ಲಖನೌ(ಮಾ.17): ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಕೊನೆಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಫೀಲ್ಡಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದೆ.  ಮಿಥಾಲಿ ರಾಜ್ ನೇತೃತ್ವದ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನು 1-3ರಲ್ಲಿ ಈಗಾಗಲೇ ಸೋತಿರುವ ಭಾರತ ಮಹಿಳಾ ತಂಡ, ಬುಧವಾರ ನಡೆಯಲಿರುವ 5ನೇ ಪಂದ್ಯದಲ್ಲಿ ಪ್ರತಿಷ್ಠೆಗಾಗಿ ಆಡಲಿದೆ. 2ನೇ ಪಂದ್ಯದಲ್ಲಿ 9 ವಿಕೆಟ್‌ ಗೆಲುವು ಸಾಧಿಸಿದ್ದನ್ನು ಹೊರತುಪಡಿಸಿದರೆ ಭಾರತ ಉಳಿದ ಮೂರು ಪಂದ್ಯಗಳಲ್ಲಿ ಸಂಘಟಿತ ಪ್ರದರ್ಶನ ತೋರಲು ವಿಫಲವಾಗಿದೆ. 

ಪೂನಂ ಶತಕ ವ್ಯರ್ಥ, ಏಕದಿನ ಸರಣಿ ಹರಿಣಗಳು ಪಾಲು..!

ಪ್ರಮುಖವಾಗಿ ಬೌಲಿಂಗ್‌ ವಿಭಾಗದಲ್ಲಿ ಭಾರತ ಕಳಪೆ ಆಟವಾಡಿದ್ದು ಸರಣಿ ಸೋಲಿಗೆ ಕಾರಣವಾಗಿದೆ. ಈ ಪಂದ್ಯದಲ್ಲಿ ಉತ್ತಮ ಆಟವಾಡಿ ಮುಂಬರುವ ಟಿ20 ಸರಣಿಗೆ ಸಿದ್ಧತೆ ನಡೆಸಲು ಭಾರತ ಎದುರು ನೋಡುತ್ತಿದೆ.

ಪಂದ್ಯ ಆರಂಭ: ಬೆಳಗ್ಗೆ 9ಕ್ಕೆ