ಮುಂಬೈ(ಡಿ.11): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 3ನೇ ಹಾಗೂ ಅಂತಿಮ ಟಿ20 ಪಂದ್ಯ ಫೈನಲ್ ಸ್ವರೂಪವಾಹಿ ಮಾರ್ಪಟ್ಟಿದೆ. ಸರಣಿ 1-1 ಸಮಬಲ ವಾಗಿರುವ ಕಾರಣ, ಇಂದಿನ(ಡಿ.11) ಪಂದ್ಯ ಗೆದ್ದ ತಂಡ ಸರಣಿ ಕೈವಶ ಮಾಡಲಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ರವೀಂದ್ರ ಜಡೇಜಾ ಬದಲು, ವೇಗಿ ಮೊಹಮ್ಮದ್ ಶಮಿ ತಂಡ ಸೇರಿಕೊಂಡಿದ್ದಾರೆ. ಇನ್ನು ಯಜುವೇಂದ್ರ ಚಹಾಲ್ ಬದಲು ಕುಲ್ದೀಪ್ ಯಾದವ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಆದರೆ ವೆಸ್ಟ್ ಇಂಡೀಸ್ ಯಾವುದೇ ಬದಲಾವಣೆ ಮಾಡಿಲ್ಲ.

 

ಇದನ್ನೂ ಓದಿ: ಗಾಯಾಳು ಧವನ್ ಬದಲಿಗೆ ಟೀಂ ಇಂಡಿಯಾ ಸೇರಿಕೊಂಡ ಮಯಾಂಕ್!

ಮುಂಬೈನ ಇದೇ ವಾಂಖೆಡೆ ಮೈದಾದಲ್ಲಿ 2016ರ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತವನ್ನು ಮಣಿಸಿದ ವಿಂಡೀಸ್ ಫೈನಲ್ ಪ್ರವೇಶಿಸಿತ್ತು. ಅಂದು  ಭಾರತ ಮೊದಲು ಬ್ಯಾಟಿಂಗ್ ಮಾಡಿ ಸೋಲು ಕಂಡಿತ್ತು. 

ಹೈದರಾಬಾದ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 208 ರನ್ ಚೇಸ್ ಮಾಡಿ ಗೆಲುವು ಸಾಧಿಸಿತ್ತು. ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ ಕೊಹ್ಲಿ ಸೈನ್ಯಕ್ಕೆ, 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತೀರುಗೇಟು ನೀಡಿತ್ತು. 2ನೇ ಪಂದ್ಯದಲ್ಲಿ ವಿಂಡೀಸ್ 8 ವಿಕೆಟ್ ಗೆಲುವು ಸಾಧಿಸಿ ಸರಣಿ ಸಮಬಲ ಮಾಡಿಕೊಂಡಿತು.