ಆಟೋದಲ್ಲಿ ತನ್ನ ಮೇಲೆ ಅತ್ಯಾಚಾರ ಆಯ್ತು ಎಂದು ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ದಾಖಲಿಸಿದ್ದಾಳೆ. ಆರೋಪಿಗಳು ಅತ್ಯಾಚಾರದ ವಿಷಯವನ್ನು ಯಾರ ಬಳಿಯೂ ಹೇಳಿಕೊಳ್ಳದಂತೆ ಬೆದರಿಕೆ ಹಾಕಿದ್ದರು

ಮುಂಬೈ: 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರನಾಥ್ (Ambernath in Maharashtra) ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ಬಾಲಕಿ ಸೇರಿದಂತೆ ಮೂವರು ಅಪ್ರಾಪ್ತ ಬಾಲಕರನ್ನು ಸೇರಿದಂತೆ ಐವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಅಂಬರನಾಥ್ ಪ್ರದೇಶದ ನಿವಾಸಿಯಾಗಿರುವ ಸಂತ್ರಸ್ತೆಯನ್ನು ಆರೋಪಿ ಬಾಲಕಿ ಮಾತನಾಡೋದಾಗಿ ಹೇಳಿ ಕರೆದುಕೊಂಡು ಹೋಗಿದ್ದಾಳೆ. ಮೊದಲೇ ಮೂವರು ಅಪ್ರಾಪ್ತರು ಇವರಿಗಾಗಿ ಕಾಯುತ್ತಾ ಕುಳಿತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಟೋದಲ್ಲಿ ತನ್ನ ಮೇಲೆ ಅತ್ಯಾಚಾರ ಆಯ್ತು ಎಂದು ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ದಾಖಲಿಸಿದ್ದಾಳೆ. ಆರೋಪಿಗಳು ಅತ್ಯಾಚಾರದ ವಿಷಯವನ್ನು ಯಾರ ಬಳಿಯೂ ಹೇಳಿಕೊಳ್ಳದಂತೆ ಬೆದರಿಕೆ ಹಾಕಿದ್ದರು. ಮನೆಗೆ ಬಂದ ಸಂತ್ರಸ್ತೆ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಪೋಷಕರ ಮುಂದೆ ಹೇಳಿದ್ದಾಳೆ. ಭಾರತೀಯ ನ್ಯಾಯ ಸಂಹಿತಾ ಪೋಕ್ಸೋ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಕಂಡಕ್ಟರ್ ಎದೆ, ಪ್ರೈವೇಟ್ ಪಾರ್ಟ್ ಟಚ್ ಮಾಡಿದ; ಬಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ಇಬ್ಬರು ವಯಸ್ಕ ಆರೋಪಿಗಳನ್ನು ಪೊಲೀಸರ ಕಸ್ಟಡಿಗೆ ನೀಡಲಾಗಿದೆ. ಅಪ್ರಾಪ್ತ ಆರೋಪಿಗಳನ್ನು ಬಾಲಗೃಹಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ಅಂಬರನಾಥ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಗನ್ನಾಥ್ ಕಲಾಸ್ಕರ್ ತಿಳಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ 3ನೇ ಕ್ಲಾಸ್ ಬಾಲಕಿ ಮೇಲೆ ರೇಪ್

ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಮೂವರು ಅಪ್ರಾಪ್ತರು ಸೇರಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮೂವರು ಬಾಲಕರು ಮೊಬೈಲ್‌ನಲ್ಲಿ ಅಶ್ಲೀಲ ಸಿನಿಮಾ ನೋಡಿ, ಅದರ ಮರುಸೃಷ್ಟಿಗೆ ಪ್ರಯತ್ನಿಸಿದ್ದಾರೆ. 3ನೇ ಕ್ಲಾಸ್ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಗೈದು, ಕೊಲೆ ಮಾಡಿದ್ದಾರೆ. ನಂತರ ಶವವನ್ನು ಕಾಲುವೆಗೆ ಎಸೆದಿದ್ದರು. ನಂತರ ಓರ್ವ ಬಾಲಕ ನಡೆದ ಘಟನೆ ಬಗ್ಗೆ ಪೋಷಕರಿಗೆ ಹೇಳಿದ್ದಾನೆ. ಬಾಲಕನ ತಂದೆ ಸಂಬಂಧಿಯ ಸಹಾಯದಿಂದ ಕಾಲುವೆಗೆ ಎಸೆಯಲಾಗಿದ್ದ ಶವವನ್ನು ಎತ್ತಿ, ಬೈಕ್‌ನಲ್ಲಿ ಸಾಗಿಸಿ ಕೃಷ್ಣಾ ನದಿಗೆ ಎಸೆದಿದ್ದಾನೆ. ಪೊಲೀಸರು ಪೋಷಕರಿಬ್ಬರನ್ನು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬಾಲಕಿಯ ಶವಕ್ಕೆ ಹುಡುಕಾಟ ನಡೆಸಲಾಗುತ್ತಿದೆ.

ಪೋರ್ನ್‌ ವಿಡಿಯೋ ಮರುಸೃಷ್ಟಿಗೆ ಮೂವರು ಅಪ್ರಾಪ್ತರಿಂದ 3ನೇ ಕ್ಲಾಸ್ ಬಾಲಕಿ ಮೇಲೆ ರೇಪ್, ಕೊಲೆ