Yuzvendra Chahal Joins BJP ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಬಿಜೆಪಿ ಸೇರ್ಪಡೆಯಾಗಿದ್ದು, ಪಕ್ಷದ ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರಾಗಿ ನೇಮಕ. ಈ ಅವಕಾಶ ನೀಡಿದ್ದಕ್ಕಾಗಿ ಅವರು ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದ ಸಲ್ಲಿಸಿದ್ದಾರೆ.

Yuzvendra Chahal Joins BJP: ಕ್ರಿಕೆಟಿಗ ಯುಜ್ವೇಂದ್ರ ಚಾಹಲ್(Yuzvendra Chahal) ಶನಿವಾರ ಭಾರತೀಯ ಜನತಾ ಪಕ್ಷ (BJP) ಸೇರ್ಪಡೆಯಾಗಿದ್ದು, ಪಕ್ಷವು ಅವರನ್ನು ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಚಾಹಲ್ ಬಿಜೆಪಿಯ ಒಬಿಸಿ ಮೋರ್ಚಾದ ಅಧ್ಯಕ್ಷ ಅಮರಪಾಲ್ ಮೌರ್ಯ ಅವರನ್ನು ಭೇಟಿ ಮಾಡಿದ್ದಾಗಲೇ ಬಿಜೆಪಿ ಸೇರ್ಪಡೆ ಸುದ್ದಿಯಾಗಿತ್ತು. ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿರುವುದು ಕ್ರೀಡಾ ಮತ್ತು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯುಜ್ವೇಂದ್ರ ಚಾಹಲ್ ಹೇಳಿದ್ದೇನು?

ಬಿಜೆಪಿ ಸೇರ್ಪಡೆಯಾಗಿರುವ ಕುರಿತು ಪ್ರತಿಕ್ರಿಯಿಸಿರುವ ಯುಜ್ವೇಂದ್ರ ಚಾಹಲ್, ಬಿಜೆಪಿ ಪಕ್ಷದಲ್ಲಿ ನನಗೆ ಒಂದು ಸ್ಥಾನ ಮತ್ತು ಗೌರವ ನೀಡಿದ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಜಿ, ಗೌರವಾನ್ವಿತ ಗೃಹ ಸಚಿವ ಶ್ರೀ ಅಮಿತ್ ಶಾ ಜಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ನಿತಿನ್ ನಬಿನ್ ಜಿ ಮತ್ತು ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಅಮರಪಾಲ್ ಮೌರ್ಯ ಜಿ ಅವರಿಗೆ ನಾನು ಹೃತ್ಪೂರ್ವಕ ಧನ್ಯವಾದ ಹೇಳುತ್ತೇನೆ' ಎಂದು ಕ್ರಿಕೆಟಿಗ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

Scroll to load tweet…