ಅಂಕಪಟ್ಟಿಯಲ್ಲಿ ಮೊದಲೆರೆಡು ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವುಮೆನ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಯಾರು ಸ್ಥಾನ ಪಡೆದಿದ್ದಾರೆ? ಇಲ್ಲಿದೆ 

ಮುಂಬೈ(ಮಾ.09): ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಬಲಿಷ್ಠ ತಂಡಗಳು ಮುಖಾಮುಖಿಯಾಗಿದೆ. ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ 2ನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಅದೃಷ್ಟ ಪರೀಕ್ಷೆಗೆ ಇಳಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ಇತ್ತ ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11
ಮೆಗ್ ಲ್ಯಾನಿಂಗ್(ನಾಯಕಿ), ಶೆಫಾಲಿ ವರ್ಮಾ, ಮರಿಝನ್ನೆ ಕ್ಯಾಪ್, ಜೇಮಿಯ ರೋಡ್ರಿಗೆಸ್, ಆಲಿಸ್ ಕ್ಯಾಪ್ಸಿ, ಜೆಸ್ ಜೋನಾಸನ್, ತಾನಿಯಾ ಭಾಟಿಯಾ, ಮಿನ್ನು ಮಣಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನೊರಿಸ್

WPL 2023: ಒಂದು ಅವಕಾಶಕ್ಕಾಗಿ ತುದಿಗಾಲಲ್ಲಿ ನಿಂತ ಕನ್ನಡತಿ ದಿವ್ಯಾ ಜ್ಞಾನಾನಂದ..!

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ಹೀಲೆ ಮಾಥ್ಯೂವ್ಸ್, ಯಾಸ್ತಿಕಾ ಭಾಟಿಯಾ, ನ್ಯಾಟ್ ಸ್ಕಿವಿಯರ್ ಬ್ರಂಟ್, ಹರ್ಮನ್‌ಪ್ರೀತ್ ಕೌರ್(ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವೊಂಗ್, ಅಮ್ಜೊತ್ ಕೌರ್, ಹುಮೈರಾ ಕಾಜಿ, ಜಿಂತಮಣಿ ಕಲಿತಾ, ಸೈಕಾ ಇಶಾಖ್

ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. ಎರಡೂ ತಂಡಗಳು ಸೋಲು ಕಂಡಿಲ್ಲ. ಆಡಿದ ಎರಡೂ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಇಂದು ಅತ್ಯಂತ ರೋಚಕ ಹೋರಾಟ ನಡೆಯಲಿದೆ. 

WPL 2023: ಟೂರ್ನಿಯಿಂದಲೇ ಹೊರಬಿದ್ದ ಗುಜರಾತ್ ಜೈಂಟ್ಸ್‌ ನಾಯಕಿ ಬೆಥ್ ಮೂನಿ..! ಭಾವನಾತ್ಮಕ ಸಂದೇಶ ರವಾನೆ

ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ದ ಹೋರಾಟ ಮಾಡಿತ್ತು. ಮೊದಲ ಪಂದ್ಯದಲ್ಲೇ ಸ್ಪೋಟಕ ಬ್ಯಾಟಿಂಗ್ ಮೂಲಕ 207 ರನ್ ಸಿಡಿಸಿತ್ತು. ಇಷ್ಟೇ ಅಲ್ಲ ಗುಜರಾತ್ ಜೈಂಟ್ಸ್ ತಂಡವನ್ನು ಕೇವಲ 64 ರನ್‌ಗಳಿಗೆ ಕಟ್ಟಿ ಹಾಕಿತು. ಈ ಮೂಲಕ 143 ರನ್ ಭರ್ಜರಿ ಗೆಲುವು ಸಾಧಿಸಿತ್ತು. ಟೂರ್ನಿಯಲ್ಲಿ ಭರ್ಜರಿಯಾಗಿ ಶುಭಾರಂಭ ಮಾಡಿದ ಮುಂಬೈ ಇಂಡಿಯನ್ಸ್ ವನಿತೆಯರು, ದ್ವಿತೀಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರ ವಿರುದ್ದ ಹೋರಾಟ ನಡೆಸಿತ್ತು. ಈ ಪಂದ್ಯದಲ್ಲಿ ಆರ್‌ಸಿಬಿ ವುಮೆನ್ಸ್ ನೀಡಿದ 156 ರನ್ ಟಾರ್ಗೆಟನ್ನು ಸುಲಭವಾಗಿ ಚೇಸ್ ಮಾಡಿತ್ತು. 14.2 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು. 9 ವಿಕೆಟ್ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ವಿರಾಜಮಾನವಾಯಿತು.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಿತ್ತು. ಆರ್‌ಸಿಬಿ ವಿರುದ್ಧ 60 ರನ್ ಗೆಲುವು ಕಂಡಿತ್ತು. ದ್ವಿತೀಯ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ದ ಹೋರಾಟ ನಡೆಸಿತ್ತು. ರೋಚಕ ಹೋರಾಟದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 42 ರನ್ ಗೆಲುವು ಕಂಡಿತ್ತು. ನೆಟ್ ರನ್ ರೇಟ್ ಆಧಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಸಂಪಾದಿಸಿತು.