Asianet Suvarna News Asianet Suvarna News

WI vs IND ಅಂತಿಮ ಪಂದ್ಯದಲ್ಲಿ ವಿಂಡೀಸ್‌ಗೆ 189 ರನ್ ಟಾರ್ಗೆಟ್, ಗೆಲುವಿನ ವಿಶ್ವಾಸದಲ್ಲಿ ಭಾರತ!

ಶ್ರೇಯಸ್ ಅಯ್ಯರ್ ಹಾಫ್ ಸೆಂಚುರಿ, ದೀಪಕ್ ಹೂಡ ಸ್ಫೋಟಕ ಬ್ಯಾಟಿಂಗ್ ನೆರವಿಂದ ಟೀಂ ಇಂಡಿಯಾ ಅಂತಿಮ ಟಿ20 ಪಂದ್ಯದಲ್ಲಿ 188 ರನ್ ಸಿಡಿಸಿದೆ.

WI vs IND Shreyas Iyer fifty help team india to set 189 run target to west indies ckm
Author
Bengaluru, First Published Aug 7, 2022, 10:01 PM IST

ಫ್ಲೋರಿಡಾ(ಆ.07):  ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಮಹತ್ವದ 4 ಬದಲಾವಣೆಯೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಶ್ರೇಯಸ್ ಅಯ್ಯರ್ ಹಾಫ್ ಸೆಂಚುರಿ, ದೀಪಕ್ ಹೂಡ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 188 ರನ್ ಸಿಡಿಸಿದೆ.  ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಇಶಾನ್ ಕಿಶನ್ ಕೇವಲ 11 ರನ್ ಸಿಡಿಸಿ ಔಟಾದರು. ಆದರೆ ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಹೂಡ ಜೊತೆಯಾಟದಿಂದ ಟೀಂ ಇಂಡಿಯಾ ಚೇತರಿಸಿಕೊಂಡಿತು. ದೀಪಕ್ ಹೂಡ 25 ಎಸೆತದಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನರೆವಿನಿಂದ 38 ರನ್ ಸಿಡಿಸಿ ಔಟಾದರು. 114 ರನ್‌ಗೆ ಭಾರತ 2ನೇ ವಿಕೆಟ್ ಕಳೆದುಕೊಂಡಿತು. ಆದರೆ ಶ್ರೇಯಸ್ ಅಯ್ಯರ್ ಹೋರಾಟ ಮುಂದುವರಿಸಿದರು. ಅಯ್ಯರ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು.

ಶ್ರೇಯಸ್ ಅಯ್ಯರ್ 40 ಎಸೆತದಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 64 ರನ್ ಸಿಡಿಸಿ ಔಟಾದರು. ಸಂಜು ಸ್ಯಾಮ್ಸನ್ 15 ರನ್ ಸಿಡಿಸಿ ಔಟಾದರು. ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಜೊತೆಯಾಟ ಟೀಂ ಇಂಡಿಯಾಗೆ ನೆರವಾಯಿತು. ಆದರೆ ಕಾರ್ತಿಕ್ 12 ರನ್ ಸಿಡಿಸಿ ಔಟಾದರು.  ಹಾರ್ದಿಕ್ ಪಾಂಡ್ಯ 16 ಎಸೆತದಲ್ಲಿ 28 ರನ್ ಸಿಡಿಸಿ ಔಟಾದರು. ಅಕ್ಸರ್ ಪಟೇಲ್ 9 ರನ್ ಸಿಡಿಸಿ ನಿರ್ಗಮಿಸಿದರು. ಭಾರತ ಒಟ್ಟು 7 ವಿಕೆಟ್ ಕಳೆದುಕೊಂಡು 188ರನ್ ಸಿಡಿಸಿತು. 

ಭಾರತ ಹಾಗೂ ವೆಸ್ಟ್ ಇಂಡೀಸ್ ಟಿ20 ಸರಣಿ
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯನ್ನು ಈಗಾಗಲೇ ಟೀಂ ಇಂಡಿಯಾ ಗೆದ್ದುಕೊಂಡಿದೆ. ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 68 ರನ್ ಗೆಲುವು ಸಾಧಿಸಿತ್ತು. ಈ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮುಗ್ಗರಿಸಿತು. ವಿಂಡೀಸ್ 5 ವಿಕೆಟ್ ಗೆಲುವು ದಾಖಲಿಸಿ ಸರಣಿಯನ್ನು 1-1 ಅಂತರದಲ್ಲಿ  ಸಮಬಲಗೊಳಿಸಿತು. ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕಮ್‌ಬ್ಯಾಕ್ ಮಾಡಿತು. 7 ವಿಕೆಟ್ ಗೆಲುವು ದಾಖಲಿಸಿದ ಟೀಂ ಇಂಡಿಯಾ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಸಾಧಿಸಿತು. ಮಹತ್ವದ 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 59 ರನ್ ಗೆಲುವು ದಾಖಲಿಸಿತು. ಈ ಮೂಲಕ 3-1 ಅಂತರದಲ್ಲಿ ಸರಣಿ ಕೈವಶ ಮಾಡಿತು. 
 

Follow Us:
Download App:
  • android
  • ios