ಆತ್ಮಹತ್ಯೆ ಮಾಡಿಕೊಂಡ ಬಾಲಕಿ| ಬೆಳಗಾವಿ ತಾಲೂಕಿನ ಅತ್ತಿವಾಡ ಗ್ರಾಮದಲ್ಲಿ ನಡೆದ ಘಟನೆ| ಬಾಲಕಿಯ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ| ಈ ಸಂಬಂಧ ಕಾಕತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಬೆಳಗಾವಿ(ಸೆ.07): 11 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ(ಭಾನುವಾರ) ತಾಲೂಕಿನ ಅತ್ತಿವಾಡ ಗ್ರಾಮದಲ್ಲಿ ನಡೆದಿದೆ. ರಿಯಾ ದೀಪಕ ಬೆಳಗಾಂಕರ (11) ಎಂಬಾಕೆಯೇ ನೇಣಿಗೆ ಶರಣಾದ ಬಾಲಕಿಯಾಗಿದ್ದಾಳೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಂಗ್ಲ ಮಾಧ್ಯಮದಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ ರಿಯಾ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಅಣ್ಣಿಗೇರಿ: ಕೊರೋನಾ ಸೋಂಕಿತ ಆತ್ಮಹತ್ಯೆ, ಗ್ರಾಮಸ್ಥರ ಆಕ್ರೋಶ

ರಿಯಾ ದೀಪಕ ಬೆಳಗಾಂಕರ ಆತ್ಮಹತ್ಯೆಗೆ ನಿಖರವಾಗಿ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಾಕತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.