ನವದೆಹಲಿ(ಜು.24): ಇಡೀ ದೇಶವೇ ತಲೆ ತಗ್ಗಿಸುವಂತಹ ಮತ್ತೊಂದು ಅತ್ಯಾಚಾರ ಪ್ರಕರಣ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ದೆಹಲಿಯಲ್ಲಿನ ಛತ್ತರ್‌ಪುರ್‌ದಲ್ಲಿನ ದೇಶದ ಅತಿದೊಡ್ಡ ಕೋವಿಡ್ 19 ಆಸ್ಪತ್ರೆಯಲ್ಲಿ ದಾಖಲಾಗಿದ್ದ 14 ವರ್ಷದ ಬಾಲಕಿಯ ಮೇಲೆ ಅದೇ ಸೆಂಟರ್‌ನಲ್ಲಿ ದಾಖಲಾಗಿದ್ದ 19 ವರ್ಷದ ಯುವಕ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಸರ್ದಾರ್ ಪಟೇಲ್ ಕೋವಿಡ್ ಕೇರ್ ಸೆಂಟರ್‌ನಲ್ಲಿ ಈ ಹೇಯ ಕೃತ್ಯ ನಡೆದಿದ್ದು, ಅತ್ಯಾಚಾರ ಮಾಡಿದ ವ್ಯಕ್ತಿ ಹಾಗೂ ಅಲ್ಲಿಯೇ ಗಾರ್ಡ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಅತ್ಯಾಚಾರ ಮಾಡುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾನೆ ಎನ್ನಲಾಗಿದೆ. ಈ ಇಬ್ಬರು ಕೊರೋನಾ ಸೋಂಕಿತರಾಗಿರು. ಅತ್ಯಾಚಾರಿ ಮಾಡಿದವ ಹಾಗೂ ಆತನ ಸ್ನೇಹಿತನನ್ನು ಡೆಲ್ಲಿ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಬಾಲಕಿಯನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಅಲ್ಲಿಯೇ ಆಕೆಗೆ ಕೋವಿಡ್ 19 ಚಿಕಿತ್ಸೆ ನೀಡಲಾಗುತ್ತಿದೆ. ಅತ್ಯಾಚಾರ ಆರೋಪಿಗಳು ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದು, ಅವರನ್ನು ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಡೆಲ್ಲಿ ದಕ್ಷಿಣ ವಿಭಾಗದ ಹೆಚ್ಚುವರಿ ಡಿಸಿಪಿ ಪರ್ವೀಂದರ್ ಸಿಂಗ್ ಹೇಳಿದ್ದಾರೆ.

ತನ್ನನ್ನು ಕೊಲ್ಲಲು ಯತ್ನಿಸಿದ ತಂದೆಯನ್ನೇ ಕೊಂದ 15 ವರ್ಷದ ಬಾಲಕಿ..!

ಈ ಘಟನೆ ಜುಲೈ 15ರ ರಾತ್ರಿ ನಡೆದಿದ್ದು, ಒಂದು ವಾರದ ಬಳಿಕ ಇದು ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೈದಾನ್ ಗಾರ್ಹಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ದಕ್ಷಿಣ ದೆಹಲಿಯ ಛತ್ರಾಪುರದಲ್ಲಿ 10200 ಬೆಡ್‌ಗಳ ವ್ಯವಸ್ಥೆ ಇರುವ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಕೇವಲ 250 ಬೆಡ್‌ಗಳು ಮಾತ್ರ ಭರ್ತಿಯಾಗಿವೆ. ಸಾಕಷ್ಟು ಕಡೆ ಖಾಲಿ ಜಾಗ ಇದ್ದಿದ್ದರಿಂದ ದುಷ್ಟರು ಈ ಕುಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. 

ಅತ್ಯಚಾರ ಮಾಡಿದಾತ ತನ್ನ ಸ್ನೇಹಿತನಿಗೆ ಕಾವಲಿರುವಂತೆ ಹೇಳಿ ಸ್ನಾನಗೃಹದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ತನಿಖಾ ತಂಡದ ಎದುರು ಬಾಯಿ ಬಿಟ್ಟಿದ್ದಾನೆ. ಘಟನೆ ನಡೆದ ಮರುದಿನ ಬಾಲಕಿ ಈ ವಿಚಾರವನ್ನು ತಿಳಿಸಿದ್ದಾಳೆ. ತಕ್ಷಣ ವಿಚಾರಣೆ ನಡೆಸಿ ಶಂಕಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.