Ind vs Eng: ವೈಜಾಗ್ ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ, ಬೃಹತ್ ಮೊತ್ತದತ್ತ ಭಾರತ

ಇಲ್ಲಿನ ಡಾ. ಡಿವೈ ರಾಜಶೇಖರ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮೊದಲ ಪಂದ್ಯದಲ್ಲಿ ಸೋತು ಆಘಾತಕ್ಕೊಳಗಾಗಿದ್ದ ಟೀಂ ಇಂಡಿಯಾ, ಎರಡನೇ ಟೆಸ್ಟ್ ಪಂದ್ಯದಲ್ಲಿ ಎಚ್ಚರಿಕೆಯ ಆರಂಭ ಪಡೆಯಿತು.

Yashasvi Jaiswal Hits 2nd Century India in Driver seat against England in Vizag Test kvn

ವಿಶಾಖಪಟ್ಟಣ(ಫೆ.02): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪ್ರತಿಭಾನ್ವಿತ ಬ್ಯಾಟರ್ ಯಶಸ್ವಿ ಜೈಸ್ವಾಲ್ 151 ಎಸೆತಗಳನ್ನು ಎದುರಿಸಿ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಜೈಸ್ವಾಲ್ ಬಾರಿಸಿದ ಎರಡನೇ ಟೆಸ್ಟ್ ಶತಕದ ನೆರವಿನಿಂದ ಟೀಂ ಇಂಡಿಯಾ, ಮೊದಲ ದಿನದಾಟದಲ್ಲೇ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.

ಇಲ್ಲಿನ ಡಾ. ಡಿವೈ ರಾಜಶೇಖರ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮೊದಲ ಪಂದ್ಯದಲ್ಲಿ ಸೋತು ಆಘಾತಕ್ಕೊಳಗಾಗಿದ್ದ ಟೀಂ ಇಂಡಿಯಾ, ಎರಡನೇ ಟೆಸ್ಟ್ ಪಂದ್ಯದಲ್ಲಿ ಎಚ್ಚರಿಕೆಯ ಆರಂಭ ಪಡೆಯಿತು. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ 17.3 ಓವರ್‌ಗಳಲ್ಲಿ 40 ರನ್‌ಗಳ ಜತೆಯಾಟವಾಡಿದರು. ನೆಲಕಚ್ಚಿ ಆಡುವ ಯತ್ನ ನಡೆಸಿದ ನಾಯಕ ರೋಹಿತ್ ಶರ್ಮಾ 41 ಎಸೆತಗಳನ್ನು ಎದುರಿಸಿ 14 ರನ್ ಗಳಿಸಿ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುತ್ತಿರುವ ಶೋಯೆಬ್ ಬಷೀರ್‌ ಬೌಲಿಂಗ್‌ನಲ್ಲಿ ಓಲಿ ಪೋಪ್‌ಗೆ ವಿಕೆಟ್ ಒಪ್ಪಿಸಿದರು.

ಇಂಗ್ಲೆಂಡ್‌ ವಿರುದ್ಧ 3ನೇ ಟೆಸ್ಟ್‌ಗೂ ವಿರಾಟ್ ಕೊಹ್ಲಿ ಗೈರು?

ಆಕರ್ಷಕ ಶತಕ ಸಿಡಿಸಿದ ಜೈಸ್ವಾಲ್: ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಶುಭ್‌ಮನ್ ಗಿಲ್ ಜತೆಯಾದ ಯಶಸ್ವಿ ಜೈಸ್ವಾಲ್ ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಮೊದಲ ದಿನದಿಂದಲೇ ತಿರುವು ಪಡೆಯುವ ಮುನ್ಸೂಚನೆ ನೀಡುತ್ತಿರುವ ಪಿಚ್‌ನಲ್ಲಿ ತಮ್ಮ ಬ್ಯಾಟಿಂಗ್ ಪ್ರತಿಭೆ ಅನಾವರಣ ಮಾಡಿರುವ ಜೈಸ್ವಾಲ್ ಟೆಸ್ಟ್ ವೃತ್ತಿಜೀವನದ ಎರಡನೇ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದರು. 

ಇಂಗ್ಲೆಂಡ್ ಬೌಲಿಂಗ್ ಪಡೆಯ ಎದುರು ದಿಟ್ಟ ಪ್ರದರ್ಶನ ತೋರಿದ ಜೈಸ್ವಾಲ್ ಕೇವಲ 151 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 3 ಮುಗಿಲೆತ್ತರದ ಸಿಕ್ಸರ್ ನೆರವಿನಿಂದ ಮೂರಂಕಿ ಮೊತ್ತ ದಾಖಲಿಸಲು ಯಶಸ್ವಿಯಾದರು. 94 ರನ್ ಗಳಿಸಿದ್ದಾಗ ಟಾಮ್ ಹಾರ್ಟ್ಲಿ ಬೌಲಿಂಗ್‌ನಲ್ಲಿ ಜೈಸ್ವಾಲ್ ಭರ್ಜರಿ ಸಿಕ್ಸರ್ ಸಿಡಿಸಿ ಎರಡನೇ ಟೆಸ್ಟ್ ಶತಕ ಬಾರಿಸಿದರು.

ಸದ್ಯ 50 ಓವರ್ ಅಂತ್ಯದ ವೇಳೆಗೆ ಟೀಂ ಇಂಡಿಯಾ ಕೇವಲ 2 ವಿಕೆಟ್ ಕಳೆದುಕೊಂಡು 175 ರನ್ ಬಾರಿಸಿದ್ದು, ಜೈಸ್ವಾಲ್ 104 ಹಾಗೂ ಶ್ರೇಯಸ್ ಅಯ್ಯರ್ 23 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

Latest Videos
Follow Us:
Download App:
  • android
  • ios