ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ಗೆ ಕ್ಷಣಗಣನೆಜೂನ್‌ 07ರಂದು ಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಫೈಟ್ಫೈನಲ್ ಪಂದ್ಯದಲ್ಲಿ ಕೂಕಾಬುರಾ ಚೆಂಡು ಬಳಕೆ

ಲಂಡನ್‌(ಮೇ.05): ಜೂನ್ 7ರಿಂದ 11ರ ವರೆಗೂ ಇಲ್ಲಿನ ದಿ ಓವಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಹಾಗೂ ಆಸ್ಪ್ರೇಲಿಯಾ ನಡುವಿನ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೆ ಡ್ಯೂಕ್ಸ್‌ ಸಂಸ್ಥೆಯ ಚೆಂಡಿನ ಬದಲು ಕೂಕಾಬುರಾ ಚೆಂಡು ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಚೆಂಡಿನ ಗುಣಮಟ್ಟದ ಬಗ್ಗೆ ಇತ್ತೀಚೆಗೆ ಇಂಗ್ಲೆಂಡ್‌ನ ಕೌಂಟಿ ತಂಡಗಳಿಂದಲೇ ಅಸಮಾಧನ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಐಸಿಸಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಮೊದಲ ಬಾರಿಗೆ ಇಂಗ್ಲೆಂಡ್‌ನಲ್ಲಿ ಡ್ಯೂಕ್ಸ್‌ ಚೆಂಡಿನ ಬದಲು ಕೂಕಾಬುರಾ ಚೆಂಡು ಬಳಕೆಯಾಗುವ ಸಾಧ್ಯತೆ ಇದೆ.

ಮೊದಲ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿಯೂ ಭಾರತ ತಂಡವು ಪ್ರಶಸ್ತಿ ಸುತ್ತು ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಸೋಲು ಅನುಭವಿಸುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯಕ್ಕೆ ಭಾರತ ತಂಡ ಹೀಗಿದೆ ನೋಡಿ:

ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಇಶಾನ್ ಕಿಶನ್‌, ಕೆ ಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್.

ಮೀಸಲು ಆಟಗಾರರು: ಋುತು​ರಾಜ್‌ ಗಾಯ​ಕ್ವಾಡ್‌, ಸೂರ್ಯಕು​ಮಾರ್‌ ಯಾದವ್, ವೇಗಿ ಮುಕೇಶ್‌ ಕುಮಾರ್‌ 

ಆಸ್ಟ್ರೇಲಿಯಾ ಕ್ರಿಕೆಟ್ ತಂಡ:

ಪ್ಯಾಟ್ ಕಮಿನ್ಸ್‌(ನಾಯಕ), ಡೇವಿಡ್ ವಾರ್ನರ್‌, ಉಸ್ಮಾನ್ ಖವಾಜ, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್‌, ಮಾರ್ನಸ್ ಲಬುಶೇನ್‌, ಸ್ಟೀವ್ ಸ್ಮಿತ್‌, ಟ್ರಾವಿಸ್ ಹೆಡ್‌, ಕ್ಯಾಮರೋನ್ ಗ್ರೀನ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕೇರ್ರಿ, ಜೋಶ್ ಇಂಗ್ಲಿಸ್‌, ಮಿಚೆಲ್ ಸ್ಟಾರ್ಕ್, ಜೋಸ್ ಹೇಜಲ್‌ವುಡ್‌, ಸ್ಕಾಟ್‌ ಬೋಲೆಂಡ್‌, ನೇಥನ್ ಲಯನ್‌, ಟೋಡ್ ಮರ್ಫಿ.

ಮೇ 27ರಂದು ವಿಶ್ವಕಪ್‌ ಆಯೋಜನಾ ಸಮಿತಿ ರಚನೆ

ನವದೆಹಲಿ: ಐಪಿಎಲ್‌ ಫೈನಲ್‌ನ ಹಿಂದಿನ ದಿನ ಅಂದರೆ ಮೇ 27ರಂದು ಅಹಮದಾಬಾದ್‌ನಲ್ಲಿ ಬಿಸಿಸಿಐ ಸಭೆ ನಡೆಯಲಿದ್ದು, ಅಕ್ಟೋಬರ್‌-ನವೆಂಬರ್‌ನಲ್ಲಿ ಭಾರತದಲ್ಲೇ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ಸಿದ್ಧತೆಗಾಗಿ ಸ್ಥಳೀಯ ಆಯೋಜನಾ ಸಮಿತಿಯನ್ನು ರಚಿಸಲಿದೆ. ಸಮಿತಿಯಲ್ಲಿ ಬಿಸಿಸಿಐ ಅಧ್ಯಕ್ಷ, ಕಾರ‍್ಯದರ್ಶಿ, ಖಜಾಂಚಿಯ ಜೊತೆ ಕೆಲ ಹಿರಿಯ ಅಧಿಕಾರಿಗಳು ಇರಲಿದ್ದಾರೆ. ಬಿಸಿಸಿಐ ಈಗಾಗಲೇ ಕ್ರೀಡಾಂಗಣಗಳ ನವೀಕರಣ ಕಾರ‍್ಯ ಆರಂಭಿಸಿದ್ದು, ಅದಕ್ಕಾಗಿ 50 ಕೋಟಿ ರು.ಗೂ ಹೆಚ್ಚಿನ ಹಣ ಮೀಸಲಿಟ್ಟಿದೆ.

IPL 2023 ಈಡೇರುತ್ತಾ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ-ಆಫ್‌ ಆಸೆ?

ಅಕ್ಟೋಬರ್ 05ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್‌ ತಂಡಗಳು ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿವೆ. ಇನ್ನು ಫೈನಲ್‌ ಪಂದ್ಯವು ಇದೇ ಮೈದಾನದಲ್ಲಿ ನವೆಂಬರ್ 19ರಂದು ಜರುಗಲಿದೆ.

ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 10 ತಂಡಗಳು ಪಾಲ್ಗೊಳ್ಳುತ್ತಿದ್ದು, 48 ಪಂದ್ಯಗಳನ್ನಾಡಲಿವೆ. ಭಾರತ, ಇಂಗ್ಲೆಂಡ್‌, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಆಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಈಗಾಗಲೇ ವಿಶ್ವಕಪ್ ಟೂರ್ನಿಗೆ ನೇರ ಅರ್ಹತೆ ಗಿಟ್ಟಿಸಿಕೊಂಡಿವೆ. ಇನ್ನು ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ತಂಡ ಕೂಡಾ ವಿಶ್ವಕಪ್ ಟೂರ್ನಿಗೆ ನೇರ ಅರ್ಹತೆ ಪಡೆಯಲು ಯಶಸ್ವಿಯಾಗಿದೆ.