Asianet Suvarna News Asianet Suvarna News

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ..!

ಟೀಂ ಇಂಡಿಯಾದ ತಾರಾ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಪಾರ್ಥಿವ್ ಪಟೇಲ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.

Wicket Keeper Batsman Parthiv Patel announces retirement from all formats of the Cricket kvn
Author
New Delhi, First Published Dec 9, 2020, 12:26 PM IST

ನವದೆಹಲಿ(ಡಿ.09): 2020 ಇಸವಿ ಕ್ರಿಕೆಟ್‌ ಜಗತ್ತಿನಲ್ಲಿ ಸಾಕಷ್ಟು ಏರಿಳಿತಗಳಿಗೆ ಸಾಕ್ಷಿಯಾಗಿದೆ. ಕಳೆದ ಆಗಸ್ಟ್ 15ರಂದು ಕ್ರಿಕೆಟ್‌ ದಿಗ್ಗಜರಾದ ಎಂ.ಎಸ್. ಧೋನಿ. ಸುರೇಶ್ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದೀಗ ಟೀಂ ಇಂಡಿಯಾದ ಮತ್ತೋರ್ವ ಸ್ಟಾರ್ ಕ್ರಿಕೆಟಿಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಹೌದು, ಟೀಂ ಇಂಡಿಯಾ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್ ಪಾರ್ಥಿವ್ ಪಟೇಲ್ 17 ವರ್ಷಗಳ ಸುದೀರ್ಘ ಕ್ರಿಕೆಟ್‌ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. 2003ರಲ್ಲಿ ನ್ಯೂಜಿಲೆಂಡ್ ವಿರುದ್ದ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಮೂಲಕ, ಈ ಸಾಧನೆ ಮಾಡಿದ ಅತಿ ಕಿರಿಯ ಬ್ಯಾಟ್ಸ್‌ಮನ್ ಎನ್ನುವ ಗೌರವಕ್ಕೆ ಪಾರ್ಥಿವ್ ಪಟೇಲ್ ಭಾಜನರಾಗಿದ್ದರು. 2003ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರಾದರೂ ಒಂದೇ ಒಂದು ಪಂದ್ಯವನ್ನಾಡಲು ಅವಕಾಶ ಸಿಕ್ಕಿರಲಿಲ್ಲ. ಇದಾದ ಬಳಿಕ ಎಂ ಎಸ್ ಧೋನಿ ವಿಕೆಟ್‌ ಕೀಪರ್ ಆಗಿ ಯಶಸ್ವಿಯಾಗುತ್ತಿದ್ದಂತೆ ಪಟೇಲ್ ಟೀಂ ಇಂಡಿಯಾದಿಂದ ಕಡೆಗಣಿಸಲ್ಪಟ್ಟರು.

ಇಂಡೋ-ಆಸೀಸ್‌ ಡೇ ಅಂಡ್ ನೈಟ್‌ ಟೆಸ್ಟ್‌ ಪಂದ್ಯದಿಂದ ಸ್ಟಾರ್ ಬ್ಯಾಟ್ಸ್‌ಮನ್‌ ಔಟ್..!

ಪಾರ್ಥಿವ್ ಪಟೇಲ್ ಭಾರತ ಪರ 25 ಟೆಸ್ಟ್ ಪಂದ್ಯಗಳನ್ನಾಡಿ 934 ರನ್ ಬಾರಿಸಿದ್ದಾರೆ. ಇನ್ನು ವಿಕೆಟ್‌ ಕೀಪರ್ ಆಗಿ 62 ಕ್ಯಾಚ್ ಪಡೆದು ಸೈ ಎನಿಸಿಕೊಂಡಿದ್ದಾರೆ. ಇನ್ನು 38 ಏಕದಿನ ಪಂದ್ಯಗಳನ್ನಾಡಿ 736 ರನ್ ಬಾರಿಸಿದ್ದು ಮಾತ್ರವಲ್ಲದೇ 30 ಕ್ಯಾಚ್ ಪಡೆದಿದ್ದಾರೆ. ಇನ್ನು ಪಾರ್ಥಿವ್ ಪಟೇಲ್ ಭಾರತ ಪರ 2 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇನ್ನು 187 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ಪಾರ್ಥಿವ್ ಪಟೇಲ್ 43.36ರ ಸರಾಸರಿಯಲ್ಲಿ 10,797 ರನ್ ಬಾರಿಸಿದ್ದಾರೆ.

ಇನ್ನು ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌, ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಸೇರಿದಂತೆ ಹಲವು ತಂಡಗಳ ಪರ ಪಾರ್ಥಿವ್ ಪಟೇಲ್ ಕಾಣಿಸಿಕೊಂಡಿದ್ದಾರೆ.
 

Follow Us:
Download App:
  • android
  • ios