Asianet Suvarna News Asianet Suvarna News

ಬಾಗಲಕೋಟೆ: ಬಾಲಕಿ ಸಂಶಯಾಸ್ಪದ ಸಾವು, ಪ್ರಕರಣ ದಾಖಲು

ಸಂಶಯಾಸ್ಪದವಾಗಿ ಬಾಲಕಿ ಸಾವು| ಬಾಗಲಕೋಟೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದ ಘಟನೆ| ಈ ಕುರಿತು ಬಾಗಲಕೋಟೆ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು|

11 Year Old Girl Suspicious Dead in Bagalkot
Author
Bengaluru, First Published Jan 19, 2020, 9:15 AM IST

ಬಾಗಲಕೋಟೆ(ಜ.19):ಬಾಲಕಿಯೊರ್ವಳು ಸಂಶಯಾಸ್ಪದವಾಗಿ ಮೃತಪಟ್ಟ ಘಟನೆ ತಾಲೂಕಿನ ಗ್ರಾಮವೊಂದರಲ್ಲಿ ಮಂಗಳವಾರ ನಡೆದಿದ್ದು, ಈ ಕುರಿತು ಬಾಗಲಕೋಟೆ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

11 ವರ್ಷದ ಬಾಲಕಿ ತನ್ನ ತಮ್ಮನೊಂದಿಗೆ ಆಟ ಆಡುವಾಗ ಆಡುಗಳಿಗೆ ಮೇವು ತಿನ್ನಲು ಕಟ್ಟಿದ್ದ ಹಗ್ಗವನ್ನು ಕೊರಳಿಗೆ ಕಟ್ಟಿಕೊಂಡು ಆಕಸ್ಮಿಕವಾಗಿ ಹಗ್ಗ ಕೊರಳಿಗೆ ತನ್ನಿಂದ ತಾನೆ ಅಥವಾ ಉರಲು ಬಿದ್ದಿರುವುದರಿಂದ ಮರಣ ಹೊಂದಿರುವ ಬಗ್ಗೆ ಸಂಶಯ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ದೂರುದಾರರು ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಅ​ಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮಗುವಿನ ಸಾವಿನ ಬಗ್ಗೆ ಪ್ರತ್ಯಕ್ಷ ಸಾಕ್ಷಿದಾರರಾದ ಮೃತಳ ತಮ್ಮಂದಿರ ವಿಡಿಯೋ ಹೇಳಿಕೆಗಳನ್ನು ಈಗಾಗಲೇ ಪಡೆಯಲಾಗಿದ್ದು, ಜಿಲ್ಲಾಸ್ಪತ್ರೆಯ ನುರಿತ ತಜ್ಞ ವೈದ್ಯರಿಂದ ಮೃತಳ ಶವ ಪರೀಕ್ಷೆ ಮಾಡಿಸಲಾಗಿದೆ. ಶವ ಪರೀಕ್ಷೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಸಲಾಗಿದೆ. ಅದರ ಪ್ರಾಥಮಿಕ ವರದಿಯನ್ನು ಸಹ ಪಡೆದುಕೊಳ್ಳಲಾಗಿದ್ದು, ವರದಿಯಲ್ಲಿ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿರುವ ಹಾಗೂ ಬಾಲಕಿಯ ಮೇಲೆ ಯಾರಾದರೂ ಹಲ್ಲೆ ನಡೆಸಿರುವ ಕುರುಹುಗಳ ಇಲ್ಲ.

ಮರಣದ ಕಾರಣಗಳನ್ನು ನಿಖರವಾಗಿ ತಿಳಿದುಕೊಳ್ಳಲು ವಿಜ್ಞಾನ ಪ್ರಯೋಗಾಲಯದಿಂದ ಪರೀಕ್ಷೆ ಮಾಡಿಸಿ ವರದಿಯನ್ನು ಪಡೆದುಕೊಳ್ಳಲಾಗುತ್ತಿದೆ. ಇಲ್ಲಿಯವರೆಗೆ ತನಿಖೆಯಲ್ಲಿ ಕಂಡು ಬಂದಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮೃತಳು ಅಸಹಜವಾಗಿ ಮೃತಪಟ್ಟಿರುವಂತೆ ಕಂಡುಬಂದಿದೆ. ತನಿಖಾ​ಧಿಕಾರಿಗಳಿಂದ ಎಲ್ಲ ಆಯಾಮಗಳಲ್ಲಿ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ತನಿಖೆ ಮುಂದುವರಿದಿದೆ. ಪೊಲೀಸ್‌ ಇಲಾಖೆಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆಸಕ್ತಿಯುಳ್ಳವರು ತನಿಖಾ​ಧಿಕಾರಿಗಳನ್ನು ಭೇಟಿ ಮಾಡಿ ಪ್ರಕರಣದ ತನಿಖೆಯ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವುದರ ಜೊತೆಗೆ ಹೆಚ್ಚಿನ ಮಾಹಿತಿ ಗೊತ್ತಿದ್ದಲ್ಲಿ ತನಿಖಾಧಿ​ಕಾರಿಗಳಿಗೆ ತಿಳಿಸಬಹುದಾಗಿದೆ.

ಅಪ್ರಾಪ್ತ ವಯಸ್ಸಿನ ಮಗುವಿನ ಹೆಸರು, ಗುರುತು ಮತ್ತು ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ, ದೃಶ್ಯ, ಮುದ್ರಣ ಮಾಧ್ಯಮಗಳಲ್ಲಿ ಹಾಕುವುದು ಫೋಕ್ಸೋ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಸಂಜ್ಞೆಯ ಅಪರಾಧವಾಗಿರುತ್ತದೆ. ಪ್ರಕರಣದ ಕುರಿತು ಸಂದೇಶಗಳನ್ನು ಕಳುಹಿಸುವ ಮೊದಲು ಸಂದೇಶದ ಸತ್ಯಾಸತ್ಯತೆಯನ್ನು ಪರಿಶೀಲಿಸಿಕೊಳ್ಳುವುದು, ಪ್ರಚೋದನಕಾರಿ ಸಂದೇಶಗಳನ್ನು ಕಳುಹಿಸಿ ಸಮಾಜದ ಸ್ವಾಸ್ಥ್ಯ ಕದಡುವ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದೆಂದು ಪೊಲೀಸ್‌ ಅ​ಧೀಕ್ಷಕರು ತಿಳಿಸಿದ್ದಾರೆ.
 

Follow Us:
Download App:
  • android
  • ios