ಬನ್ನೇರುಘಟ್ಟ : 2ನೇ ಮಹಡಿಯಿಂದ ಬಿದ್ದು 12 ವರ್ಷದ ವಿದ್ಯಾರ್ಥಿ ದಾರುಣ ಸಾವು
ಅಪಾರ್ಟ್‌ಮೆಂಟ್ ಒಂದರ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ 12 ವರ್ಷದ ಬಾಲಕ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ದುರ್ಘಟನ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು, (ಜುಲೈ.30): ಆಟವಾಡುತ್ತಿದ್ದ 12 ವರ್ಷದ ಬಾಲಕ ಆಕಸ್ಮಿಕವಾಗಿ ಅಪಾರ್ಟ್‌ಮೆಂಟ್ ನ 2ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದ ಎಂಎಲ್ ಎ ಲೇಔಟ್‌ನ ಸಿವಿಕೆ ಮೀನಾಕ್ಷಿ ಅಪಾರ್ಟ್ ಮೆಂಟ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, 7ನೇ ತರಗತಿ ವಿದ್ಯಾರ್ಥಿ ಅದಿತ್ ಮೃತಪಟ್ಟ ಬಾಲಕ.
ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಶನಿವಾರ ಆಗಿದ್ದರಿಂದ ಶಾಲೆಯಿಂದ ಮಧ್ಯಾಹ್ನ ಮರಳಿದ ನಂತರ 2ನೇ ಮಹಡಿಯ ಬಾಲ್ಕನಿಯಲ್ಲಿ ಅದಿತ್ ಆಟವಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.