ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ಪ್ರಶಸ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿ ಸ್ಪೋಟಕ ಆರಂಭ ಪಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್, ಆ ಬಳಿಕ ಆರ್‌ಸಿಬಿ ಸ್ಪಿನ್ನರ್‌ಗಳ ದಾಳಿಗೆ ತತ್ತರಿಸಿ ಕೇವಲ 113 ರನ್‌ಗಳಿಗೆ ಸರ್ವಪತನ ಕಂಡಿತು.
ನವದೆಹಲಿ(ಮಾ.18): ಎರಡನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸ್ಮೃತಿ ಮಂಧನಾ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆರ್‌ಸಿಬಿ ತಂಡವು ಚಾಂಪಿಯನ್ ಆಗುತ್ತಿದ್ದಂತೆಯೇ ಮಾಜಿ ನಾಯಕ ವಿರಾಟ್ ಕೊಹ್ಲಿ, ವಿಡಿಯೋ ಕಾಲ್ ಮಾಡಿ ಸ್ಮತಿ ಮಂಧನಾ ಪಡೆಯ ಜತೆ ಸಂಭ್ರಮ ಹಂಚಿಕೊಂಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ಪ್ರಶಸ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿ ಸ್ಪೋಟಕ ಆರಂಭ ಪಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್, ಆ ಬಳಿಕ ಆರ್‌ಸಿಬಿ ಸ್ಪಿನ್ನರ್‌ಗಳ ದಾಳಿಗೆ ತತ್ತರಿಸಿ ಕೇವಲ 113 ರನ್‌ಗಳಿಗೆ ಸರ್ವಪತನ ಕಂಡಿತು. ಸಣ್ಣ ಮೊತ್ತದ ಸ್ಕೋರ್ ಆಗಿದ್ದರೂ ಯಾವುದೇ ಅಪಾಯಕಾರಿಯಾಗದಂತೆ ಆರ್‌ಸಿಬಿ ತಂಡವು ಇನ್ನೂ ಮೂರು ಎಸೆತ ಬಾಕಿ ಇರುವಂತೆಯೇ 8 ವಿಕೆಟ್ ಅಂತರದ ಗೆಲುವಿನ ನಗೆ ಬೀರಿತು.
ಈ ಪ್ರಶಸ್ತಿಗಾಗಿ ಆರ್‌ಸಿಬಿ ಅಭಿಮಾನಿಗಳು ಕಳೆದೊಂದು ದಶಕದಿಂದ ಕಾತರದಿಂದ ಕಾಯುತ್ತಿದ್ದರು. ಆರ್‌ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆಯೇ ಅಭಿಮಾನಿಗಳು ಖುಷಿಯ ಸಂಭ್ರಮದಲ್ಲಿ ಮಿಂದೆದ್ದರು.
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 2009, 2011 ಹಾಗೂ 2016ರಲ್ಲಿ ಫೈನಲ್ ಪ್ರವೇಶಿಸಿತ್ತಾದರೂ, ಫೈನಲ್‌ನಲ್ಲಿ ಕಪ್ ಗೆಲ್ಲಲು ವಿಫಲವಾಗುವ ಮೂಲಕ ನಿರಾಸೆ ಅನುಭವಿಸಿತ್ತು. ಆರ್‌ಸಿಬಿ ಪುರುಷರ ತಂಡ ಕಳೆದ 16 ವರ್ಷಗಳಿಂದ ಮಾಡಲಾಗದ ಸಾಧನೆಯನ್ನು ಮಹಿಳಾ ತಂಡವು ಕೇವಲ ಎರಡನೇ ಪ್ರಯತ್ನದಲ್ಲೇ ಮಾಡಿ ಮುಗಿಸಿದ್ದಾರೆ.
ಇನ್ನು ಆರ್‌ಸಿಬಿ ತಂಡವು ಚಾಂಪಿಯನ್ ಆಗುತ್ತಿದ್ದಂತೆಯೇ ಮಾಜಿ ನಾಯಕ ವಿರಾಟ್ ಕೊಹ್ಲಿ, ಸ್ಮೃತಿ ಮಂಧನಾ ಪಡೆಗೆ ವಿಡಿಯೋ ಕಾಲ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇದಷ್ಟೇ ಅಲ್ಲದೇ ತಾವಿದ್ದಲ್ಲಿಂದಲೇ ವಿರಾಟ್ ಕೊಹ್ಲಿ, ಮಹಿಳಾ ಆರ್‌ಸಿಬಿ ತಂಡದ ಆಟಗಾರ್ತಿಯರೊಂದಿಗೆ ಕುಣಿದು ಸಂಭ್ರಮಿಸಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
