ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಆಡಿದ 8 ಪಂದ್ಯಗಳಲ್ಲಿ 5 ಗೆಲುವು ಹಾಗೂ 3 ಸೋಲುಗಳೊಂದಿಗೆ 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರೆ, ಸ್ಮೃತಿ ಮಂಧನಾ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿದ 8 ಪಂದ್ಯಗಳಲ್ಲಿ ತಲಾ 4 ಗೆಲುವು ಹಾಗೂ 4 ಸೋಲು ಸಹಿತ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ.

ಬೆಂಗಳೂರು(ಮಾ.14): ಎರಡನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲೀಗ್‌ ಹಂತದಲ್ಲಿ ಅಗ್ರಸ್ಥಾನಿಯಾದ ಡೆಲ್ಲಿ ನೇರವಾಗಿ ಫೈನಲ್‌ಗೇರಿದರೆ, ಕ್ರಮವಾಗಿ 2 ಮತ್ತು 3ನೇ ಸ್ಥಾನಿಯಾದ ಮುಂಬೈ ಹಾಗೂ ಡೆಲ್ಲಿ ತಂಡಗಳು ಶುಕ್ರವಾರ ಎಲಿಮಿನೇಟರ್‌ನಲ್ಲಿ ಸೆಣಸಾಡಲಿವೆ. ಗೆದ್ದ ತಂಡ ಫೈನಲ್‌ನಲ್ಲಿ ಮಾರ್ಚ್ 17ರಂದು ಡೆಲ್ಲಿ ವಿರುದ್ಧ ಸೆಣಸಾಡಲಿದೆ.

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಆಡಿದ 8 ಪಂದ್ಯಗಳಲ್ಲಿ 5 ಗೆಲುವು ಹಾಗೂ 3 ಸೋಲುಗಳೊಂದಿಗೆ 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರೆ, ಸ್ಮೃತಿ ಮಂಧನಾ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿದ 8 ಪಂದ್ಯಗಳಲ್ಲಿ ತಲಾ 4 ಗೆಲುವು ಹಾಗೂ 4 ಸೋಲು ಸಹಿತ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. ಇಂದು ನಡೆಯಲಿರುವ ನಾಕೌಟ್ ಪಂದ್ಯವು ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ಸಿಗುವ ಸಾಧ್ಯತೆಯಿದೆ.

Ranji Trophy Final: ಮುಂಬೈ ಎದುರು ಸೋಲು ತಪ್ಪಿಸಲು ವಿದರ್ಭ ಹೋರಾಟ

ಆರ್‌ಸಿಬಿ ತಂಡದಲ್ಲಿ ಸ್ಮೃತಿ ಮಂಧನಾ, ಎಲೈಸಿ ಪೆರ್ರಿ, ರಿಚಾ ಘೋಷ್ ಬ್ಯಾಟಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ ಶ್ರೇಯಾಂಕ ಪಾಟೀಲ್, ಪೆರ್ರಿ ಉತ್ತಮ ಲಯದಲ್ಲಿರುವುದು ತಂಡ ಆತ್ಮವಿಶ್ವಾಸದಿಂದ ಬೀಗುವ ಸಾಧ್ಯತೆಯಿದೆ. 

ಇನ್ನು ಮುಂಬೈ ಇಂಡಿಯನ್ಸ್ ತಂಡವು ಹೀಲಿ ಮ್ಯಾಥ್ಯೂಸ್, ಹರ್ಮನ್‌ಪ್ರೀತ್ ಕೌರ್ ಅವರನ್ನೇ ಹೆಚ್ಚಾಗಿ ನೆಚ್ಚಿಕೊಂಡಿದೆ. ಕಳೆದ ಪಂದ್ಯದಲ್ಲಿ ಆರ್‌ಸಿಬಿ ಎದುರು ಸೋಲು ಅನುಭವಿಸಿದ್ದ ಹರ್ಮನ್‌ಪ್ರೀತ್ ಕೌರ್ ಪಡೆ ಮತ್ತೆ ತಿರುಗೇಟು ನೀಡುವ ಸಾಧ್ಯತೆಯಿದೆ.

ಡೆಲ್ಲಿ ಕ್ಯಾಪಿಟಲ್ಸ್ ಫೈನಲ್‌ಗೆ ಲಗ್ಗೆ

ನವದೆಹಲಿ: ಲೀಗ್‌ ಹಂತದ ಕೊನೆ ಪಂದ್ಯದಲ್ಲಿ ಗುಜರಾತ್‌ ವಿರುದ್ಧ 7 ವಿಕೆಟ್ ಗೆಲುವು ಸಾಧಿಸಿದ ಕಳೆದ ಬಾರಿ ರನ್ನರ್‌-ಅಪ್‌ ಡೆಲ್ಲಿ ಕ್ಯಾಪಿಟಲ್ಸ್‌ 2ನೇ ಆವೃತ್ತಿ ಡಬ್ಲ್ಯುಪಿಎಲ್‌ನಲ್ಲಿ ನೇರವಾಗಿ ಫೈನಲ್‌ ಪ್ರವೇಶಿಸಿದೆ.

ಡೆಲ್ಲಿ 8ರಲ್ಲಿ 6 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. 2ನೇ ಸ್ಥಾನಿಯಾದ ಮುಂಬೈ ಹಾಗೂ 3ನೇ ಸ್ಥಾನ ಪಡೆದ ಆರ್‌ಸಿಬಿ ಶುಕ್ರವಾರ ಎಲಿಮಿನೇಟರ್‌ನಲ್ಲಿ ಸೆಣಸಾಡಲಿವೆ. ಗೆದ್ದ ತಂಡ ಫೈನಲ್‌ ಪ್ರವೇಶಿಸಲಿವೆ.

ಐಪಿಎಲ್‌ನ ಆರಂಭಿಕ 2 ಪಂದ್ಯಕ್ಕೆ ಸೂರ್ಯಕುಮಾರ್ ಯಾದವ್ ಡೌಟ್‌!

ಬುಧವಾರದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ 20 ಓವರಲ್ಲಿ 9 ವಿಕೆಟ್‌ಗೆ ಕೇವಲ 126 ರನ್‌ ಕಲೆಹಾಕಿತು. ಭಾರತಿ ಫುಲ್ಮಾಲಿ 42, ಕ್ಯಾಥರಿನ್‌ ಬ್ರೇಸ್‌ 28 ರನ್‌ ಗಳಿಸಿದರು. ಸುಲಭ ಗುರಿ ಪಡೆದ ಡೆಲ್ಲಿ 13.1 ಓವರಲ್ಲೇ ಗೆದ್ದು ಫೈನಲ್‌ಗೇರಿತು. ಶಫಾಲಿ ವರ್ಮಾ ಕೇವಲ 37 ಎಸೆತಗಳಲ್ಲಿ 7 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 71 ರನ್‌ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.