವ ಕ್ರಮಾಂಕ? ರೋಹಿತ್ ಹೇಳಿದ್ದೇನು?

ವೆಸ್ಟ್ ಇಂಡೀಸ್ (ಪ್ಲೇಯಿಂಗ್ ಇಲೆವೆನ್‌): ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿ.ಕೀ), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್