ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ ಫೈನಲ್ ಪಂದ್ಯಕ್ಕೆ ಬಿಸಿಸಿಐ ಬಲಿಷ್ಠ ತಂಡ ಪ್ರಕಟಿಸಿದೆ. ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ತಂಡಕ್ಕೆ ವಾಪಾಸ್ಸಾಗಿದ್ದಾರೆ. ತಂಡದ ವಿವರ ಇಲ್ಲಿದೆ. 

ಮುಂಬೈ(ಮೇ.07):  ಐಪಿಎಲ್ ಟೂರ್ನಿ ರದ್ದಾಗಿರುವ ಕಾರಣ ಇದೀಗ ಟೀಂ ಇಂಡಿಯಾ ಕ್ರಿಕೆಟಿಗರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ. ಇದರ ನಡುವೆ ಬಿಸಿಸಿಐ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದೆ.

Add Asianetnews Kannada as a Preferred SourcegooglePreferred

ಕೋವಿಡ್ ಪರಿಹಾರ ನಿಧಿಗೆ ವಿರುಷ್ಕಾ 2 ಕೋಟಿ ರೂ ದೇಣಿಗೆ, 7 ಕೋಟಿ ಸಂಗ್ರಹಿಸುವ ಗುರಿ.

ಸೌಥ್ಆ್ಯಂಪ್ಟನ್‌ನಲ್ಲಿ ಜೂನ್ 18 ರಿಂದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಆರಂಭಗೊಳ್ಳಲಿದೆ. ಇದಕ್ಕೆ ತಂಡದಲ್ಲೆ ಕೆಲ ಮಹತ್ವದ ಬದಲಾವಣೆ ಮಾಡಲಾಗಿದೆ. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ತಂಡ ಸೇರಿಕೊಂಡಿದ್ದಾರೆ.

ಕೆಎಲ್ ರಾಹುಲ್ ಹಾಗೂ ವೃದ್ಧಿಮಾನ್ ಶಾ ಫಿಟ್ನೆಸ್ ಟೆಸ್ಟ್ ಕ್ಲೀಯರ್ ಮಾಡಬೇಕಿದೆ. ಆದರೆ ಹಾರ್ದಿಕ್ ಪಾಂಡ್ಯ, ಪೃಥ್ವಿ ಶಾ ಹಾಗೂ ಕುಲ್ದೀಪ್ ಯಾದವ್ ತಂಡದಿಂದ ಹೊರಬಿದ್ದಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ, ಟೆಸ್ಟ್ ಚಾಂಪಿಯನ್‌ಶಿಪ್ ಗೆಲುವಿನ ವಿಶ್ವಾಸದಲ್ಲಿದೆ.

Scroll to load tweet…

ಬಯೋ ಬಬಲ್‌ ಲೋಪ ಹೇಗಾಯ್ತು ತಿಳಿಯುತ್ತಿಲ್ಲ: ಸೌರವ್ ಗಂಗೂಲಿ

ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ಶುಭ್‌ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಹನುಮಾ ವಿಹಾರಿ, ರಿಷಬ್ ಪಂತ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ವಾಶಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್

ಸ್ಟಾಂಡ್ ಬೈ ಆಟಗಾರರು: 
ಅಭಿಮನ್ಯು ಈಶ್ವರನ್, ಪ್ರಸಿದ್ಧ ಕೃಷ್ಣ, ಅವೇಶ್ ಖಾನ್, ಅರ್ಜಾನ್ ನಾಗ್ವಾಸವಲ್ಲ