Asianet Suvarna News Asianet Suvarna News

ವಿಶ್ವಕಪ್ ಉದ್ಘಾಟನಾ ಪಂದ್ಯದಿಂದ ಹೊರಬಿದ್ದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್..!

ಕೇನ್ ವಿಲಿಯಮ್ಸನ್ ವಿಶ್ವಕಪ್ ಟೂರ್ನಿಯಲ್ಲಿ ನಾಯಕರಾಗಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ಇನ್ನು ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕೇನ್, ಉದ್ಘಾಟನಾ ಪಂದ್ಯಕ್ಕೆ ಮಾತ್ರ ಅಲಭ್ಯರಾಗಲಿದ್ದಾರೆ.

World Cup 2023 Kane Williamson to miss New Zealand opening match against England kvn
Author
First Published Sep 29, 2023, 3:34 PM IST

ಅಹಮದಾಬಾದ್(ಸೆ.29): ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ಆರಂಭವಾಗಲಿದೆ. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಕಣಕ್ಕಿಳಿಯುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಆದರೆ ಉದ್ಘಾಟನಾ ಪಂದ್ಯದಲ್ಲಿ ನಾಯಕ ಕೇನ್ ವಿಲಿಯಮ್ಸನ್ ಅನುಪಸ್ಥಿತಿ ತಂಡವನ್ನು ಕಾಡುವ ಸಾಧ್ಯತೆಯಿದೆ.

ಕೇನ್ ವಿಲಿಯಮ್ಸನ್ ವಿಶ್ವಕಪ್ ಟೂರ್ನಿಯಲ್ಲಿ ನಾಯಕರಾಗಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ಇನ್ನು ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕೇನ್, ಉದ್ಘಾಟನಾ ಪಂದ್ಯಕ್ಕೆ ಮಾತ್ರ ಅಲಭ್ಯರಾಗಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ಎದುರಿನ ಉದ್ಘಾಟನಾ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಟಾಮ್ ಲೇಥನ್ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸುವುದು ಬಹುತೇಕ ಖಚಿತ ಎನಿಸಿದೆ. 

ಕೊನೆಯ ಕ್ಷಣದಲ್ಲಿ ಗೇಮ್ ಚೇಂಜರ್‌ ಆಟಗಾರನನ್ನು ಕರೆ ತಂದ ಆಸೀಸ್, 6ನೇ ವಿಶ್ವಕಪ್ ಗೆಲ್ಲಲು ಕಾಂಗರೂ ಪಡೆ ರೆಡಿ..!

ಕೇನ್ ವಿಲಿಯಮ್ಸನ್ ಸಂಪೂರ್ಣ ಫಿಟ್ ಆಗುವವರೆಗೂ ನ್ಯೂಜಿಲೆಂಡ್ ತಂಡವು ಅವರ ಮೇಲೆ ಯಾವುದೇ ಹೆಚ್ಚಿನ ಒತ್ತಡ ಹೇರಲು ಬಯಸುವುದಿಲ್ಲ ಎಂದು ಕಿವೀಸ್ ಕ್ರಿಕೆಟ್ ತಂಡದ ಹೆಡ್‌ ಕೋಚ್ ಗ್ಯಾರಿ ಸ್ಟೆಡ್ ತಿಳಿಸಿದ್ದಾರೆ. ಸದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಎದುರಿನ ಅಭ್ಯಾಸ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲೇಥಮ್, ನಾಯಕನಾಗಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

 
 
 
 
 
 
 
 
 
 
 
 
 
 
 

A post shared by BLACKCAPS (@blackcapsnz)

ನ್ಯೂಜಿಲೆಂಡ್ ಕ್ರಿಕೆಟ್‌ ತಂಡವು ಕಳೆದೆರಡು ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿ ರನ್ನರ್ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದು, ಇದೀಗ ಭಾರತದಲ್ಲಿ ಚೊಚ್ಚಲ ಬಾರಿಗೆ ವಿಶ್ವಕಪ್ ಎತ್ತಿಹಿಡಿಯಲು ಎದುರು ನೋಡುತ್ತಿದೆ. 2015ರಲ್ಲಿ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಕಿವೀಸ್ ತಂಡವು ಆಸ್ಟ್ರೇಲಿಯಾಗೆ ಶರಣಾಗಿತ್ತು. ಇನ್ನು 2019ರಲ್ಲಿ ಇಂಗ್ಲೆಂಡ್ ಎದುರು ಬೌಂಡರಿ ಕೌಂಟ್ ಆಧಾರದಲ್ಲಿ ಆತಿಥೇಯ ಇಂಗ್ಲೆಂಡ್‌ಗೆ ಶರಣಾಗಿತ್ತು. ಇದೀಗ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶತಾಯಗತಾಯ ಕಪ್ ಗೆಲ್ಲುವ ಛಲದೊಂದಿಗೆ ಭಾರತಕ್ಕೆ ಬಂದಿಳಿದೆ. ಸದ್ಯ ನ್ಯೂಜಿಲೆಂಡ್ ತಂಡ ಕೂಡಾ ಏಕದಿನ ವಿಶ್ವಕಪ್ ಸೆಮೀಸ್‌ಗೇರಬಲ್ಲ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.

ಇಂದಿನಿಂದ ಏಕದಿನ ವಿಶ್ವಕಪ್‌ ಅಭ್ಯಾಸ ಪಂದ್ಯಗಳು; ಮೊದಲ ದಿನವೇ 3 ಪ್ರಾಕ್ಟೀಸ್ ಮ್ಯಾಚ್

ಏಕದಿನ ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ ತಂಡ ಹೀಗಿದೆ:

ಕೇನ್ ವಿಲಿಯಮ್ಸನ್(ನಾಯಕ), ವಿಲ್ ಯಂಗ್, ಡೆವೊನ್ ಕಾನ್‌ವೇ, ಡೇರಲ್ ಮಿಚೆಲ್, ಟಾಮ್ ಲೇಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಫ್ಸ್‌, ರಚಿನ್ ರವೀಂದ್ರ, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮಾರ್ಕ್‌ ಚಾಂಪ್ಮನ್, ಇಶ್ ಸೋಧಿ, ಟ್ರೆಂಟ್ ಬೌಲ್ಟ್, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್.
 

Follow Us:
Download App:
  • android
  • ios