World Cup Semifinals: ಕಿವೀಸ್ ಎದುರು ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ ಕೂಡಾ ಯಾವುದೇ ಬದಲಾವಣೆ ಮಾಡಿಲ್ಲ.
ಮುಂಬೈ(ನ.15): 2023ರ ಐಸಿಸಿ ಏಕದಿನ ವಿಶ್ವಕಪ್ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ ಕೂಡಾ ಯಾವುದೇ ಬದಲಾವಣೆ ಮಾಡಿಲ್ಲ.
ಸೇಡಿನ ಕದನ: 2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿಯೂ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಭಾರತ ಎದುರು ನ್ಯೂಜಿಲೆಂಡ್ ತಂಡವು ರೋಚಕ ಜಯ ಸಾಧಿಸಿತ್ತು. ಆ ಸೋಲಿಗೆ ಟೀಂ ಇಂಡಿಯಾ ಆಟಗಾರರು ಕಣ್ಣೀರಿಟ್ಟಿದ್ದರು. ಇದೀಗ 4 ವರ್ಷಗಳ ಬಳಿಕ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಕಳೆದ ವಿಶ್ವಕಪ್ ಸೆಮೀಸ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಎದುರು ನೋಡುತ್ತಿದೆ.
ಮುಂಬೈನಲ್ಲಿ ಒಂದೇ ಒಂದು ಸೆಮಿಫೈನಲ್ ಗೆದ್ದಿಲ್ಲ ಭಾರತ..! ಹೋಂಗ್ರೌಂಡ್‌ನಲ್ಲಿ ತ್ರಿಮೂರ್ತಿಗಳಿಗೆ ಬಿಗ್ ಚಾಲೆಂಜ್..!
ಪಂದ್ಯಕ್ಕಿದೆ ಮೀಸಲು ದಿನ
2 ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಕ್ಕೆ ಐಸಿಸಿ ಮೀಸಲು ದಿನ ನಿಗದಿಪಡಿಸಿದೆ. ಅಂದರೆ ಮಳೆಯಿಂದಾಗಿ ಬುಧವಾರ ತಲಾ 20 ಓವರ್ ಆಟವೂ ಸಾಧ್ಯವಾಗದಿದ್ದರೆ ಮೀಸಲು ದಿನದಂದು ಪಂದ್ಯ ಮುಂದುವರಿಯಲಿದೆ.
4 ಬಾರಿ ಸೆಮೀಸ್ ಸೋತಿದೆ ಭಾರತ!
ಈ ವರೆಗೆ 7 ಬಾರಿ ಸೆಮೀಸ್ ಆಡಿರುವ ಭಾರತಕ್ಕೆ ಇದು 8ನೇ ಸೆಮಿಫೈನಲ್. 3 ಬಾರಿ ಫೈನಲ್‌ಗೇರಿರುವ ಭಾರತ 4 ಬಾರಿ ಸೆಮಿಫೈನಲ್‌ನಲ್ಲೇ ಮುಗ್ಗರಿಸಿದೆ. 1987, 1996, 2015, 2019ರಲ್ಲಿ ಸೆಮೀಸ್‌ನಲ್ಲಿ ಅಭಿಯಾನ ಕೊನೆಗೊಳಿಸಿದೆ. 1983, 2003 ಹಾಗೂ 2011ರಲ್ಲಿ ಫೈನಲ್‌ಗೇರಿದ್ದು, 2003ರಲ್ಲಿ ರನ್ನರ್-ಅಪ್ ಆಗಿತ್ತು.
ಕ್ರಿಕೆಟ್ ದೇವರ ನಾಡಿನಲ್ಲಿ ಕ್ರಿಕೆಟ್ ದೇವರ ದಾಖಲೆ ಬ್ರೇಕ್..? ಕೊಹ್ಲಿ ಮೇಲೆ ಎಲ್ಲರ ಕಣ್ಣು
ಕಿವೀಸ್‌ನ ಸೆಮೀಸ್ ಇತಿಹಾಸ ಕಳಪೆ
ಭಾರತಕ್ಕೆ ಹೋಲಿಸಿದರೆ ನ್ಯೂಜಿಲೆಂಡ್‌ನ ಸೆಮೀಸ್ ದಾಖಲೆ ಕಳಪೆಯಾಗಿದ್ದು, ಕಳೆದೆರಡು ಬಾರಿ ಫೈನಲ್‌ಗೇರಿದ್ದು ಬಿಟ್ಟರೆ ಉಳಿದ 6 ಬಾರಿ ಸೆಮೀಸ್‌ನಲ್ಲಿ ಸೋಲುಂಡಿದೆ. 1975, 1979, 1992, 1999, 2007 ಹಾಗೂ 2011ರಲ್ಲಿ ಸೆಮಿಫೈನಲ್‌ನಲ್ಲಿ ಸೋಲನಭುವಿಸಿದೆ.
ಆಟಗಾರರ ಪಟ್ಟಿ ಹೀಗಿದೆ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ನ್ಯೂಜಿಲೆಂಡ್: ಡೆವೊನ್ ಕಾನ್‌ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್(ನಾಯಕ), ಡೇರಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲೇಥಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗ್ಯೂಸನ್, ಟ್ರೆಂಟ್ ಬೌಲ್ಟ್.
ಪಂದ್ಯ ಆರಂಭ: ಮಧ್ಯಾಹ್ನ 2ಕ್ಕೆ,
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ ಹಾಟ್‌ಸ್ಟಾರ್