Asianet Suvarna News Asianet Suvarna News

ಅಕ್ಷರ್ ಪಟೇಲ್ ಸ್ಥಾನಕ್ಕೆ ಅಶ್ವಿನ್ ಬದಲಿಗೆ ಈ ಆಟಗಾರನಿಗೆ ಸ್ಥಾನ ನೀಡಬೇಕಿತ್ತು ಎಂದ ವಿಶ್ವಕಪ್ ಹೀರೋ ಯುವಿ..!

ಅಕ್ಟೋಬರ್ 05ರಂದು ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 2019ರ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. 

World Cup 2023 Yuvraj Singh feels that Washington Sundar should have replaced Axar Patel instead of R Ashwin kvn
Author
First Published Sep 30, 2023, 5:57 PM IST

ನವದೆಹಲಿ(ಸೆ.30): ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಆತಿಥೇಯ ಭಾರತ ಕೂಡಾ 15 ಆಟಗಾರನ್ನೊಳಗೊಂಡ ಬಲಿಷ್ಠ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಕೊನೆಯ ಕ್ಷಣದಲ್ಲಿ ಗಾಯಾಳು ಅಕ್ಷರ್ ಪಟೇಲ್ ಬದಲಿಗೆ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತ 15 ಆಟಗಾರ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಟೀಂ ಇಂಡಿಯಾ ಮಾಜಿ ಆಲ್ರೌಂಡರ್ ಹಾಗೂ 2011ರ ಏಕದಿನ ವಿಶ್ವಕಪ್ ಗೆಲುವಿನ ರೂವಾರಿ ಯುವರಾಜ್ ಸಿಂಗ್, ಈ ಕುರಿತಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ರವಿಚಂದ್ರನ್ ಅಶ್ವಿನ್ ಆಯ್ಕೆ ಮಾಡುವ ಬದಲು ವಾಷಿಂಗ್ಟನ್ ಸುಂದರ್ ಅವರಿಗೆ ಭಾರತ ತಂಡದಲ್ಲಿ ಸ್ಥಾನ ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅನುಭವಿ ಆಫ್‌ಸ್ಪಿನ್ನರ್ ಆಗಿರುವ ರವಿಚಂದ್ರನ್ ಅಶ್ವಿನ್ ಈ ಮೊದಲು 2011 ಹಾಗೂ 2015ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ 2023ರ ವಿಶ್ವಕಪ್ ಅಶ್ವಿನ್ ಆಡಲಿರುವ ಮೂರನೇ ಏಕದಿನ ವಿಶ್ವಕಪ್ ಎನಿಸಲಿದೆ. ಇದುವರೆಗೂ ಒಟ್ಟು 8 ಏಕದಿನ ವಿಶ್ವಕಪ್ ಪಂದ್ಯಗಳನ್ನಾಡಿರುವ ಅಶ್ವಿನ್ 13 ವಿಕೆಟ್ ಕಬಳಿಸಿದ್ದಾರೆ. ಈ ಮೊದಲು ಅಶ್ವಿನ್ 2023ರ ಏಕದಿನ ವಿಶ್ವಕಪ್ ಪ್ರಾರಂಭಿಕ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಆದರೆ ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಬಾಂಗ್ಲಾದೇಶ ಎದುರಿನ ಪಂದ್ಯದ ವೇಳೆ ಗಾಯಗೊಂಡಿದ್ದ ಅಕ್ಷರ್ ಪಟೇಲ್ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಅಕ್ಷರ್ ಪಟೇಲ್ ಬದಲಿಗೆ ರವಿಚಂದ್ರನ್ ಅಶ್ವಿನ್‌ಗೆ ವಿಶ್ವಕಪ್ ತಂಡದೊಳಗೆ ಮಣೆ ಹಾಕಲಾಗಿದೆ. 

World Cup 2023 ಭಾರತ-ಪಾಕ್ ಅಲ್ಲವೇ ಅಲ್ಲ, ಈ ತಂಡ ವಿಶ್ವಕಪ್ ಗೆಲ್ಲುವ ಫೇವರೇಟ್ ಎಂದ ಸನ್ನಿ..!

ಈ ಕುರಿತಂತೆ ಹಿಂದೂಸ್ತಾನ್ ಟೈಮ್ಸ್ ಜತೆಗೆ ಮಾತನಾಡಿದ ಯುವರಾಜ್ ಸಿಂಗ್, ಅಕ್ಷರ್ ಪಟೇಲ್ ಅವರ ಸ್ಥಾನಕ್ಕೆ ಅಶ್ವಿನ್ ಬದಲಿಗೆ ವಾಷಿಂಗ್ಟನ್ ಸುಂದರ್ ಆಯ್ಕೆಯಾಗಬಹುದು ಅಂದುಕೊಂಡಿದ್ದೆ. ಎಡಗೈ ಬ್ಯಾಟರ್ ಆಗಿರುವ ವಾಷಿಂಗ್ಟನ್ ಸುಂದರ್, 7 ಕ್ರಮಾಂಕದಲ್ಲಿ ಬ್ಯಾಟಿಂಗ್‌ನಲ್ಲೂ ತಂಡಕ್ಕೆ ಆಸರೆಯಾಗುವ ಕ್ಷಮತೆ ಹೊಂದಿದ್ದರು ಎಂದು ಹೇಳಿದ್ದಾರೆ. 

"ಅಕ್ಷರ್ ಇದೀಗ ತಂಡದಿಂದ ಹೊರಬಿದ್ದಿರುವುದರಿಂದ 7ನೇ ಕ್ರಮಾಂಕದಲ್ಲಿ ಯಾರು ಬ್ಯಾಟಿಂಗ್ ಮಾಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಒಂದು ವೇಳೆ ಅಕ್ಷರ್ ಪಟೇಲ್ ಬದಲಿಗೆ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದರೇ, 7ನೇ ಕ್ರಮಾಂಕದಲ್ಲಿ ಎಡಗೈ ಬ್ಯಾಟರ್ ಆಡಿಸಲು ಅವಕಾಶವಾಗುತ್ತಿತ್ತು. ಆದರೆ ದುರಾದೃಷ್ಟವಶಾತ್ ಯುಜುವೇಂದ್ರ ಚಹಲ್ ಅವರಂತೆ ಸುಂದರ್ ಕೂಡಾ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲ. ಇದನ್ನು ಹೊರತುಪಡಿಸಿದರೆ ನನ್ನ ಪ್ರಕಾರ ತಂಡದ ಕಾಂಬಿನೇಷನ್ ಚೆನ್ನಾಗಿದೆ ಎಂದು" ಯುವರಾಜ್ ಸಿಂಗ್ ಹೇಳಿದ್ದಾರೆ.

ಅನುಷ್ಕಾ ಶರ್ಮಾ ಪ್ರಗ್ನೆಂಟ್, ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕಿಂಗ್ ಕೊಹ್ಲಿ..?

ಅಕ್ಟೋಬರ್ 05ರಂದು ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 2019ರ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. 

ಇನ್ನು ಅತಿಥೇಯ ಭಾರತ ಕ್ರಿಕೆಟ್ ತಂಡವು ಅಕ್ಟೋಬರ್ 08ರಂದು 5 ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ದ ಚೆನ್ನೈನಲ್ಲಿ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

ವಿಶ್ವಕಪ್‌ಗೆ ಭಾರತ ತಂಡ: 

ರೋಹಿತ್‌ ಶರ್ಮಾ(ನಾಯಕ), ಹಾರ್ದಿಕ್‌ ಪಾಂಡ್ಯ(ಉಪನಾಯಕ), ಶುಭ್‌ಮನ್ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆ.ಎಲ್‌.ರಾಹುಲ್‌, ರವೀಂದ್ರ ಜಡೇಜಾ, ಶಾರ್ದೂಲ್‌ ಠಾಕೂರ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮದ್‌ ಸಿರಾಜ್‌, ಕುಲ್ದೀಪ್‌ ಯಾದವ್‌, ಮೊಹಮದ್‌ ಶಮಿ, ಆರ್‌.ಅಶ್ವಿನ್‌, ಇಶಾನ್‌ ಕಿಶನ್‌, ಸೂರ್ಯಕುಮಾರ್‌ ಯಾದವ್‌.

Follow Us:
Download App:
  • android
  • ios