ಚಿಕ್ಕಬಳ್ಳಾಪುರ: ಮೊಬೈಲ್ ಬಿಟ್ಟು ಓದು ಎಂದಿದ್ದಕ್ಕೆ ನದಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ತಡರಾತ್ರಿ ಆಟವಾಡುತ್ತಿದ್ದ ಮಗಳಿಗೆ ಓದುವಂತೆ ತಾಯಿ ಬುದ್ಧಿವಾದ ಹೇಳಿದ್ದು, ಓದಲಿಲ್ಲವೆಂದರೆ ಮನೆ ಬಿಟ್ಟು ಹೋಗುವಂತೆ ತಾಕೀತು ಮಾಡಿದ್ದರು. ಇದೇ ಮಾತನ್ನು ಗಂಭೀರವಾಗಿ ತೆಗೆದುಕೊಂಡ ವಿದ್ಯಾಶ್ರೀ ಉತ್ತರ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಿಕ್ಕಬಳ್ಳಾಪುರ(ಜು.30): ಚೆನ್ನಾಗಿ ಓದುವಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಬೇಸತ್ತು 10ನೇ ತರಗತಿ ಬಾಲಕಿಯೊಬ್ಬಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಹೊರವಲಯದಲ್ಲಿ ನಡೆದಿದೆ. ವಿದ್ಯಾಶ್ರೀ (15) ಮೃತ ದುರ್ದೈವಿ.
ಈಕೆ ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಅದೇ ಶಾಲೆಯಲ್ಲಿ ತಾಯಿ ಕೂಡ ಶಿಕ್ಷಕಿಯಾಗಿದ್ದರು. ಆದರೆ ವಿದ್ಯಾಶ್ರೀ ಸರಿಯಾಗಿ ಓದದೆ, ಮೊಬೈಲ್‌ನಲ್ಲಿ ಆಟವಾಡಿಕೊಂಡಿರುತ್ತಿದ್ದಳಂತೆ. ತಡರಾತ್ರಿ ಆಟವಾಡುತ್ತಿದ್ದ ಮಗಳಿಗೆ ಓದುವಂತೆ ತಾಯಿ ಬುದ್ಧಿವಾದ ಹೇಳಿದ್ದು, ಓದಲಿಲ್ಲವೆಂದರೆ ಮನೆ ಬಿಟ್ಟು ಹೋಗುವಂತೆ ತಾಕೀತು ಮಾಡಿದ್ದರು. ಇದೇ ಮಾತನ್ನು ಗಂಭೀರವಾಗಿ ತೆಗೆದುಕೊಂಡ ವಿದ್ಯಾಶ್ರೀ ಉತ್ತರ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಂಡ್ಯದ ಗಂಡು- ಬೆಂಗಳೂರು ಹುಡುಗಿ ಫೇಸ್‌ಬುಕ್ ಲವ್: ತನು-ಮನ-ಧನ ಅರ್ಪಿಸಿದ ಹುಡುಗಿ ಸತ್ತೇ ಹೋದ್ಲು.!
ವಿದ್ಯಾಶ್ರೀ ಸೀದಾ ಮನೆಯಿಂದ ಹೊರ ಹೋಗಿ ಗೌರಿಬಿದನೂರು ನಗರದ ಬೈಪಾಸ್ ರಸ್ತೆಯ ಉತ್ತರಪಿನಾಕಿನಿ ನದಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗೌರಿಬಿದನೂರು ಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.