* ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಉತ್ತಮ ಆರಂಭ* ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ ಚೇತೇಶ್ವರ್ ಪೂಜಾರ* ನೆಲಕಚ್ಚಿ ಆಡುತ್ತಿರುವ ನಾಯಕ ವಿರಾಟ್ ಕೊಹ್ಲಿ

ಸೌಥಾಂಪ್ಟನ್‌(ಜೂ.19): ನಾಯಕ ವಿರಾಟ್‌ ಕೊಹ್ಲಿ ದಿಟ್ಟ ಬ್ಯಾಟಿಂಗ್‌ ನೆರವಿನಿಂದ ಟೀಂ ಇಂಡಿಯಾ ಟೆಸ್ಟ್‌ ಚಾಂಪಿಯನ್‌ಶಿಪ್‌ಫೈನಲ್‌ನ ಎರಡನೇ ದಿನದಾಟದ ಚಹಾ ವಿರಾಮದ ವೇಳೆಗೆ 3 ವಿಕೆಟ್ ವಿಕೆಟ್ ಕಳೆದುಕೊಂಡು 120 ರನ್‌ ಬಾರಿಸಿದ್ದು, ಪಂದ್ಯದಲ್ಲಿ ಕಮ್‌ಬ್ಯಾಕ್‌ ಮಾಡುವತ್ತ ದಿಟ್ಟ ಹೆಜ್ಜೆಯಿಟ್ಟಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡಕ್ಕೆ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಹಾಗೂ ಶುಭ್‌ಮನ್‌ ಗಿಲ್‌ ಜೋಡಿ ಮೊದಲ ವಿಕೆಟ್‌ಗೆ 62 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಆದರೆ ಉತ್ತಮ ಆರಂಭವನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸುವಲ್ಲಿ ಈ ಜೋಡಿ ವಿಫಲವಾಯಿತು. ರೋಹಿತ್ ಶರ್ಮಾ 34 ರನ್‌ ಬಾರಿಸಿ ಜೇಮಿಸನ್‌ಗೆ ವಿಕೆಟ್‌ ಒಪ್ಪಿಸಿದರೆ, ಇದರ ಬೆನ್ನಲ್ಲೇ ಗಿಲ್‌ ಸಹಾ 28 ರನ್‌ ಬಾರಿಸಿ ವ್ಯಾಗ್ನರ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಚೇತೇಶ್ವರ್ ಪೂಜಾರ(08) ಸಹಾ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು.

Scroll to load tweet…

ಮಿಲ್ಖಾ ಸಿಂಗ್‌ಗೆ ಗೌರವ ನಮನ; WCTfinal ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿದ ಟೀಂ ಇಂಡಿಯಾ!

ನೆಲಕಚ್ಚಿ ಆಡುತ್ತಿರುವ ಕೊಹ್ಲಿ-ರಹಾನೆ: ಒಂದು ಹಂತದಲ್ಲಿ 88 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಭಾರತ ತಂಡಕ್ಕೆ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ಅಸರೆಯಾಗಿದ್ದಾರೆ. ಕೊಹ್ಲಿ 94 ಎಸೆತಗಳನ್ನು ಎದುರಿಸಿ ಕೇವಲ ಒಂದು ಬೌಂಡರಿ ಸಹಿತ 35 ರನ್‌ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದರೆ, ಮತ್ತೊಂದು ತುದಿಯಲ್ಲಿ ರಹಾನೆ 54 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 13 ರನ್‌ ಬಾರಿಸಿದ್ದಾರೆ.