Asianet Suvarna News Asianet Suvarna News

T20 World Cup ಟೂರ್ನಿಯಿಂದ ಹೊರಬಿದ್ದ ಸ್ಟಾರ್ ಆಲ್ರೌಂಡರ್, ದಕ್ಷಿಣ ಆಫ್ರಿಕಾ ಕೂಡಿಕೊಂಡ ಮಾರ್ಕೊ ಯಾನ್ಸನ್..!

ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ದಕ್ಷಿಣ ಆಫ್ರಿಕಾ ಆಲ್ರೌಂಡರ್ ಡ್ವೇನ್ ಪ್ರಿಟೋರಿಯಸ್
ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್
ಡ್ವೇನ್ ಪ್ರಿಟೋರಿಯಸ್ ಬದಲಿಗೆ ಮಾರ್ಕೊ ಯಾನ್ಸನ್‌ಗೆ ಸ್ಥಾನ

Young Pacer Marco Jansen Replaces Dwaine Pretorius In South Africa T20 World Cup Squad kvn
Author
First Published Oct 12, 2022, 4:55 PM IST | Last Updated Oct 12, 2022, 4:55 PM IST

ಕೇಪ್‌ಟೌನ್(ಅ.12): ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಗಾಯದ ಸಮಸ್ಯೆ ಎಲ್ಲಾ ತಂಡಗಳನ್ನು ಕಾಡಲಾರಂಭಿಸಿದೆ. ಇದೀಗ ದಕ್ಷಿಣ ಆಫ್ರಿಕಾದ ಸ್ಟಾರ್ ಆಲ್ರೌಂಡರ್ ಡ್ವೇನ್ ಪ್ರಿಟೋರಿಯಸ್ ಗಾಯದ ಸಮಸ್ಯೆಯಿಂದಾಗಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದು, ಯುವ ವೇಗಿ ಮಾರ್ಕೊ ಯಾನ್ಸನ್ ಹರಿಣಗಳ ತಂಡ ಕೂಡಿಕೊಂಡಿದ್ದಾರೆ. 

ಇತ್ತೀಚೆಗಿನ ವರ್ಷಗಳಲ್ಲಿ ಡ್ವೇನ್ ಪ್ರಿಟೋರಿಯಸ್‌, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ದಕ್ಷಿಣ ಆಫ್ರಿಕಾ ಪರ ಮಹತ್ತರ ಪಾತ್ರವನ್ನು ನಿಭಾಯಿಸುತ್ತಲೇ ಬಂದಿದ್ದರು. ಆದರೆ ಭಾರತ ಎದುರಿನ ಸರಣಿಯ ವೇಳೆ ಡ್ವೇನ್ ಪ್ರಿಟೋರಿಯಸ್ ಎಡಗೈ ಹೆಬ್ಬೆರಳು ಗಾಯ ಮಾಡಿಕೊಂಡಿದ್ದರು. ಆದರೆ ಅವರು ಟಿ20 ವಿಶ್ವಕಪ್ ಟೂರ್ನಿಗೆ ಸಂಪೂರ್ಣ ಫಿಟ್ ಆಗುವ ಸಾಧ್ಯತೆ ವಿರಳ ಎನಿಸಿರುವ ಹಿನ್ನೆಲೆಯಲ್ಲಿ, ಮೀಸಲು ಆಟಗಾರನಾಗಿ ತಂಡದಲ್ಲಿ ಸ್ಥಾನ ಪಡೆದಿದ್ದ ಮಾರ್ಕೊ ಯಾನ್ಸನ್ ಅವರಿಗೆ 15 ಆಟಗಾರರನ್ನೊಳಗೊಂಡ ದಕ್ಷಿಣ ಆಫ್ರಿಕಾ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ಮಾರ್ಕೊ ಯಾನ್ಸನ್ ಅವರನ್ನು ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ದಕ್ಷಿಣ ಆಫ್ರಿಕಾ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅವರು ಗಾಯಾಳು ಡ್ವೇನ್ ಪ್ರಿಟೋರಿಯಸ್ ಸ್ಥಾನವನ್ನು ತುಂಬಲಿದ್ದಾರೆ. ಇನ್ನು ಮಾರ್ಕೊ ಯಾನ್ಸನ್ ಬದಲಿಗೆ ಮೀಸಲು ಆಟಗಾರನಾಗಿ ಲಿಜ್ಜಾಡ್ ವಿಲಿಯಮ್ಸ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

T20 World Cup ಟೂರ್ನಿಯಿಂದ ದೀಪಕ್ ಚಹರ್ ಔಟ್; ಶಮಿ/ಸಿರಾಜ್/ಶಾರ್ದೂಲ್ ಮೂವರಲ್ಲಿ ಯಾರಿಗೆ ಸಿಗಲಿದೆ ಸ್ಥಾನ?

ಡ್ವೇನ್ ಪ್ರಿಟೋರಿಯಸ್‌, ಭಾರತ ಎದುರಿನ ಮೂರನೇ ಟಿ20 ಪಂದ್ಯದಲ್ಲಿ ಡ್ವೇನ್‌ ಪ್ರಿಟೋರಿಯಸ್‌ 26 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಆ ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡವು 49 ರನ್‌ಗಳಿಂದ ಗೆದ್ದು ಬೀಗಿತ್ತು. 

ಟಿ20 ಸರಣಿ ಮುಕ್ತಾಯದ ಬಳಿಕ ಡ್ವೇನ್ ಪ್ರಿಟೋರಿಯಸ್‌, ಭಾರತ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಿತ್ತು. ಆದರೆ ಗಾಯದ ಸಮಸ್ಯೆಯಿಂದಾಗಿ ಭಾರತ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದಿದ್ದರು. 

ಟಿ20 ವಿಶ್ವಕಪ್ ಟೂರ್ನಿಗೆ ದಕ್ಷಿಣ ಆಫ್ರಿಕಾ ತಂಡ ಹೀಗಿದೆ ನೋಡಿ

ತೆಂಬ ಬವುಮಾ(ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್‌, ಕೇಶವ್ ಮಹರಾಜ, ಏಯ್ಡನ್ ಮಾರ್ಕ್‌ರಮ್, ಡೇವಿಡ್ ಮಿಲ್ಲರ್, ಲುಂಗಿ ಎಂಗಿಡಿ, ಏನ್ರಿಚ್ ನೊಕಿಯ, ವೇಯ್ನ್ ಪಾರ್ನೆಲ್, ಕಗಿಸೋ ರಬಾಡ, ರಿಲೇ ರೌಸೊ, ತಬ್ರೀಜ್ ಶಮ್ಸಿ, ಟ್ರಿಸ್ಟನ್ ಸ್ಟಬ್ಸ್, ಮಾರ್ಕೊ ಯಾನ್ಸನ್.

Latest Videos
Follow Us:
Download App:
  • android
  • ios